ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ : ನೈಟ್ರೋಜನ್ ಬಲೂನ್ ಸ್ಫೋಟ, 10 ಮಂದಿಗೆ ಗಾಯ

|
Google Oneindia Kannada News

ಮಂಡ್ಯ, ಮಾರ್ಚ್ 23 : ಮಂಡ್ಯದಲ್ಲಿ ನೈಟ್ರೋಜನ್ ಬಲೂನ್ ಸ್ಫೋಟಗೊಂಡಿದ್ದು 10 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ 3 ಮಕ್ಕಳ ಸ್ಥಿತಿ ಗಂಭೀರವಾಗಿದೆ.

ಶ್ರೀರಂಗಪಟ್ಟಣದ ಹೈಸ್ಕೂಲ್ ಮೈದಾನದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶ್ರೀರಂಗಪಟ್ಟಣ್ಣಕ್ಕೆ ಶನಿವಾರ ಆಗಮಿಸುತ್ತಿದ್ದಾರೆ.

ಮಂಡ್ಯ ರಾಜಕೀಯ : ದೇವೇಗೌಡರ ಟಾರ್ಗೆಟ್ ಕ್ಷೇತ್ರ ಶ್ರೀರಂಗಪಟ್ಟಣ!ಮಂಡ್ಯ ರಾಜಕೀಯ : ದೇವೇಗೌಡರ ಟಾರ್ಗೆಟ್ ಕ್ಷೇತ್ರ ಶ್ರೀರಂಗಪಟ್ಟಣ!

ರಾಹುಲ್ ಗಾಂಧಿ ಸ್ವಾಗತಿಸಲು ನೈಟ್ರೋಜನ್ ಬಲೂನ್ ಹಾರಿಬಿಡಲಾಗುತ್ತಿದೆ. ಇದಕ್ಕಾಗಿ ಬಲೂನ್‌ಗೆ ಗಾಳಿ ತುಂಬುವಾಗ ಅದು ಸ್ಫೋಟಗೊಂಡಿದ್ದು, ಸುತ್ತ-ಮುತ್ತಲಿದ್ದ 10 ಜನರು ಗಾಯಗೊಂಡಿದ್ದಾರೆ. ಎಲ್ಲರನ್ನು ಮಂಡ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

Nitrogen balloon

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎರಡು ದಿನಗಳ ಪ್ರವಾಸಕ್ಕಾಗಿ ಶನಿವಾರ ಬೆಳಗ್ಗೆ ಮೈಸೂರಿಗೆ ಆಗಮಿಸುತ್ತಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಅವರು, ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ ಶ್ರೀರಂಗಪಟ್ಟಕ್ಕೆ ಆಗಮಿಸಲಿದ್ದಾರೆ.

In Pics: ಕರಾವಳಿಯಲ್ಲಿ ರಾಹುಲ್ ಗಾಂಧಿ ಮಿಂಚಿನ ಸಂಚಾರ

ಶ್ರೀರಂಗಪಟ್ಟಣದಲ್ಲಿನ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ರಾಹುಲ್ ಗಾಂಧಿಗೆ ಸ್ವಾಗತ ಕೋರಲು ಬೃಹತ್ ನೈಟ್ರೋಜನ್ ಬಲೂನ್ ಹಾಕಲಾಗುತ್ತಿತ್ತು.

English summary
At least 10 people got injured after Nitrogen balloon blast in Srirangapatna, Mandya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X