ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರತಿ ಸ್ವಸಹಾಯ ಸಂಘಕ್ಕೂ ತಲಾ 10 ಸಾವಿರ ಸಹಾಯಧನ: ಮಂಡ್ಯದಲ್ಲಿ ನಾರಾಯಣಗೌಡ ಭರವಸೆ

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮಂಡ್ಯ, ನವೆಂಬರ್‌, 24: ಸ್ವಾಮಿ ವಿವೇಕಾನಂದ ಸ್ವಸಹಾಯ ಸಂಘಗಳನ್ನು ಸ್ಥಾಪಿಸಿ ಆ ಮೂಲಕ ಯುವಜನರನ್ನು ಉದ್ಯಮಿಗಳನ್ನಾಗಿಸುವ ಯೋಜನೆ ಜಾರಿಗೊಳಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ. ನಾರಾಯಣಗೌಡ ಮಂಡ್ಯದಲ್ಲಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ಕಲಾ ಮಂದಿರದಲ್ಲಿ ಜಿಲ್ಲಾ ಯುವ ಜನೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಸಚಿವರು, ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೂ ಸ್ವ ಸಹಾಯ ಸಂಘಗಳನ್ನು ಸ್ಥಾಪಿಸಿ ಆ ಮೂಲಕ ಯುವಜನರ ಆರ್ಥಿಕ ಚಟುವಟಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ.

ಕಾಂಗ್ರೆಸ್ ಪಕ್ಷ ಜನರನ್ನು ದಿಕ್ಕು ತಪ್ಪಿಸುತ್ತಿದೆ: ಬೂಕನಕೆರೆಯಲ್ಲಿ ಮಾಜಿ ಸಿಎಂ ಬಿಎಸ್‌ವೈ ಆಕ್ರೋಶಕಾಂಗ್ರೆಸ್ ಪಕ್ಷ ಜನರನ್ನು ದಿಕ್ಕು ತಪ್ಪಿಸುತ್ತಿದೆ: ಬೂಕನಕೆರೆಯಲ್ಲಿ ಮಾಜಿ ಸಿಎಂ ಬಿಎಸ್‌ವೈ ಆಕ್ರೋಶ

ಪ್ರತಿಯೊಂದು ಸ್ವಸಹಾಯ ಸಂಘಕ್ಕೂ ತಲಾ 10 ಸಾವಿರ ಸಹಾಯಧನ ನೀಡಲಾಗುವುದು. ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಉದ್ಯಮ ಕೈಗೊಂಡಲ್ಲಿ ಅಂತಹ ಸಂಘಗಳಿಗೆ ಬ್ಯಾಂಕ್‌ಗಳಿಂದ 2 ರಿಂದ ಮೂರ್ನಾಲ್ಕು ಲಕ್ಷ ರೂಪಾಯಿವರೆಗೂ ಸಾಲ ಸೌಲಭ್ಯ ದೊರೆಯುತ್ತದೆ. ಇದರಲ್ಲಿ ಶೇಕಡಾ 50ರಷ್ಟು ಸಬ್ಸಿಡಿಯೂ ದೊರೆಯುವಂತೆ ಯೋಜನೆ ರೂಪಿಸಲಾಗಿದ್ದು, ಇದು ಭಾರತದಲ್ಲೇ ಮೊದಲ ಪ್ರಯೋಗವಾಗಿದೆ ಎಂದು ವಿವರಿಸಿದರು.

ಯುವಜನರನ್ನು ಸರಿ ದಾರಿಗೆ ತರುವ ಪ್ರಯತ್ನ

ಯುವಜನರನ್ನು ಸರಿ ದಾರಿಗೆ ತರುವ ಪ್ರಯತ್ನ

ಮಹಿಳೆ ಮತ್ತು ಯುವತಿಯರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಲಾಗಿತ್ತು. ಇತ್ತೀಚಿನ ದಿನಗಳಲ್ಲಿ ಯುವಕರು ದಾರಿ ತಪ್ಪುತ್ತಿದ್ದು, ರಾಷ್ಟ್ರದ ಅತಿ ಮುಖ್ಯ ಮಾನವ ಸಂಪನ್ಮೂಲವಾಗಿರುವ ಯುವಜನರನ್ನು ದೇಶದ ಅಭಿವೃದ್ಧಿಯಲ್ಲಿ ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಈ ಯೋಜನೆಯನ್ನು ಸ್ವತಃ ಮುಖ್ಯಮಂತ್ರಿಗಳೇ ಚಿಂತಿಸಿದ್ದು, ನಂತರ ಅನುಷ್ಠಾನಗೊಳಿಸಿದ್ದಾರೆ ಎಂದು ಹೇಳಿದರು.

350 ಜನ ಕಿವುಡರಿಗೆ ಸಾಧನ ವಿತರಣೆ

350 ಜನ ಕಿವುಡರಿಗೆ ಸಾಧನ ವಿತರಣೆ

ಮುಂಬೈನ ಉದ್ಯಮಿಯೊಬ್ಬರು ಕೆ.ಆರ್. ಪೇಟೆ ತಾಲೂಕಿನಲ್ಲಿರುವ ಸುಮಾರು ಒಂದು ಸಾವಿರ ಕಿವುಡರಿಗೆ ನೆರವಾಗುವ ಸಾಧನಗಳನ್ನು ವಿತರಿಸಲಾಯಿತು. ಆರಂಭಿಕ ಹಂತದಲ್ಲಿ 350 ಜನರಿಗೆ ವಿತರಿಸಲಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಇರುವ ಕಿವುಡರಿಗೆ ಈ ಸಾಧನಗಳನ್ನು ವಿತರಣೆ ಮಾಡುತ್ತೇವೆ ಎಂದು ಭರವಸೆ ನೀಡಿದರು. ಈ ಬಗ್ಗೆ ಕಾರ್ಯಕ್ರಮ ರೂಪಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿ ಸಿಇಒಗೆ ಸೂಚಿಸಿದರು.

ಸರಿಯಾಗಿ ತರಬೇತಿ ಪಡೆಯುವಂತೆ ಸಲಹೆ

ಸರಿಯಾಗಿ ತರಬೇತಿ ಪಡೆಯುವಂತೆ ಸಲಹೆ

ನಂತರ ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲಕೃಷ್ಣ ಮಾತನಾಡಿ, ಜಿಲ್ಲಾ ಮಟ್ಟದ ಯುವಜನೋತ್ಸವ ಮಂಡ್ಯದಲ್ಲಿ ನಡೆಯುತ್ತಿದೆ. ಸ್ಪರ್ಧಾಳುಗಳು ಉತ್ತಮ ಪ್ರದರ್ಶನ ನೀಡಿ ಭಾಗವಹಿಸಿ. ಸೋಲು -ಗೆಲುವು ಮುಖ್ಯವಲ್ಲ, ಸ್ಪರ್ಧೆಯಲ್ಲಿ ಭಾಗವಹಿಸುವುದೇ ಮುಖ್ಯ. ಸೋತವರು ಮುಂದಿನ ವರ್ಷ ಮತ್ತೆ ಭಾಗವಹಿಸಲು ಅವಕಾಶ ಇದೆ. ಅದಕ್ಕೆ ಸರಿಯಾಗಿ ತರಬೇತಿ ಪಡೆಯುವಂತೆ ಸಲಹೆ ನೀಡಿದರು. ಇಲ್ಲಿ ಆಯ್ಕೆಯಾದವರು ಚಿಕ್ಕಮಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಯುವ ಜನೋತ್ಸವದಲ್ಲಿ ಭಗವಹಿಸಬಹುದು. ಈ ಬಾರಿ ರಾಷ್ಟ ಮಟ್ಟದ ಯುವಜನೋತ್ಸವ ಕರ್ನಾಟಕದಲ್ಲೇ ನಡೆಯುವ ಸಾಧ್ಯತೆಗಳಿವೆ. ಇದಕ್ಕೆ ಸರಿಯಾದ ಸಿದ್ಧತೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಅಲ್ಲದೆ ತೀರ್ಪುಗಾರರು ಪ್ರಾಮಾಣಿಕವಾಗಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಳುಹಿಸುವಂತೆ ಸಲಹೆ ನೀಡಿದರು.

100 ಜನ ಮಕ್ಕಳಿಗೆ ಪೈಲಟ್‌ ತರಬೇತಿ

100 ಜನ ಮಕ್ಕಳಿಗೆ ಪೈಲಟ್‌ ತರಬೇತಿ

ಇನ್ನು ಜಕ್ಕೂರು ವಿಮಾನ ನಿಲ್ದಾಣದಲ್ಲಿರುವ ಸರ್ಕಾರಿ ವೈಮಾನಿಕ ತರಬೇತಿ ಸಂಸ್ಥೆಗೆ ಉತ್ತೇಜನ ನೀಡಲಾಗಿದೆ. ಕಾರ್ಮಿಕರ ಮಕ್ಕಳು, ದೀನ ದಲಿತರ ಮಕ್ಕಳನ್ನೂ ಸಹ ಪೈಲಟ್‌ಗಳನ್ನಾಗಿ ಮಾಡುವ ಯೋಜನೆ ರೂಪಿಸಲಾಗಿದೆ. ಅದರಂತೆಯೇ 100 ಜನರಿಗೆ ತರಬೇತಿ ನೀಡಲಾಗುತ್ತಿದೆ. ಒಬ್ಬರಿಗೆ 30 ರಿಂದ 35 ಲಕ್ಷ ಖರ್ಚಾಗುತ್ತಿದ್ದು, ಕಾರ್ಮಿಕ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಇದನ್ನು ವಹಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತಿ ಸಿಇಒ ಶಾಂತಾ ಎಲ್. ಹುಲ್ಮನಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರಾದ ನಾಗರಾಜು, ಸೋಮಶೇಖರ್, ಕುಮಾರ್ ಕೊಪ್ಪ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಒಂಪ್ರಕಾಶ್ ಸೇರಿದಂತೆ ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ 2 ಗುಂಪು, 17 ವೈಯಕ್ತಿಕ ತಂಡಗಳು ಭಾಗವಹಿಸಿವೆ.

English summary
State Sports Minister KC Narayana Gowda promise in Mandya, Rs 10,000 will be given to each self help group, know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X