Vote From Home: ಮನೆಯಿಂದ ಮತ ಹಾಕಿದ 104 ವರ್ಷದ ವೃದ್ಧೆ; ಫೋಟೋ ವೈರಲ್
ಮಡಿಕೇರಿ, ಮೇ 4; ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮನೆಯಿಂದಲೇ ಮತದಾನ ಮಾಡಲು 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷಚೇತನರಿಗೆ ಅವಕಾಶ ನೀಡಲಾಗಿದೆ. ಈ ವ್ಯವಸ್ಥೆಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ರಾಜ್ಯದಲ್ಲಿ ಮೇ 10ರಂದು ಮತದಾನ ನಡೆಯಲಿದೆ.
ಕೊಡಗು ಜಿಲ್ಲೆಯಲ್ಲಿ ನಮೂನೆ 12ರ ಅಡಿ ಹೆಸರು ನೋಂದಾಯಿಸಿದ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಕುಶಾಲನಗರದಲ್ಲಿ 104 ವರ್ಷದ ವೃದ್ಧೆ ಕಾಳಮ್ಮ ಮತದಾನ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಕುಶಾಲನಗರದ ಕಣಿವೆ ಸಮೀಪದ ಭುವನಗಿರಿ ನಿವಾಸಿ, ಕಾಳಮ್ಮ (104) ಮಂಗಳವಾರ ಅಂಚೆ ಪತ್ರದ ಮೂಲಕ ಮತದಾನ ಮಾಡಿದರು. ಕೊಡಗು ಜಿಲ್ಲಾಧಿಕಾರಿಗಳ ಫೇಸ್‌ಬುಕ್ ಪುಟದಲ್ಲಿ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ. ಶಿಥಿಲವಾದ ಮನೆಯಲ್ಲಿ ವಾಸಿಸುತ್ತಿರುವ ಕಾಳಮ್ಮ ತಮ್ಮ ಹಕ್ಕು ಚಲಾವಣೆ ಮಾಡಿದ ಫೋಟೋ ಈಗ ಮೆಚ್ಚುಗೆಗೆ ಪಾತ್ರವಾಗಿದೆ.
ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ; ಕಾಳಮ್ಮ ಮತದಾನ ಮಾಡಿದ ಫೋಟೋ ಬಗ್ಗೆ ನೆಟ್ಟಿಗರು ಚರ್ಚೆ ಆರಂಭಿಸಿದ್ದಾರೆ. ವೃದ್ಧೆಗೆ ಸರಿಯಾದ ಮನೆಯ ವ್ಯವಸ್ಥೆ ಮಾಡಲು ಆಗಿಲ್ಲ. ಆದರೆ ಅವರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ ಎಂದುದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ಪತ್ರಿಕೆಯೊಂದರ ಜೊತೆ ಮಾತನಾಡಿರುವ ಕಾಳಮ್ಮ, "ನಾನು ಈ ಮನೆಯೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದು, ಕೊನೆಯುಸಿರು ಇರುವವರೆಗೂ ಇಲ್ಲಿಯೇ ಇರುತ್ತೇನೆ. ಸೊಸೆ ಮತ್ತು ಮೊಮ್ಮಕ್ಕಳೇ ನನ್ನನ್ನು ನೋಡಿ ಕೊಳ್ಳುತ್ತಿದ್ದಾರೆ. ಆದರೆ, ಅವರೇ ಕಷ್ಟದಲ್ಲಿರುವುದರಿಂದ ಅವರಿಗೆ ಮತ್ತಷ್ಟು ಕಷ್ಟ ಕೊಡಲು ನನಗೆ ಇಷ್ಟ ಇಲ್ಲ. ಅಧಿಕಾರಿಗಳು ಇದೇ ಜಾಗದಲ್ಲಿ ಒಂದು ಸಣ್ಣ ಕೋಣೆಯನ್ನು ನಿರ್ಮಿಸಿಕೊಟ್ಟರೆ ತುಂಬಪುಣ್ಯ ಆಗುತ್ತಿತ್ತು" ಎಂದು ಹೇಳಿದ್ದಾರೆ.
ಕಾಳಮ್ಮ ಈಗ ಇರುವ ಮನೆಯ ಪಕ್ಕದಲ್ಲಿಯೇ ಹೊಸ ಮನೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಆದರೆ ಆಕೆಯ ಪುತ್ರ ತಮ್ಮಯ್ಯ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದು, ಮನೆ ನಿರ್ಮಾಣ ಕಾರ್ಯ ಸ್ಥಗಿತಗೊಂಡಿದೆ. ಕಾಳಮ್ಮಗೆ 6 ಮಕ್ಕಳು. ಐದು ಹೆಣ್ಣು ಮಕ್ಕಳು ಬೇರೆ ಊರುಗಳಲ್ಲಿ ಇದ್ದಾರೆ. ಜೊತೆಗ ಇರುವ ಪುತ್ರ ಅನಾರೋಗ್ಯ ಪೀಡಿತನಾಗಿದ್ದಾನೆ.
ವಿಡಿಯೋ ಚಿತ್ರೀಕರಣ; ಇದೇ ಮೊದಲ ಬಾರಿಗೆ ಚುನಾವಣಾ ಆಯೋಗ ಕರ್ನಾಟಕದಲ್ಲಿ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಮಾಡಿದೆ. 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತದಾನ ಮಾಡಬಹುದು. ಮನೆಯಿಂದಲೇ ಮತದಾನ ಮಾಡುವವರ ಹೆಸರನ್ನು ಚುನಾವಣಾಧಿಕಾರಿಗಳು ನಮೂನೆ 12ರ ಅಡಿ ನೋಂದಾಯಿಸಿಕೊಂಡಿದ್ದಾರೆ.
ಚುನಾವಣಾ ಅಧಿಕಾರಿಗಳ ತಂಡ ನೋಂದಣಿ ಮಾಡಿಕೊಂಡವರ ಮನೆಗೆ ಆಗಮಿಸುತ್ತದೆ. ಆಗ ಹೆಸರು ನೋಂದಾಯಿಸಿರುವವರು ಮತದಾನ ಮಾಡಬಹುದು. ಮತ ಹಾಕುವ ಪ್ರಕ್ರಿಯೆ ಬಿಟ್ಟು ಉಳಿದ ಪ್ರಕ್ರಿಯೆ ವಿಡಿಯೋ ಚಿತ್ರೀಕರಣ ಮಾಡಲಾಗುತ್ತದೆ. ರಾಜ್ಯದಲ್ಲಿ ಈ ವ್ಯವಸ್ಥೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕೊಡಗು ಜಿಲ್ಲೆಯಲ್ಲಿ ಒಟ್ಟು 2,474 ಮಂದಿ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಮೇ 6ರ ತನಕ ಹೆಸರು ನೋಂದಣಿ ಮಾಡಿಕೊಂಡವರು ಮನೆಯಿಂದಲೇ ಮಾತದಾನ ಮಾಡಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತದಾನ ಮೇ 10ರ ಬುಧವಾರ ನಡೆಯಲಿದೆ. ಈಗಾಗಲೇ ಮನೆಯಿಂದ ಮತದಾನ ಮತ್ತು ಅಂಚೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಸಾಮಾನ್ಯ ಮತದಾರರು ಬುಧವಾರ ಬೆಳಗ್ಗೆ 7 ರಿಂದ ಸಂಜೆ 6ರ ತನಕ ಮತದಾನ ಮಾಡಲು ಅವಕಾಶವಿದೆ. ಚುನಾವಣಾ ಫಲಿತಾಂಶ ಮೇ 13ರಂದು ಪ್ರಕಟವಾಗಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications