ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅ.17 ರಂದು ಕಾವೇರಿ ತೀರ್ಥೋದ್ಭವ: ಸರಳ, ಸಾಂಪ್ರದಾಯಿಕ ಆಚರಣೆ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಅಕ್ಟೋಬರ್ 13: ಕೋವಿಡ್-19 ಹಿನ್ನೆಲೆಯಲ್ಲಿ ಅಕ್ಟೋಬರ್ 17 ರಂದು ನಡೆಯುವ ತಲಕಾವೇರಿ ತೀರ್ಥೋದ್ಭವ ಜಾತ್ರಾ ಮಹೋತ್ಸವವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ಮಾತ್ರವೇ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ತಲಕಾವೇರಿ ತೀರ್ಥೋದ್ಭವ ಜಾತ್ರಾ ಮಹೋತ್ಸವ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಅವರು ಮಾತನಾಡಿದರು.

 ತಲಕಾವೇರಿ ತೀರ್ಥೋದ್ಭವ; ಹೊರಗಿನಿಂದ ಬಂದವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ತಲಕಾವೇರಿ ತೀರ್ಥೋದ್ಭವ; ಹೊರಗಿನಿಂದ ಬಂದವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

ಹಿಂದಿನ ವರ್ಷಗಳಿಗಿಂತ ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಮತ್ತು ಸರಳ ರೀತಿಯಲ್ಲಿ ತೀರ್ಥೋದ್ಭವವನ್ನು ಆಚರಿಸುವಂತಾಗಬೇಕು. ಹೆಚ್ಚು ಜನ ಸೇರಿದರೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು. ಅಕ್ಟೋಬರ್ 17 ರಂದು ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ನಡೆಯಲಿರುವ ಕಾವೇರಿ ಪವಿತ್ರ ತೀರ್ಥೋದ್ಭವವನ್ನು ವೀಕ್ಷಿಸಲು ಹೊರಜಿಲ್ಲೆ ಮತ್ತು ಹೊರರಾಜ್ಯದಿಂದ ಬರುವ ಭಕ್ತಾದಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಎಂದು ಶಾಸಕ ಕೆ.ಜಿ. ಬೋಪಯ್ಯ ತಿಳಿಸಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತೀ ಮುಖ್ಯ

ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತೀ ಮುಖ್ಯ

ಕೊಡಗು ಜಿಲ್ಲೆಯ ಜನತೆ ಪ್ರಸ್ತುತ ಪರಿಸ್ಥಿಯನ್ನು ಅರ್ಥಮಾಡಿಕೊಂಡು ಪ್ರವಾಸಿಗರು, ಹಿರಿಯರು, ಮಕ್ಕಳು, ಗರ್ಭಿಣಿ ಮಹಿಳೆಯರು, ಇನ್ನಿತರ ಆರೋಗ್ಯ ಸಮಸ್ಯೆಯಿರುವವರು ಮನೆಯಿಂದಲೇ ಮಾಧ್ಯಮಗಳ ಮೂಲಕ ನೇರಪ್ರಸಾರ ವೀಕ್ಷಣೆ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಜಿಲ್ಲೆಯ ಜನತೆಯಲ್ಲಿ ಕಳಕಳಿಯ ಮನವಿ ಮಾಡಿದ್ದಾರೆ. ಕೋವಿಡ್-19 ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತೀ ಮುಖ್ಯವಾಗಿದೆ. ತೀರ್ಥೋದ್ಭವ ಸಂದರ್ಭ ಹೆಚ್ಚಿನ ಜನ ಆಗಮಿಸಿದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಸರ್ಕಾರದ ಮಾರ್ಗಸೂಚಿಗಳ ಕಡ್ಡಾಯ ಪಾಲನೆ

ಸರ್ಕಾರದ ಮಾರ್ಗಸೂಚಿಗಳ ಕಡ್ಡಾಯ ಪಾಲನೆ

ಈ ಸಂಬಂಧ ವಿರಾಜಪೇಟೆ ಕ್ಷೇತ್ರ ಶಾಸಕರಾದ ಕೆ.ಜಿ ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಈಗಾಗಲೇ ಸಭೆ ನಡೆದಿದ್ದು, ಸಭೆಯ ನಿರ್ಧಾರದಂತೆ ತೀರ್ಥೋದ್ಭವ ಜಾತ್ರಾ ಮಹೋತ್ಸವವನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ತಲಕಾವೇರಿ ಭಾಗಮಂಡಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ತಮ್ಮಯ್ಯ ಅವರು ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ ಕೋವಿಡ್-19 ಸಂಬಂಧ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದು ಹೇಳಿದರು.

