ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನಲ್ಲಿ ಆಶಾಭಾವ ಮೂಡಿಸಿದ ಮುಂಗಾರು...!

|
Google Oneindia Kannada News

ಮಡಿಕೇರಿ, ಜುಲೈ 6: ಕೊಡಗಿನಲ್ಲಿ ಮುಂಗಾರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ಮೋಡ ಕವಿದ ವಾತಾವರಣದ ನಡುವೆ ಆಗೊಮ್ಮೆ ಈಗೊಮ್ಮೆ ಜೋರಾಗಿ ಸುರಿಯುವ ಮಳೆ ಜನರಲ್ಲಿ ಆಶಾಭಾವನೆ ಮೂಡಿಸುತ್ತಿದೆ.

ಮಳೆಯ ಆರ್ಭಟ ಹೆಚ್ಚಾದರೆ ಈಗಿರುವ ಪರಿಸ್ಥಿತಿಯಲ್ಲಿ ಬರೆ, ಗುಡ್ಡ, ರಸ್ತೆ ಕುಸಿಯುವ ಭಯವೂ ಇಲ್ಲದಿಲ್ಲ. ಆದರೆ ಇಷ್ಟರಲ್ಲೇ ಮಳೆ ಶುರುವಾಗಿ ಒಂದಷ್ಟು ಟಿಎಂಸಿ ನೀರು ಕೆಆರ್ ‌ಎಸ್‌ಗೆ ಹರಿದು ಹೋಗಬೇಕಿತ್ತು. ಜನವರಿಯಿಂದ ಇಲ್ಲಿವರೆಗೆ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲೇ ಇಲ್ಲ. ಜೂನ್ ಮೊದಲ ವಾರದಲ್ಲಿ ಮುಂಗಾರು ರಾಜ್ಯಕ್ಕೆ ಆಗಮಿಸುತ್ತದೆ ಎಂದು ಹೇಳಲಾಗುತ್ತಿತ್ತಾದರೂ ಆ ತಿಂಗಳಲ್ಲಿ ಮಳೆ ಸುರಿಯಲೇ ಇಲ್ಲ. ಜುಲೈ ತಿಂಗಳಿಂದ ಮುಂಗಾರು ಸ್ವಲ್ಪ ಮಟ್ಟಿಗೆ ಚೇತರಿಕೆ ಕಾಣಿಸುತ್ತಿದೆ.

 ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಬಿರುಕು, ಡಿಸಿ ಪರಿಶೀಲನೆ ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಬಿರುಕು, ಡಿಸಿ ಪರಿಶೀಲನೆ

ಕಳೆದೊಂದು ದಿನದಿಂದ ಜಿಲ್ಲೆಯಲ್ಲಿ ಉತ್ತಮವಾಗಿ ಮಳೆ ಸುರಿಯುತ್ತಿದ್ದು, ಭಾಗಮಂಡಲದಲ್ಲಿ ಶನಿವಾರ ಬೆಳಗ್ಗಿನವರೆಗೆ ಸುಮಾರು 117 ಮಿ.ಮೀ. ಮಳೆ ಸುರಿದ ಪರಿಣಾಮ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟದಲ್ಲಿ ಹೆಚ್ಚಳ ಕಂಡು ಬಂದಿದ್ದು, ಇದೇ ರೀತಿ ಉತ್ತಮ ಮಳೆಯಾದರೆ ಕಾವೇರಿ, ಲಕ್ಷ್ಮಣತೀರ್ಥ ನದಿಗಳು ತುಂಬಿ ಹರಿಯಲಿದೆ.

The monsoon brought hope to Kodagu

ಕಾವೇರಿ ನದಿ ಪಾತ್ರದ ನಾಪೋಕ್ಲು, ಮೂರ್ನಾಡು ಬಲಮುರಿ, ಸಿದ್ದಾಪುರ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗುತ್ತಿದ್ದು, ನದಿ ಪಾತ್ರದ ಜನ ಎಚ್ಚರಿಕೆಯಿಂದಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭಾರಿ ಮಳೆ: ಮೂಡಿಗೆರೆ ಶಾಲಾ, ಕಾಲೇಜುಗಳಿಗೆ ರಜೆಚಿಕ್ಕಮಗಳೂರಿನಲ್ಲಿ ಭಾರಿ ಮಳೆ: ಮೂಡಿಗೆರೆ ಶಾಲಾ, ಕಾಲೇಜುಗಳಿಗೆ ರಜೆ

ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದ್ದು, ಮಡಿಕೇರಿ, ವೀರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದೆಲ್ಲವನ್ನು ಗಮನಿಸಿದರೆ ಜಿಲ್ಲೆಯಾದ್ಯಂತ ಮುಂಗಾರು ತೀವ್ರತೆಯನ್ನು ಪಡೆದುಕೊಳ್ಳುವ ಮುನ್ಸೂಚನೆ ಕಂಡು ಬಂದಿದೆ. ಈಗಾಗಲೇ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ತಡೆಗೆ ತಂಡವನ್ನು ನಿಯೋಜಿಸಲಾಗಿದ್ದು, ಗುಡ್ಡ ಮತ್ತು ತಗ್ಗು ಪ್ರದೇಶದ ನಿವಾಸಿಗಳಿಗೆ ಎಚ್ಚರಿಕೆಯಿಂದಿರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 58.17 ಮಿ.ಮೀ. ಮಳೆ ಸುರಿದಿದೆ. ಮಡಿಕೇರಿ ತಾಲೂಕಿನಲ್ಲಿ 79.55 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ 57.82 ಮಿ.ಮೀ ಮತ್ತು ಸೋಮವಾರಪೇಟೆಯಲ್ಲಿ 37.13ಮಿ.ಮೀ ಮಳೆ ಸುರಿದಿದೆ. ಅತಿ ಹೆಚ್ಚು 117ಮಿ.ಮೀ ಭಾಗಮಂಡಲದಲ್ಲಿ ಅತಿ ಕಡಿಮೆ 16.80 ಮಿ.ಮೀ. ಮಳೆ ಕುಶಾಲನಗರದಲ್ಲಿ ಸುರಿದಿದೆ. ಜನವರಿಯಿಂದ ಇಲ್ಲಿಯವರೆಗೆ 541.50 ಮಿ.ಮೀ ಮಳೆ ಸುರಿದಿದ್ದರೆ, ಕಳೆದ ವರ್ಷ ಇದೇ ಅವಧಿಯಲ್ಲಿ 1363.72 ಮಿ.ಮೀ ಮಳೆಯಾಗಿತ್ತು.

ಕೊಡಗಿನಲ್ಲಿ ಮುಂಗಾರು ಚೇತರಿಕೆ: ಬರೆ, ಗುಡ್ಡ ಕುಸಿತದ ಭೀತಿಕೊಡಗಿನಲ್ಲಿ ಮುಂಗಾರು ಚೇತರಿಕೆ: ಬರೆ, ಗುಡ್ಡ ಕುಸಿತದ ಭೀತಿ

ಮಡಿಕೇರಿ ವ್ಯಾಪ್ತಿಯಲ್ಲಿ ಸ್ವಲ್ಪ ಹೆಚ್ಚಾಗಿಯೇ ಮಳೆ ಸುರಿಯುತ್ತಿರುವುದರಿಂದ ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯದ ಒಳಹರಿವು 725 ಕ್ಯುಸೆಕ್ ಇದ್ದು, ಗರಿಷ್ಠ 2,859 ಅಡಿಯ ಜಲಾಶಯದಲ್ಲಿ ಇದೀಗ 2810.62 ಅಡಿಯಷ್ಟಿದೆ. ಇದೇ ರೀತಿ ಮಳೆ ಮುಂದುವರೆದರೆ ಹಾರಂಗಿ ಜಲಾಶಯ ಶೀಘ್ರವೇ ಭರ್ತಿಯಾಗುವ ಸಾಧ್ಯತೆಯಿದೆ.

English summary
The monsoon is slowly recovering in the Kodagu, and the rain is giving people hope.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X