ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯದಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದ ದುಷ್ಕರ್ಮಿಗಳು

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮಂಡ್ಯ, ಡಿಸೆಂಬರ್ 04: ಇಲ್ಲಿಗೆ ಸಮೀಪದ ಮದ್ದೂರಿನಲ್ಲಿ ಕಬ್ಬಿನ ಗದ್ದೆಯಲ್ಲಿ ಕೆಲಸ ಮಾಡುತಿದ್ದ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ನಂತರ ಆಕೆಯ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಬುಧವಾರ, ಡಿ.2 ರಂದು ಕೊಲೆ ನಡೆದಿರುವುದಾಗಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾಜ್ಯ ಮಕ್ಕಳ ಹಕ್ಕು ಆಯೋಗದ ಅಧ್ಯಕ್ಷ ಸಬಾಸ್ಟಿನ್ ಜೋಸೆಫ್‌ ಭೇಟಿ ನೀಡಿ ಮಾಹಿತಿ ಪಡೆದರು. ಬಾಲಕಿ ಮೂಲತಃ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಿವಾಸಿ. ಬಾಲಕಿ ಕುಟುಂಬಸ್ಥರ ಜೊತೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗ್ರಾಮಕ್ಕೆ ಬಂದಿದ್ದಳು.

 ಹಾವೇರಿಯಲ್ಲಿ ಹೆತ್ತ ತಾಯಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಮಗ ಹಾವೇರಿಯಲ್ಲಿ ಹೆತ್ತ ತಾಯಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಮಗ

ಬುಧವಾರ ಕಬ್ಬು ಕಟಾವಿಗೆ ಬಾಲಕಿ ಗದ್ದೆಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನು ಎಳೆದೊಯ್ದ ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಬಾಲಕಿ ವಿರೋಧ ವ್ಯಕ್ತಪಡಿಸಿದಾಗ ಆಕೆಯ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಅಪ್ರಾಪ್ತನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Mandya: 13 Year Old Girl Brutally Killed In Maddur

ವೃದ್ಧನಿಂದ ಬಾಲಕಿ ಮೇಲೆ ಅತ್ಯಾಚಾರ: ಬಾಲಕಿಯನ್ನು ಕಬ್ಬಿನ ಗದ್ದೆಯಲ್ಲಿ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆಯ ಬೆನ್ನಲ್ಲೆ ಜಿಲ್ಲೆಯಲ್ಲಿ ವೃದ್ಧನೊಬ್ಬ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಅತ್ಯಾಚಾರ ಎಸಗಿದ ಆರೋಪಿಯನ್ನು ಮಂಡ್ಯದ ಗಾಂಧಿನಗರ ನಿವಾಸಿ ವೆಂಕಟೇಶ್ (61) ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ.

Recommended Video

ಶಿವಮೊಗ್ಗದಲ್ಲಿ IGP Ravi ಅವರಿಗೆ ಚಾಕು ತೋರಿಸಿದ ಯುವಕ | Oneindia Kannada

ಮನೆಯಲ್ಲಿ ಒಬ್ಬಳೇ ಇರುತಿದ್ದ ಬಾಲಕಿಯ ಮನೆ ಪಕ್ಕದಲ್ಲೆ ವಾಸವಿದ್ದ ವೃದ್ಧ , ಬಾಲಕಿಯ ಪೋಷಕರು ಕೆಲಸಕ್ಕೆ ತೆರಳಿದ ನಂತರ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಇತ್ತ ವೃದ್ಧನ ಬಗ್ಗೆ ಬಾಲಕಿ ತನ್ನ ಪೋಷಕರ ಬಳಿ ದೂರು ಹೇಳಿದ್ದರೂ ಆಕೆಯ ಮಾತನ್ನು ನಿರ್ಲಕ್ಷ್ಯಿಸಿದ್ದಾರೆ. ಇದೀಗ ಬಾಲಕಿ ಗರ್ಭಿಣಿಯಾಗಿದ್ದನ್ನು ಅರಿತ ಪೋಷಕರು ಮಂಡ್ಯ ಪಶ್ಚಿಮ ಠಾಣೆಯಲ್ಲಿ ದೂರು ನೀಡಿದ್ದಾರೆ.

English summary
A 13 year old girl, who was working in a farm brutally killed in Maddur village at manday district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X