ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾರಂಗಿ ಜಲಾಶಯದಿಂದ ಮತ್ತೆ ನದಿಗೆ ನೀರು ಬಿಡುಗಡೆ

|
Google Oneindia Kannada News

ಮಡಿಕೇರಿ, ಆಗಸ್ಟ್ 20: ಕಳೆದ 15 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದಿಂದ ನದಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಿ, ಕೇವಲ ವಿದ್ಯುತ್‌ ಘಟಕದ ಮೂಲಕ ನಾಲೆಗೆ ಮಾತ್ರ ನೀರನ್ನು ಹರಿಸಲಾಗುತ್ತಿತ್ತು.

ಆದರೆ ಕಳೆದ ಎರಡು ದಿನಗಳಿಂದ ಕೊಡಗು ಭಾಗದಲ್ಲಿ ಹೆಚ್ಚು ಮಳೆಯಾಘುತ್ತಿದ್ದು, ಹಾರಂಗಿ ಅಣೆಕಟ್ಟೆಗೆ ನೀರಿನ ಒಳ ಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರದಿಂದ ವಿದ್ಯುತ್ ಘಟಕದ ಮೂಲಕ 2000 ಕ್ಯುಸೆಕ್ ನೀರು ಮತ್ತು ಮುಖ್ಯ ದ್ವಾರದ ಮೂಲಕ 1,600 ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ.

ಹಾರಂಗಿ ಜಲಾಶಯದ ಸಾಮರ್ಥ್ಯ 2858,09 ಅಡಿಗಳಾಗಿದ್ದು, ಅಣೆಕಟ್ಟೆಯ ನೀರಿನ ಸಂಗ್ರಹ ಮಟ್ಟ 8.19202 ಟಿಎಂಸಿ ಆಗಿದೆ. ಆದರೆ ಗುರುವಾರ ವರದಿ ಪ್ರಕಾರ ಹಾರಂಗಿ ಜಲಾಶಯದ ನೀರಿನ ಮಟ್ಟ 7.44155 ಟಿಎಂಸಿ ನೀರು ಇದೆ. ಅಣೆಕಟ್ಟೆಯ ಒಳಹರಿವು 2,910 ಕ್ಯುಸೆಕ್‌ನಷ್ಟಿದ್ದು, ನಾಲೆಗೆ 250 ಕ್ಯುಸೆಕ್ ಮತ್ತು ನದಿಗೆ ಒಟ್ಟು 3,600 ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ.

Madikeri: Water Released Into The River Again From Harangi Reservoir

ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹಾರಂಗಿ ಅಣೆಕಟ್ಟೆಯ ನೀರಿನ ಪ್ರಮಾಣದ ಮಾಹಿತಿ ಪಡೆದ ನಂತರ ಹಾರಂಗಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ನೀರಿನ ಮಟ್ಟವನ್ನು ಕಾಯ್ದಿರಿಸಿಕೊಂಡು ಹೆಚ್ಚುವರಿಯಾಗಿ ಬರುವ ನೀರನ್ನು ನದಿಗೆ ಹರಿಸುವಂತೆ ಸೂಚನೆ ನೀಡಿದ್ದಾರೆ.

"ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸೂಚನೆ ಮೇರೆಗೆ ನದಿಗೆ ನೀರು ಹರಿಸಲಾಗುತ್ತಿದೆ," ಎಂದು ಹಾರಂಗಿ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ್ ತಿಳಿಸಿದ್ದಾರೆ.

ಹಾರಂಗಿ ಅಣೆಕಟ್ಟೆ ಮುಂಭಾಗದಲ್ಲಿ ತೂಗು ಸೇತುವೆ ನಿರ್ಮಾಣ
ಕರ್ನಾಟಕದ ಕಾಶ್ಮೀರ ಎಂದೇ ಖ್ಯಾತವಾಗಿರುವ ಕೊಡಗು ಜಿಲ್ಲೆಯ ಪ್ರಮುಖ ಜಲಾಶಯ ಹಾಗೂ ಪ್ರವಾಸಿ ತಾಣ ಹಾರಂಗಿ ಅಣೆಕಟ್ಟೆ ಮುಂಭಾಗದಲ್ಲಿ ಸುಮಾರು 3.5 ಕೋಟಿ‌ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಿಸಲು ಕಾವೇರಿ ನೀರಾವರಿ ನಿಗಮ ಮುಂದಾಗಿದೆ.

