ಟಿಪ್ಪು ಜಯಂತಿ ಗಲಭೆ : ವರ್ತಿಕಾ ಕಟಿಯಾರ್ ಆರೋಪ ಮುಕ್ತ

ಮಡಿಕೇರಿ, ಮೇ 27 : ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿ ವೇಳೆ ನಡೆದ ಗಲಭೆ ನಿಯಂತ್ರಣ ಮಾಡಲು ವಿಫಲರಾಗಿದ್ದಾರೆ ಎಂಬ ಆರೋಪದಿಂದ ವರ್ತಿಕಾ ಕಟಿಯಾರ್ ಮುಕ್ತರಾಗಿದ್ದಾರೆ. 2015ರಲ್ಲಿ ವರ್ತಿಕಾ ಕಟಿಯಾರ್ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು.

ಟಿಪ್ಪು ಜಯಂತಿ ಗಲಭೆ ಬಗ್ಗೆ ಮ್ಯಾಜಿಸ್ಟ್ರಿಯಲ್ ತನಿಖೆಗೆ ಸಿದ್ದರಾಮಯ್ಯ ಸರ್ಕಾರ ಆದೇಶ ನೀಡಿತ್ತು. ಜಿಲ್ಲಾಧಿಕಾರಿ ಮತ್ತು ಎಸ್‌ಪಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಶಿಫಾರಸು ಮಾಡಲಾಗಿತ್ತು.

ಅಂದು ಕೊಡಗು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಕಾರ್ಯ ನಿರ್ವಹಕೇತರ ಹುದ್ದೆಗೆ ವರ್ಗಾವಣೆ ಮಾಡಲಾಗಿತ್ತು. ಇದೀಗ ಗೃಹ ಇಲಾಖೆ ಅವರನ್ನು ಆರೋಪ ಮುಕ್ತಗೊಳಿಸಿದೆ.

Tipu Jayanti violence : IPS officer Vartika Katiyar acquitted

ಅಂದು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಿ.ಶಿಖಾ ಅವರ ನೇತೃತ್ವದಲ್ಲಿ ಮ್ಯಾಜಿಸ್ಟ್ರಿಯಲ್ ತನಿಖೆ ನಡೆದಿತ್ತು. ಜಿಲ್ಲಾ ಮಟ್ಟದ ಅಧಿಕಾರಿಗಳ ಕರ್ತವ್ಯ ಲೋಪವೇ ಗಲಭೆ ನಡೆಯಲು ಕಾರಣ ಎಂದು ಹೇಳಿತ್ತು.

ದಕ್ಷಿಣ ವಲಯ ಐಜಿಪಿ ಬಿ.ಕೆ.ಸಿಂಗ್ ಅವರು ಅಂದಿನ ಪೊಲೀಸ್ ನಿರ್ದೇಶಕರಾದ ಓಂ ಪ್ರಕಾಶ್ ಅವರಿಗೆ ವರದಿ ನೀಡಿದ್ದರು. ಈ ವರದಿಯನ್ನು ಗೃಹ ಇಲಾಖೆ ಕೈ ಬಿಟ್ಟಿದೆ. ವರ್ತಿಕಾ ಕಟಿಯಾರ್ ಅವರನ್ನು ಆರೋಪ ಮುಕ್ತಗೊಳಿಸಿ ಆದೇಶ ಹೊರಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+