• search
  • Live TV
ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ಕೊಟ್ಟ ಕಾವೇರಿ

|
Google Oneindia Kannada News

ಮಡಿಕೇರಿ, ಅಕ್ಟೋಬರ್ 17: ಕೊಡಗಿನ ಕುಲದೇವಿ ಕಾವೇರಿ ಸೋಮವಾರ ಸಂಜೆ ಮೇಷ ಲಗ್ನದಲ್ಲಿ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ್ದಾಳೆ. ಈ ಕ್ಷಣಗಳಿಗಾಗಿ ಕಾಯುತ್ತಿದ್ದ ಮಂದಿ ಕಣ್ತುಂಬಿಸಿಕೊಂಡು ಕೃತಾರ್ಥರಾದರು.

ಪ್ರಧಾನ ಅರ್ಚಕ ಗುರುರಾಜಾಚಾರ್ ನೇತೃತ್ವದಲ್ಲಿ ಆರತಿ ಆಗುತ್ತಿದ್ದಂತೆ ಬ್ರಹ್ಮಕುಂಡಯಲ್ಲಿ 7:21ರ ಸಮಯದಲ್ಲಿ ಜೀವಜಲ ಉಕ್ಕಿದ್ದು, ತೀರ್ಥವನ್ನು ನೆರೆದವರ ಮೇಲೆ ಪ್ರೋಕ್ಷಿಸಿದರು. ಈ ಪವಿತ್ರ ಘಳಿಗೆಯನ್ನು ಕಣ್ತುಂಬಿಕೊಳ್ಳಲು ದೇಶದ ಮೂಲೆ ಮೂಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.

ಕಾವೇರಿ ತೀರ್ಥೋದ್ಭವ: ಕುಲದೇವಿಯ ದರ್ಶನಕ್ಕೆ ಹಾತೊರೆಯುತ್ತಿರುವ ಕೊಡವರು!ಕಾವೇರಿ ತೀರ್ಥೋದ್ಭವ: ಕುಲದೇವಿಯ ದರ್ಶನಕ್ಕೆ ಹಾತೊರೆಯುತ್ತಿರುವ ಕೊಡವರು!

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವದ ಸಂಭ್ರಮದಲ್ಲಿ ಕೊಡವ ಜನಾಂಗದವರು ಸಾಂಪ್ರದಾಯ ಹುಡುಗೆಯಲ್ಲಿ ಭಾಗವಹಿಸಿ ಪೂಜೆ ಸಲ್ಲಿಸಿದರು. 5:30ರಿಂದ ಪೂಜೆ ಪುನಸ್ಕಾರ ಆರಂಭಗೊಂಡಿತ್ತು. ಕಾವೇರಿ ಸಹಸ್ರನಾಮ, ಮಹಾ ಮಂಗಳಾರತಿ, ಕುಂಕುಮಾರ್ಚನೆ, ಮಹಾ ಸಂಕಲ್ಪ‌ಪೂಜೆ ಸೇರಿದಂತೆ ವಿವಿಧ ಪೂಜಾ ಕಾರ್ಯಗಳು ನಡೆದವು.

ಪ್ರತಿ ವರ್ಷವೂ ತುಲಾ ಸಂಕ್ರಮಣದಂದು ಸೂರ್ಯನು ತುಲಾ ರಾಶಿಗೆ ಪ್ರವೇಶಿಸುವ ಸಂಕ್ರಾಂತಿ ಮುಹೂರ್ತದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡುವುದು ಹಿಂದಿನಿಂದಲೂ ನಡೆದು ಬಂದಿದೆ. ಇನ್ನು ತಲಕಾವೇರಿಯಲ್ಲಿ ಉಗಮವಾಗುವ ಕಾವೇರಿ ನದಿಯಾಗಿ ಹರಿದು ಭಾಗಮಂಡಲ, ಬಲಮುರಿ, ಗುಹ್ಯ, ಕಣಿವೆ ಮೂಲಕ ಕೊಡಗಿನಿಂದ ಹೊರಹರಿದು ಬಳಿಕ ಕರ್ನಾಟಕದಲ್ಲಿ ಸುಮಾರು 381 ಕಿ.ಮೀ. ಹರಿದು ಆ ನಂತರ ತಮಿಳುನಾಡು, ಪಾಂಡಿಚೇರಿ ಮೂಲಕ 802 ಕಿ.ಮೀ. ಕ್ರಮಿಸಿ ಕಾವೇರಿ ಪಟ್ಟಣಂನಲ್ಲಿ ಬಂಗಾಳಕೊಲ್ಲಿಯನ್ನು ಸೇರುವುದರೊಂದಿಗೆ ತಾನು ಹರಿದಲೆಲ್ಲಾ ಪವಿತ್ರ ಕ್ಷೇತ್ರಗಳನ್ನು ಸೃಷ್ಟಿಸಿ, ಲಕ್ಷಾಂತರ ಮಂದಿಯ ಪಾಲಿಗೆ ಅನ್ನದಾತೆಯಾಗಿದ್ದಾಳೆ.