ಈ ಸಂಬಂಧ ತೂಗು ಸೇತುವೆಯ ಜನಕ ಎಂದೇ ಪ್ರಸಿದ್ಧವಾಗಿರುವ ಗಿರೀಶ್ ಭಾರದ್ವಾಜ್ ಪುತ್ರ ಪತಂಜಲಿ ಭಾರದ್ವಾಜ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹಾರಂಗಿ ಜಲಾಶಯ ಭರ್ತಿಯಾದ ಸಂದರ್ಭ ನಾಲ್ಕು ಕ್ರಸ್ಟ್‌ಗೇಟ್‌ಗಳ ಮೂಲಕ ಹೊರಬಿಡುವ ನೀರಿನ ನಯನ‌ ಮನೋಹರ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರಿಗೆ ಅನುಕೂಲ‌ವಾಗಲಿದೆ. ಈ ನಿಟ್ಟಿನಲ್ಲಿ ಅಣೆಕಟ್ಟೆ ಮುಂಭಾಗ ಹರಿಯುವ ನದಿ ದಂಡೆಯ ಮೇಲೆ ತೂಗುಸೇತುವೆ ನಿರ್ಮಿಸುವಂತೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸಲಹೆ ನೀಡಿದ್ದರು.

Madikeri: Water Released Into The River Again From Harangi Reservoir

ಅದರಂತೆ ಅಂದಾಜು 3.5 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರಕುಮಾರ್ ತಿಳಿಸಿದ್ದಾರೆ.

ಹಾರಂಗಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ತೂಗು ಸೇತುವೆಯು ಅಣೆಕಟ್ಟೆಯಿಂದ ಸುಮಾರು 300 ಮೀಟರ್ ಅಂತರದಲ್ಲಿರಲಿದ್ದು, 160 ಮೀಟರ್ ಉದ್ದ, 3.5 ಮೀಟರ್ ಎತ್ತರ, 1.5 ಮೀ ಅಗಲವಿರಲಿದ್ದು, ಈ ಸೇತುವೆ ನಿರ್ಮಾಣ ಕಾಮಗಾರಿಗೆ ಪತಂಜಲಿ ಭಾರದ್ವಾಜ್‌ರಿಂದ ಸ್ಥಳ ಪರಿಶೀಲನೆ ನಡೆಸಲಾಗಿದೆ.

ಅದರಂತೆ ತೂಗು ಸೇತುವೆ ನಿರ್ಮಾಣದಲ್ಲಿ ಪರಿಣತಿ ಹೊಂದಿರುವ, ಇದುವರೆಗೆ 145 ಸೇತುವೆಗಳನ್ನು ನಿರ್ಮಿಸಿರುವ ಗಿರೀಶ್ ಭಾರದ್ವಾಜ್ ಮತ್ತು ಪತಂಜಲಿ‌ ಭಾರದ್ವಾಜ್ ತಂಡ 146ನೇ ತೂಗು ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ರಾಜ್ಯ ಸರ್ಕಾರದ ಅನುಮತಿ ದೊರೆತು, ಶೀಘ್ರದಲ್ಲಿ ಹಣ ಬಿಡುಗಡೆಯಾದರೆ ಮುಂದಿನ 2022ರ ಒಳಗಾಗಿ ಹಾರಂಗಿ ಜಲಾಶಯದ ತೂಗುಸೇತುವೆ ಲೋಕಾರ್ಪಣೆಗೊಳ್ಳಲಿದೆ.

Recommended Video

ಸುಮಲತಾ ಹಾಗೂ ತಂಡವನ್ನ ವಂಚನೆಗೆ ಹೋಲಿಸಿದ ರವೀಂದ್ರ! | Oneindia Kannada

English summary
From Thursday, 2000 cusec water is being drained through the Harangi Reservoir power plant and 1,600 cusec water through the main gate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X