ಕೊಡಗು ಜಿಲ್ಲೆ ತಾಲೂಕುವಾರು ಮಳೆ ವಿವರ; ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?
ಮಡಿಕೇರಿ, ಅಕ್ಟೋಬರ್ 16: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ ಮಳೆ 9.72 ಮಿ.ಮೀ ದಾಖಲಾಗಿದೆ. ಕಳೆದ ವರ್ಷ ಇದೇ ದಿನ 23.23 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ 2466.30 ಮಿ.ಮೀ ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 2636.94 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 13.10 ಮಿ.ಮೀ. ಕಳೆದ ವರ್ಷ ಇದೇ ದಿನ 18.10 ಮಿ.ಮೀ ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3502.63 ಮಿ.ಮೀ. ಮಳೆ ದಾಖಲಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 3586.45 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ, ಸೋಮವಾರಪೇಟೆ ಮಳೆ ವಿವರ
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.58 ಮಿ.ಮೀ. ಕಳೆದ ವರ್ಷ ಇದೇ ದಿನ 15.27 ಮಿ.ಮೀ ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2215.26 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2482.06 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11.47 ಮಿ.ಮೀ. ಕಳೆದ ವರ್ಷ ಇದೇ ದಿನ 36.33 ಮಿ.ಮೀಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1681.02 ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1842.32 ಮಿ.ಮೀ. ಮಳೆಯಾಗಿತ್ತು.

ಹೋಬಳಿವಾರು ಮಳೆ ವಿವರ
ಜಿಲ್ಲೆಯಲ್ಲಿ ಮಡಿಕೇರಿ ಕಸಬಾ 8.20, ನಾಪೋಕ್ಲು 15, ಭಾಗಮಂಡಲ 29.20, ವಿರಾಜಪೇಟೆ ಕಸಬಾ 34.60, ಹುದಿಕೇರಿ 11, ಶ್ರೀಮಂಗಲ 3, ಪೊನ್ನಂಪೇಟೆ 4.20, ಅಮ್ಮತ್ತಿ 12, ಬಾಳೆಲೆ 4, ಸೋಮವಾರಪೇಟೆ ಕಸಬಾ 3.20, ಶನಿವಾರಸಂತೆ 4, ಶಾಂತಳ್ಳಿ 6, ಕೊಡ್ಲಿಪೇಟೆ 12.50, ಕುಶಾಲನಗರ 0.80, ಸುಂಟಿಕೊಪ್ಪ 1 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ
ಇಂದು ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಿದ್ದು, ಇಂದಿನ ನೀರಿನ ಮಟ್ಟ 2858.32 ಅಡಿ ಆಗಿದೆ. ಕಳೆದ ವರ್ಷ ಇದೇ ದಿನ 2857.81 ಅಡಿ ಇತ್ತು. ಹಾರಂಗಿಯಲ್ಲಿ ದಾಖಲಾದ ಮಳೆ 1.20 ಮಿ.ಮೀ ಇದ್ದು, ಕಳೆದ ವರ್ಷ ಇದೇ ದಿನ 45.20 ಮಿ.ಮೀ, ಮಳೆ ದಾಖಲಾಗಿತ್ತು. ಇಂದಿನ ನೀರಿನ ಒಳಹರಿವು 2308 ಕ್ಯುಸೆಕ್ ಇದೆ. ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 961 ಕ್ಯುಸೆಕ್ ಇತ್ತು. ಇಂದು ನದಿಗೆ 750, ನಾಲೆಗೆ 700 ಕ್ಯುಸೆಕ್ ನೀರು ಹರಿಬಿಡಲಾಗಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿಯೂ ಮಳೆಯ ಆರ್ಭಟ ಮುಂದುವರೆದಿದೆ. ಉತ್ತರ ಹಾಗೂ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ವಾಯುಭಾರ ಕುಸಿತದಿಂದ ಉಂಟಾಗಿರುವ ಮಳೆ ಇನ್ನೂ ಕೆಲ ದಿನಗಳು ಮುಂದುವರೆಯಲಿದೆ ಎಂದು ತಿಳಿದುಬಂದಿದೆ.












Click it and Unblock the Notifications