ಮೊಬೈಲ್ ತಪಾಸಣಾ ಘಟಕ

ಮೊಬೈಲ್ ತಪಾಸಣಾ ಘಟಕ

ಜಿಲ್ಲಾಧಿಕಾರಿ ಅವರು ಮಾತನಾಡಿ, ಸ್ವಯಂ ಸೇವಕರು, ಪೂಜೆ ಸಲ್ಲಿಸುವ ಅರ್ಚಕರು ಭಾಗಮಂಡಲ ವ್ಯಾಪ್ತಿಯ ವರ್ತಕರು ಸೇರಿದಂತೆ ಮತ್ತಿತರರಿಗೆ ಜಾತ್ರಾ ಮಹೋತ್ಸವಕ್ಕೂ ಮುಂಚಿತವಾಗಿ ಕೋವಿಡ್ ಪರೀಕ್ಷೆಯನ್ನು ಆರ್‍ಟಿಪಿಸಿಆರ್ ಮುಖಾಂತರ ನಡೆಸಬೇಕು. 2 ಮೊಬೈಲ್ ತಪಾಸಣಾ ಘಟಕವನ್ನು ಭಾಗಮಂಡಲಕ್ಕೆ ಕಳುಹಿಸುವ ಕಾರ್ಯವಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಾಕಿ ಇರುವ ಕೆಲಸ ಶೀಘ್ರವೇ ಪೂರ್ಣ

ಬಾಕಿ ಇರುವ ಕೆಲಸ ಶೀಘ್ರವೇ ಪೂರ್ಣ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್ ಅವರು ಮಾತನಾಡಿ, ಅಕ್ಟೋಬರ್ 14 ಮತ್ತು 15 ರಂದು ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷಾ ಕಾರ್ಯ ನಡೆಸಲಾಗುವುದು ಎಂದು ತಿಳಿಸಿದರು. ಭಾಗಮಂಡಲ ತಲಕಾವೇರಿಯಲ್ಲಿನ ಬೀದಿ ದೀಪಗಳನ್ನು ಸರಿಪಡಿಸಬೇಕು. ಲೋಕೋಪಯೋಗಿ ಇಲಾಖೆ ವತಿಯಿಂದ ಬಾಕಿ ಇರುವ ಕೆಲಸವನ್ನು ಶೀಘ್ರವೇ ಪೂರ್ಣಗೊಳಿಸಬೇಕು. ಇದರೊಂದಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ರಸ್ತೆ ಬದಿಯಲ್ಲಿರುವ ಮರಗಳನ್ನು 2 ದಿನಗಳ ಒಳಗಾಗಿ ತೆರವುಗೊಳಿಸುವಂತೆ ಸೂಚನೆ ನೀಡಿದರು.

Recommended Video

Namma Metro ಪ್ರಯಾಣಿಕರು ಇನ್ಮುಂದೆ ಪರದಾಡುವಹಾಗಿಲ್ಲ | Oneindia Kannada
ಬಸ್ ನಲ್ಲಿ ಮಿತಿಗಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಳ್ಳಬಾರದು

ಬಸ್ ನಲ್ಲಿ ಮಿತಿಗಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಳ್ಳಬಾರದು

ಎಂದಿನಂತೆ ಸಾಮಾನ್ಯ ಮಾರ್ಗದ ಬಸ್ ಗಳು ಸಂಚರಿಸಲಿವೆ. ಬಸ್ ನಲ್ಲಿ ಮಿತಿಗಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಳ್ಳದಂತೆ ಚಾಲಕರು ಮತ್ತು ನಿರ್ವಾಹಕರಿಗೆ ಸೂಕ್ತ ನಿರ್ದೇಶನ ನೀಡುವಂತೆ ಜಿಲ್ಲಾಧಿಕಾರಿ ಅವರು ಮಡಿಕೇರಿ ಕೆ.ಎಸ್.ಆರ್‍.ಟಿ.ಸಿ ಘಟಕ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಉಪವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡೂ, ಮಡಿಕೇರಿ ತಹಶೀಲ್ದಾರ್ ಮಹೇಶ್, ಲೋಕೋಪಯೋಗಿ ಇಲಾಖೆಯ ಇಇ ಮದನ್ ಮೋಹನ್, ಎಇಇ ಶಿವರಾಂ, ಚೆಸ್ಕಾಂ ಇಇ ಸೋಮಶೇಖರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್, ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ದಿವಾಕರ್, ಮೇದಪ್ಪ, ಅನೂಪ್ ಮಾದಪ್ಪ, ಮಡಿಕೇರಿ ಕೆ.ಎಸ್.ಆರ್‍.ಟಿ.ಸಿ ಘಟಕ ವ್ಯವಸ್ಥಾಪಕರಾದ ಗೀತಾ, ಭಗಂಡೇಶ್ವರ ತಲಕಾವೇರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ, ಭಾಗಮಂಡಲ ಪಿಡಿಒ ಅನಿತಾ, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ದೇವಾಲಯ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಎಸ್.ಎಂ ಕಾವೇರಪ್ಪ, ಉದಿಯಂಡ ಸುಭಾಷ್ ಇತರರು ಹಾಜರಿದ್ದರು.

English summary
"The Talakauveri Teerthodbhava Jatre will be held on October 17, A Simple And Traditional Celebration in the wake of Covid-19." Kodagu DC Said That.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X