ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು ಅನ್‌ಲಾಕ್; ಪರಿಷ್ಕೃತ ನಿಯಮಗಳನ್ನು ತಿಳಿಯಿರಿ

|
Google Oneindia Kannada News

ಮಡಿಕೇರಿ, ಜುಲೈ 09; ಕರ್ನಾಟಕ ಸರ್ಕಾರದ ಅನ್‌ಲಾಕ್ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೊಡಗು ಜಿಲ್ಲೆಯಲ್ಲಿ ಸಹ ಜಾರಿಗೊಳಿಸಲಾಗಿದೆ. ಅದರಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಅನ್‌ಲಾಕ್ ನಿಯಮಾವಳಿ ಜಾರಿಗೆ ಬಂದಿದೆ.

ಕೊಡಗು ಜಿಲ್ಲಾಡಳಿತ ತಕ್ಷಣದಿಂದ ಜಾರಿಗೆ ಬರುವಂತೆ ಅನ್‌ಲಾಕ್ ಘೋಷಣೆ ಮಾಡಿದೆ. 19/7/2021ರ ಬೆಳಗ್ಗೆ 6 ಗಂಟೆಯ ತನಕ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ. ಕರ್ನಾಟಕ ಸರ್ಕಾರ ಜುಲೈ 5ರಿಂದಲೇ ಅನ್‌ಲಾಕ್‌ಗೆ ಅವಕಾಶ ನೀಡಿತ್ತು. ಆದರೆ ಕೊಡಗಿನಲ್ಲಿ ಒಂದು ವಾರ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿತ್ತು.

 ಕೊಡಗು ಜಿಲ್ಲೆಯ 5ನೇ ತಾಲ್ಲೂಕಾಗಿ ಕುಶಾಲನಗರ ಅಸ್ತಿತ್ವಕ್ಕೆ ಕೊಡಗು ಜಿಲ್ಲೆಯ 5ನೇ ತಾಲ್ಲೂಕಾಗಿ ಕುಶಾಲನಗರ ಅಸ್ತಿತ್ವಕ್ಕೆ

ಆದೇಶದ ಅನ್ವಯ ಕಂಟೈನ್‌ಮೆಂಟ್ ವಲಯದಲ್ಲಿ ಯಾವುದೇ ಚಟುವಳಿಕೆಗಳು ಇರುವುದಿಲ್ಲ. ಕಂಟೈನ್‌ಮೆಂಟ್ ವಲಯದ ಹೊರಭಾಗದಲ್ಲಿ ಕೆಲವು ಚಟುವಟಿಕೆ ಹೊರತುಪಡಿಸಿ, ಉಳಿದ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.

ಕೊಡಗು: ಭಾಗಮಂಡಲದಲ್ಲಿ ಪಿಂಡ ಪ್ರದಾನಕ್ಕೆ ಅವಕಾಶಕೊಡಗು: ಭಾಗಮಂಡಲದಲ್ಲಿ ಪಿಂಡ ಪ್ರದಾನಕ್ಕೆ ಅವಕಾಶ

ಪ್ರತಿದಿನ ರಾತ್ರಿ 9 ಗಂಟೆಯಿಂದ ಮರುದಿನ ಬೆಳಗ್ಗೆ 5 ಗಂಟೆ ತನಕ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ತುರ್ತು, ವೈದ್ಯಕೀಯ, ಸರಕು ಸಾಗಾಣಿಕೆ, ಅತ್ಯವಶ್ಯಕ ಸೇವೆಗಳನ್ನು ಹೊರತುಪಡಿಸಿ, ಉಳಿದಂತೆ ಯಾವುದೇ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ.

ಕೊಡಗು: ನೆಟ್‌ವರ್ಕ್‌ಗಾಗಿ ಅಟ್ಟಣಿಗೆ ಕ್ಲಾಸ್‌ ರೂಂ ನಿರ್ಮಿಸಿದ ಶಿಕ್ಷಕ ಕೊಡಗು: ನೆಟ್‌ವರ್ಕ್‌ಗಾಗಿ ಅಟ್ಟಣಿಗೆ ಕ್ಲಾಸ್‌ ರೂಂ ನಿರ್ಮಿಸಿದ ಶಿಕ್ಷಕ

ಯಾವುದಕ್ಕೆ ಅನುಮತಿ ಇದೆ?

ಯಾವುದಕ್ಕೆ ಅನುಮತಿ ಇದೆ?

* ಥಿಯೇಟರ್/ ಸಿನೆಮಾ ಹಾಲ್ ಮತ್ತು ಪಬ್‌ಗಳು

* ಸ್ವಿಮ್ಮಿಂಗ್ ಪೂಲ್‌ಗಳಲ್ಲಿ ಸ್ಪರ್ಧಾತ್ಮಕ ಉದ್ದೇಶದ ತರಬೇತಿಗೆ ಮಾತ್ರ ಅವಕಾಶ. ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು.

* ತರಬೇತಿ ಉದ್ದೇಶಕ್ಕಾಗಿ ಮಾತ್ರ ಸ್ಪೋಟ್ಸ್ ಕಾಂಪ್ಲೆಕ್ಸ್ ಮತ್ತು ಸ್ಟೇಡಿಯಂ ತೆರೆಯಬಹುದು. ಪ್ರೇಕ್ಷಕರಿಗೆ ಅವಕಾಶ ಇರುವುದಿಲ್ಲ. ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ.

ಸಭೆ, ಸಮಾರಂಭಗಳು

ಸಭೆ, ಸಮಾರಂಭಗಳು

* ಕೋವಿಡ್‌ಗೆ ಸಂಬಂಧಿಸಿದಂತೆ ಚಾಲ್ತಿಯಲ್ಲಿರುವ ಸರ್ಕಾರದ ಮಾರ್ಗಸೂಚಿಗೊಳಪಟ್ಟು ಗರಿಷ್ಠ 100 ಮಂದಿ ಮೀರದಂತೆ ಮದುವೆ / ಕೌಟುಂಬಿಕ ಸಮಾರಂಭಗಳನ್ನು ನಡೆಸಬಹುದು.

* ಕೋವಿಡ್ ಮಾರ್ಗಸೂಚಿಗೊಳಪಟ್ಟು ಗರಿಷ್ಠ 20 ಮಂದಿ ಮೀರದಂತೆ ಅಂತ್ಯಕ್ರಿಯೆ/ ಶವಸಂಸ್ಕಾರ ನಡೆಸಬಹುದು.

* ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ. ಸೇವೆಗಳಿಗೆ ಅವಕಾಶವಿಲ್ಲ.

* ಸಾರ್ವಜನಿಕ ಸಾರಿಗೆಯಲ್ಲಿ ಆಸನ ಸಾಮರ್ಥ್ಯಕ್ಕೆ ಅನುಗುಣವಾಗಿ ಕಾರ್ಯಾಚರಣೆಗೆ ಒಪ್ಪಿಗೆ.

* ಎಲ್ಲಾ ಅಂಗಡಿ, ರೆಸ್ಟೋರೆಂಟ್, ಮಾಲ್, ಖಾಸಗಿ ಕಚೇರಿಗಳು ಮುಂತಾದವುಗಳು ಮಾರ್ಗಸೂಚಿ ಪಾಲನೆಯೊಂದಿಗೆ ಕಾರ್ಯ ನಿರ್ವಹಣೆ ಮಾಡುವುದು.

ಶಾಲೆ, ಕಾಲೇಜುಗಳು ಓಪನ್ ಇಲ್ಲ

ಶಾಲೆ, ಕಾಲೇಜುಗಳು ಓಪನ್ ಇಲ್ಲ

* ಎಲ್ಲಾ ಶೈಕ್ಷಣಿಕ ಸಂಸ್ಥೆಗಳು/ ಟ್ಯಟೋರಿಯಲ್ಸ್ / ಕಾಲೇಜುಗಳು ಸರ್ಕಾರದ ಮುಂದಿನ ಆದೇಶದವರಗೆ ಮುಚ್ಚಿರುತ್ತದೆ.

* ಪ್ರತಿ ದಿನ ರಾತ್ರಿ 9 ಗಂಟೆಯಿಂದ ಮರುದಿನ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿ ಇರುತ್ತದೆ. ಈ ಅವಧಿಯಲ್ಲಿ ತುರ್ತು, ವೈದ್ಯಕೀಯ, ಸರಕು ಸಾಗಾಣಿಕೆ, ಅತ್ಯವಶ್ಯಕ ಸೇವೆ ಹೊರತುಪಡಿಸಿ, ಉಳಿದ ಚಟುವಟಿಕೆಗಳಿಗೆ ಅವಕಾಶವಿಲ್ಲ.

* ಜನರು ವಿನಃ ಕಾರಣ ತಿರುಗಾಡುವುದನ್ನು ನಿಷೇಧಿಸಿದೆ. ಕರ್ತವ್ಯದ ನಿಮಿತ್ತ ಸಂಚರಿಸುವವರು ಆಯಾ ಇಲಾಖೆ/ ಸಂಸ್ಥೆ / ಕಚೇರಿಯಿಂದ ನೀಡಿದ ಅಧಿಕೃತ ಗುರುತಿನ ಚೀಟಿ ಹೊಂದಿರಬೇಕು.

ಎಲ್ಲಾ ವಾಹನಗಳ ಸಂಚಾರಕ್ಕೆ ಅನುಮತಿ

ಎಲ್ಲಾ ವಾಹನಗಳ ಸಂಚಾರಕ್ಕೆ ಅನುಮತಿ

* ಸಾರ್ವಜನಿಕ ಸಾರಿಗೆ ಬಸ್‌ಗಳ ಸಂಚಾರ ಇರುತ್ತದೆ. ವಿಮಾನ ನಿಲ್ದಾಣ, ರೈಲ್ವೆ, ಬಸ್ ನಿಲ್ದಾಣಗಳಿಂದ ಪ್ರಯಾಣಿಕರನ್ನು ಕರೆತರಲು ಹಾಗೂ ಕರೆದೊಯ್ಯಲು ಅವಕಾಶ ಇರುತ್ತದೆ. ಆದರೆ, ಸಂಚಾರದ ವೇಳೆ ಅಧಿಕೃತ ದಾಖಲೆ/ ಟಿಕೆಟ್ ಹೊಂದಿರಬೇಕು.

* ಸಾರ್ವಕನಿಕ ಸ್ಥಳ/ ಸಾರಿಗೆ ವ್ಯವಸ್ಥೆಗಳಲ್ಲಿ ಕೋವಿಡ್ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು.

* ಈ ಆದೇಶದ ಉಲ್ಲಂಘನೆಯಾದಲ್ಲಿ ಭಾರತ ದಂಡ ಸಂಹಿತೆ ಕಲಂ 188, ದಿ ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆಕ್ಟ್ 2020, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್ 2005ರಡಿ ಮತ್ತು ವಿವಿಧ ಕಾಯ್ದೆಗಳಡಿ ದಂಡನೀಯ.

Recommended Video

Rockline Venkatesh : ಅಂಬರೀಶ್ ಬಗ್ಗೆ ಮಾತನಾಡೋದಕ್ಕೆ ಅವರು ಯಾರು? | Oneindia Kannada

English summary
Kodagu district administration announced unlock from July 9, 2021. New guidelines will in effect till July 19. Here are the unlock guidelines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X