ಏ.9 ರಿಂದ ಭಗಂಡೇಶ್ವರ, ತಲಕಾವೇರಿ ದೇವಾಲಯ ವಾರ್ಷಿಕ ಉತ್ಸವ
ಮಡಿಕೇರಿ ಏ.08: ಮಡಿಕೇರಿ ತಾಲ್ಲೂಕು, ಭಾಗಮಂಡಲದಲ್ಲಿರುವ ಶ್ರೀಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ 2022ನೇ ಸಾಲಿನ ವಾರ್ಷಿಕ ಉತ್ಸವವು ಏಪ್ರಿಲ್, 09, 10 ಮತ್ತು 11 ರಂದು ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದೆ.
ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.
ಭಗಂಡೇಶ್ವರ ದೇವಾಲಯ ಹಾಗೂ ತ್ರಿವೇಣಿ ಸಂಗಮ ಸುತ್ತಮುತ್ತ ಶುಚಿತ್ವಕ್ಕೆ ಹೆಚ್ಚಿನ ಗಮನ ನೀಡಲಾಗಿದ್ದು, ಈಗಾಗಲೇ ಎಲ್ಲಾ ಗಿಡ ಗಂಟೆಗಳು ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯ ವಸ್ತುಗಳನ್ನು ತೆಗೆಸಿ ಪರಿಸರ ಸ್ವಚ್ಚಗೊಳಿಸಲಾಗಿದೆ. ಪ್ಲಾಸ್ಟಿಕ್ ಚೀಲಗಳನ್ನು ಬಳಸದೇ ಬಟ್ಟೆ ಬ್ಯಾಗ್‌ಗಳನ್ನು ಬಳಸಲು ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಮಾಡಿದೆ. ಶುದ್ದ ಕುಡಿಯುವ ನೀರು, ವೈದ್ಯಕೀಯ ಸೇವೆ, ಶೌಚಾಲಯ ವ್ಯವಸ್ಥೆ ಹಾಗೂ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ.

ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಏಪ್ರಿಲ್, 09 ರಂದು ಭಗಂಡೇಶ್ವರ ದೇವರಿಗೆ ಬೆಳಗ್ಗೆ 6 ಗಂಟೆಯಿಂದ 7.30 ಗಂಟೆಯವರೆಗೆ ಗಣಪತಿ ಹೋಮ. ಬೆಳಗ್ಗೆ 8 ಯಿಂದ 9 ಗಂಟೆಯವರೆಗೆ ಏಕದಶ ರುದ್ರಾಭಿಷೇಕ. ಬೆಳಗ್ಗೆ 9 ಗಂಟೆಯಿಂದ 10.30ರ ವರೆಗೆ ನವಕ ಮತ್ತು 108 ಕಳಶಾಭಿಷೇಕ. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ. ಪ್ರಸಾದ ವಿನಿಯೋಗ ಮತ್ತು ಅನ್ನಸಂತರ್ಪಣೆ.
ಏಪ್ರಿಲ್, 10 ರಂದು ಸುಬ್ರಹ್ಮಣ್ಯ ದೇವರಿಗೆ ಬೆಳಗ್ಗೆ 6 ಗಂಟೆಯಿಂದ 7.30 ಗಂಟೆಯವರೆಗೆ ಕ್ಕೆ ಗಣಪತಿ ಹೋಮ. ಬೆಳಗ್ಗೆ 8 ಯಿಂದ 9 ಗಂಟೆಯವರೆಗೆ ದಾರಾಭಿಷೇಕ ಮತ್ತು ಕ್ಷೀರಾಭಿಷೇಕ. ಬೆಳಗ್ಗೆ 9 ಗಂಟೆಯಿಂದ 10.30ರ ವರೆಗೆ ನವಕ ಮತ್ತು 108 ಕಳಶಾಭಿಷೇಕ. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ. ಪ್ರಸಾದ ವಿತರಣೆ.

ಏಪ್ರಿಲ್, 11 ರಂದು ಮಹಾವಿಷ್ಣು ದೇವರಿಗೆ ಬೆಳಗ್ಗೆ 6 ಗಂಟೆಯಿಂದ 7.30 ಗಂಟೆಯವರೆಗೆ ಗಣಪತಿ ಹೋಮ. ಬೆಳಗ್ಗೆ 8 ರಿಂದ 9 ಗಂಟೆಯವರೆಗೆ ಪವಮಾನಾಭಿಷೇಕ. ಬೆಳಗ್ಗೆ 9 ಗಂಟೆಯಿಂದ 10.30 ರವರೆಗೆ ನವಕ ಮತ್ತು 108 ಕಳಶಾಭಿಷೇಕ. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ. ಪ್ರಸಾದ ವಿನಿಯೋಗ ವಿತರಣೆ.
ತಲಕಾವೇರಿ ದೇವಾಲಯ
ಏಪ್ರಿಲ್, 10 ರಂದು ಶ್ರೀತಲಕಾವೇರಿ ದೇವಾಲಯದಲ್ಲಿ ಬೆಳಗ್ಗೆ 9 ಗಂಟೆಯಿಂದ ಗಣಪತಿಹೋಮ, ಕಳಶಾಭಿಷೇಕ, ಪಂಚಗವ್ಯ, 108 ಕಳಶಾಭಿಷೇಕ. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಯಲಿದೆ ಎಂದು ಶ್ರೀ ಭಗಂಡೇಶ್ವರ - ತಲಕಾವೇರಿ ಮತ್ತು ಸಮೂಹ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
Recommended Video
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications