ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೋಲ್ಡನ್ ಟೆಂಪಲ್‌ಗೆ ಪ್ರವಾಸಿಗರ ಭೇಟಿ ನಿಷೇಧ

|
Google Oneindia Kannada News

ಮಡಿಕೇರಿ, ಅಕ್ಟೋಬರ್ 29: ಕೋವಿಡ್ ಸೋಂಕಿನ ಹಿನ್ನಲೆಯಲ್ಲಿ ಬೈಲುಕುಪ್ಪೆ ಸಮೀಪದ ಗೋಲ್ಡನ್ ಟೆಂಪಲ್‌ಗೆ ಪ್ರವಾಸಿಗರ ಭೇಟಿ ನಿಷೇಧಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 4778.

ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಗೋಲ್ಡನ್ ಟೆಂಪಲ್‌ಗೆ ಪ್ರವೇಶ ನಿಷೇಧಿಸಲಾಗಿತ್ತು. ಈಗ ಅದನ್ನು ಡಿಸೆಂಬರ್ 26ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಇದರಿಂದಾಗಿ ಪ್ರವಾಸಿಗರಿಗೆ ನಿರಾಸೆಯಾಗಿದೆ.

ಕೆಮ್ಮಣ್ಣಗುಂಡಿ, ನಂದಿ ಗಿರಿಧಾಮ ಪ್ರವಾಸೋದ್ಯಮ ಇಲಾಖೆಗೆ ಕೆಮ್ಮಣ್ಣಗುಂಡಿ, ನಂದಿ ಗಿರಿಧಾಮ ಪ್ರವಾಸೋದ್ಯಮ ಇಲಾಖೆಗೆ

ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಹೆಚ್ಚಿರುವ ಕಾರಣ ಗೋಲ್ಡನ್ ಟೆಂಪಲ್‌ಗೆ ಪ್ರವೇಶ ನಿಷೇಧಿಸಲಾಗಿದೆ. ವಾರಂತ್ಯದಲ್ಲಿ ಹಲವಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಿದ್ದರು.

 ವಿರೋಧದ ಹಿನ್ನೆಲೆ ಉದ್ದೇಶಿತ ಬಂಡಿಪುರ ಪ್ರವಾಸೋದ್ಯಮ ಸಫಾರಿ ಸ್ಥಗಿತ ವಿರೋಧದ ಹಿನ್ನೆಲೆ ಉದ್ದೇಶಿತ ಬಂಡಿಪುರ ಪ್ರವಾಸೋದ್ಯಮ ಸಫಾರಿ ಸ್ಥಗಿತ

Tourists Entry Banned To Golden Temple Till December 26

ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ, ಜನರು ಕೋವಿಡ್ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ, ಮಾಸ್ಕ್ ಇಲ್ಲದೇ, ಸಾಮಾಜಿಕ ಅಂತರ ಪಾಲನೆ ಮಾಡದೇ ಸಂಚಾರ ನಡೆಸುತ್ತಿದ್ದಾರೆ.

ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ರಾಜೀನಾಮೆಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ರಾಜೀನಾಮೆ

ಬುಧವಾರದ ಮಾಹಿತಿಯಂತೆ ಕೊಡಗು ಜಿಲ್ಲೆಯಲ್ಲಿ 15 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 4778 ಮತ್ತು ಸಕ್ರಿಯ ಪ್ರಕರಣಗಳು 291.

ಮೈಸೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 47,201. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2073.

English summary
Due to COVID pandemic tourists entry to Golden temple Kushalnagar banned till December 26, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X