ಕಾವೇರಿ ನದಿ ಉಗಮದ ಬಗೆಗಿನ ಪುರಾಣದ ಕಥೆ

ಕೊಡಗಿನ ಬ್ರಹ್ಮಗಿರಿಬೆಟ್ಟ ಶ್ರೇಣಿಯಲ್ಲಿರುವ ತಲಕಾವೇರಿಯಲ್ಲಿ ಉಗಮವಾಗುವ ಕಾವೇರಿ ನದಿ ಭಾಗಮಂಡಲ, ಬಲಮುರಿ, ಗುಹ್ಯ, ಕಣಿವೆ ಮೂಲಕ ಕೊಡಗಿನಿಂದ ಹೊರಹರಿದು ಮೈಸೂರು ಜಿಲ್ಲೆಗಾಗಿ ಹಾಸನದ ಮೂಲಕ ಮಂಡ್ಯ ಜಿಲ್ಲೆಯನ್ನು ಪ್ರವೇಶಿಸುತ್ತದೆ. ಕಾವೇರಿ ನದಿ ಉಗಮದ ಬಗೆಗಿನ ಪುರಾಣದ ಕಥೆಯನ್ನು ನೋಡುವುದಾದರೆ ಕವೇರನ ಮಾನಸ ಪುತ್ರಿ ಕಾವೇರಿಯನ್ನು ಅಗಸ್ತ್ಯ ಮುನಿಗಳು ವಿವಾಹವಾಗುತ್ತಾರೆ. ಈ ವೇಳೆ ಕಾವೇರಿ ನನಗೆ ಜನಕಲ್ಯಾಣ ಮಾಡುವ ಅಭಿಲಾಷೆಯಿದ್ದು, ನೀವು ಸದಾ ನನ್ನೊಂದಿಗೆ ಇರಬೇಕು ಒಂದು ವೇಳೆ ನನ್ನನ್ನು ಒಬ್ಬಂಟಿಯಾಗಿ ಬಿಟ್ಟು ಹೋದದ್ದೇ ಆದರೆ ನಾನು ನದಿಯಾಗಿ ಹರಿಯುವುದಾಗಿ ಷರತ್ತು ವಿಧಿಸುತ್ತಾಳೆ. ಅದಕ್ಕೆ ಅಗಸ್ತ್ಯ ಮುನಿಗಳು ಒಪ್ಪಿಗೆ ನೀಡುತ್ತಾರೆ.

ಒಂದು ದಿನ ಅಗಸ್ತ್ಯ ಮುನಿಗಳು ತಾವಿದ್ದ ಆಶ್ರಮದಿಂದ ಬೆಟ್ಟದಾಚೆಗಿರುವ ಕನ್ನಿಕೆ ನದಿಯಲ್ಲಿ ಸ್ನಾನ ಮಾಡಲೆಂದು ಹೊರಡುತ್ತಾರೆ. ಕಾವೇರಿ ನಿದ್ದೆಯಲ್ಲಿರುವುದರಿಂದ ಅವಳು ಎಚ್ಚರವಾಗುವ ವೇಳೆಗೆ ಹಿಂತಿರುಗಿ ಬರಬಹುದೆಂದುಕೊಳ್ಳುತ್ತಾರೆ. ಆದರೆ ಅಗಸ್ತ್ಯ ಮುನಿಗಳು ಅತ್ತ ಸ್ನಾನಕ್ಕೆ ತೆರಳುತ್ತಿದ್ದಂತೆಯೇ ಇತ್ತ ನಿದ್ದೆಯಲ್ಲಿದ್ದ ಕಾವೇರಿಗೆ ಎಚ್ಚರವಾಗುತ್ತದೆ. ಸನಿಹದಲ್ಲಿ ಅಗಸ್ತ್ಯಮುನಿಗಳು ಇಲ್ಲದನ್ನು ಕಂಡು ಷರತ್ತು ಮೀರಿದ ಪತಿಯಿಂದ ದೂರವಾಗಿ ನದಿಯಾಗಿ ಹರಿದು ಲೋಕಕಲ್ಯಾಣ ಮಾಡಲು ಇದು ಸೂಕ್ತ ಸಮಯವೆಂದುಕೊಂಡು ಅಲ್ಲೇ ಇದ್ದ ಕೊಳಕ್ಕೆ ಇಳಿದು ಅಗಸ್ತ್ಯ ಮುನಿಗಳಿಗೆ ತಿಳಿಯದಂತೆ ಅಲ್ಲಿಂದ ಗುಪ್ತಗಾಮಿನಿಯಾಗಿ ಹರಿದು ಭಾಗಮಂಡಲ ಸೇರುತ್ತಾಳೆ. ಅಲ್ಲಿ ಕನ್ನಿಕೆ, ಸುಜ್ಯೋತಿ ನದಿಗಳೊಂದಿಗೆ ಸಂಗಮವಾಗಿ ಮುಂದೆ ಹರಿಯುತ್ತಾಳೆ.

English summary
cauvery teerthodbhava happened at Talacauvery Monday evinig 7:21 PM. Thousands Of devotees witness cauvery theerthodbhava,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X