ಈ ಬಾರಿ ಮಡಿಕೇರಿಯಲ್ಲಿ ಸರಳ ಸಾಂಪ್ರದಾಯಿಕ ದಸರಾ ಆಚರಣೆ
ಮಡಿಕೇರಿ, ಅಕ್ಟೋಬರ್.09: ಮೈಸೂರು ದಸರಾಕ್ಕೆ ಯಾವ ರೀತಿಯ ಇತಿಹಾಸವಿದೆಯೋ ಅದೇ ರೀತಿ ಮಡಿಕೇರಿ ದಸರಾಗೂ ತನ್ನದೇ ಆದ ಇತಿಹಾಸವಿದೆ. ಜತೆಗೆ ಎಂತಹ ಸಂದರ್ಭದಲ್ಲಿಯೂ ಇಲ್ಲಿಯ ಆಚರಣೆ ನಿಂತಿಲ್ಲ.
ಹೀಗಿರುವಾಗ ಈ ಬಾರಿ ಮಹಾಮಳೆ ಮತ್ತು ಭೂಕುಸಿತದಿಂದ ತತ್ತರಿಸಿರುವ ಮಡಿಕೇರಿಯಲ್ಲಿ ದಸರಾವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ನಡೆಸಲು ತೀರ್ಮಾನಿಸಲಾಗಿದೆ.
ಮಡಿಕೇರಿ ದಸರಾ ಆಚರಣೆಗೆ 50 ಲಕ್ಷ ರೂ. ಮತ್ತು ಗೋಣಿಕೊಪ್ಪ ದಸರಾಗೆ 25 ಲಕ್ಷ ರೂ. ಅನುದಾನ ಬಿಡುಗಡೆ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ. ಮಹೇಶ್ ಹೇಳಿದ್ದು, ದಸರಾವನ್ನು ಸರಳ, ಸಾಂಪ್ರದಾಯಿಕವಾಗಿ ಆಚರಿಸಲು ಮನವಿ ಮಾಡಿಕೊಂಡಿದ್ದಾರೆ.
ಇನ್ನು ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯೇ ದಶಮಂಟಪಗಳು. ಈ ಮಂಟಪಗಳ ತಯಾರಿಗೆ ಲಕ್ಷಾಂತರ ಹಣ ವ್ಯಯ ಮಾಡಬೇಕಾಗುತ್ತದೆ. ಪ್ರತಿಯೊಂದು ಸಮಿತಿಯ ಸದಸ್ಯರು ಹಗಲು ರಾತ್ರಿ ಎನ್ನದೆ ಓಡಾಡಿ, ಜನರಿಂದ ಹಣ ಸಂಗ್ರಹಿಸಿ ಮಂಟಪಗಳನ್ನು ನಿರ್ಮಾಣ ಮಾಡುತ್ತಿದ್ದರು. ಮುಂದೆ ಓದಿ...

ಮಹೇಶ್ ಜೈನಿ ಮನವಿ
ಈ ಬಾರಿ ಕೊಡಗಿನ ಜನ ಸಂಕಷ್ಟದಲ್ಲಿದ್ದು, ಚಂದಾ ನೀಡುವ ಪರಿಸ್ಥಿತಿಯಲ್ಲಿ ಜನರಿಲ್ಲ. ಹೀಗಾಗಿ ಸರ್ಕಾರವೇ ಒಂದಷ್ಟು ಹೆಚ್ಚಿನ ಅನುದಾನ ನೀಡಬೇಕು ಎನ್ನುವುದು ಮಡಿಕೇರಿ ನಗರ ದಸರಾ ಸಮಿತಿಯ ಕಾರ್ಯಾಧ್ಯಕ್ಷರಾದ ಮಹೇಶ್ ಜೈನಿ ಅವರ ಮನವಿಯಾಗಿದೆ

ಈ ಬಾರಿ ದಸರಾ ಕಳೆಯಿಲ್ಲ
ಪ್ರತಿವರ್ಷವೂ ದಸರಾಕ್ಕೆ ಮಡಿಕೇರಿ ನವವಧುವಂತೆ ಸಿಂಗಾರಗೊಳ್ಳುತ್ತಿತ್ತು. ಆದರೆ ಈ ಬಾರಿ ದಸರಾ ಕಳೆಯಿಲ್ಲ. ಜತೆಗೆ ಆಗಾಗ್ಗೆ ಮಳೆ ಸುರಿಯುತ್ತಿರುವುದು ದಸರಾ ಸಂಭ್ರಮಕ್ಕೆ ಅಡ್ಡಿಯಾಗುವ ಲಕ್ಷಣಗಳು ಕಂಡು ಬರುತ್ತಿದೆ.
ಈಗಾಗಲೇ ಪ್ರವಾಹದ ಹೊಡೆತಕ್ಕೆ ಸಿಲುಕಿ ತೊಂದರೆ ಅನುಭವಿಸಿರುವ ಜನಕ್ಕೆ ಯಾವುದರ ಬಗ್ಗೆಯೂ ಆಸಕ್ತಿ ಇಲ್ಲದಂತಾಗಿದೆ. ಆದರೂ ಸಾಂಪ್ರದಾಯಿಕವಾಗಿ ನಡೆದು ಬಂದಿರುವ ದಸರಾವನ್ನು ಆಚರಿಸಲೇಬೇಕಾಗಿರುವುದರಿಂದ ಎಲ್ಲವನ್ನೂ ಸರಳವಾಗಿ ಮಾಡಲಾಗುತ್ತಿದೆ.

ಅ.10 ರಂದು ಮಡಿಕೇರಿ ದಸರಾಕ್ಕೆ ಚಾಲನೆ
ಮಡಿಕೇರಿ ದಸರಾ ಸೂತ್ರಧಾರಿಯಾಗಿರುವ ನಾಲ್ಕು ಶಕ್ತಿದೇವತೆಗಳ ಕರಗಗಳು ಅಕ್ಟೋಬರ್ 10 ರಂದು ಸಂಜೆ 5 ಗಂಟೆಗೆ ಮಹದೇವಪೇಟೆಯ ಪಂಪಿನ ಕೆರೆ ಬಳಿ ಪೂಜಾ ಕೈಂಕರ್ಯಗಳೊಂದಿಗೆ ಹೊರಡಲಿದ್ದು, ಮಡಿಕೇರಿ ದಸರಾಕ್ಕೆ ವಿದ್ಯುಕ್ತ ಚಾಲನೆ ದೊರೆಯಲಿದೆ.

ಕರಗಗಳನ್ನು ಬರಮಾಡಿಕೊಳ್ಳಲಿದೆ
ನಗರ ದಸರಾ ಸಮಿತಿಯು ಸಾಂಪ್ರದಾಯಿಕ ಪೂಜೆಯನ್ನರ್ಪಿಸಿ ನಗರ ಪ್ರದಕ್ಷಿಣೆಗೆ ಕರಗಗಳನ್ನು ಬರಮಾಡಿಕೊಳ್ಳಲಿದೆ. ಆ ನಂತರ ಒಂಬತ್ತು ದಿನಗಳ ಕಾಲ ನಗರದ ಪ್ರದಕ್ಷಿಣೆ ಮಾಡುವ ಕರಗಗಳು ವಿಜಯದಶಮಿಯಂದು ಬನ್ನಿ ಪೂಜೆ ನೆರವೇರಿಸುವ ಮೂಲಕ ದಸರಾಕ್ಕೆ ತೆರೆ ಬೀಳಲಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications