ದುಬಾರೆಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವು
ಮಡಿಕೇರಿ, ಮಾರ್ಚ್ 04: ಮಡಿಕೇರಿ ಸಮೀಪದ ಗೋಣಿಕೊಪ್ಪ ಲಯನ್ಸ್ ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕುಶಾಲನಗರ ಸಮೀಪದ ದುಬಾರೆಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಇಂದು ಶಾಲೆಯ ವತಿಯಿಂದಲೇ ಶಿಕ್ಷಕರು ವಿದ್ಯಾರ್ಥಿಗಳ ತಂಡವನ್ನು ದುಬಾರೆಗೆ ಪ್ರವಾಸಕ್ಕೆಂದು ಕರೆ ತಂದಿದ್ದರು ಎನ್ನಲಾಗಿದೆ. ಆ ಸಮಯದಲ್ಲಿ ನೀರಿಗಳಿದ ವಿದ್ಯಾರ್ಥಿಗಳಲ್ಲಿ ಇಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟರೆಂದು ವರದಿಗಳು ತಿಳಿಸಿವೆ.

ಮೃತರು 10 ನೇ ತರಗತಿಯ ವಿದ್ಯಾರ್ಥಿ ಶ್ರೇಯಸ್ ಮತ್ತು 6 ನೇ ತರಗತಿಯಲ್ಲಿ ಓದುತ್ತಿರುವ ಲೆನಿನ್ ಎಂದು ಗುರುತಿಸಲಾಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.












Click it and Unblock the Notifications