ಆಟವಾಡುತ್ತಿದ್ದ 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಅಪ್ರಾಪ್ತ
ಮಂಡ್ಯ, ಆಗಸ್ಟ್ 22: ಮನೆ ಎದುರು ಆಟವಾಡಿಕೊಂಡಿದ್ದ ಮೂರು ವರ್ಷದ ಹುಡುಗಿ ಮೇಲೆ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಮಂಡ್ಯದ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ.
ಮನೆ ಎದುರು ಆಟವಾಡುತ್ತಿದ್ದ ಮೂರು ವರ್ಷದ ಬಾಲಕಿಯನ್ನು ಹದಿನೈದು ವರ್ಷದ ಬಾಲಕ ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಈ ಕೃತ್ಯ ಎಸಗಿದ್ದಾನೆ. ಮಗುವಿನ ಚೀರಾಟ ಕೇಳಿದ ಪೋಷಕರು ಮನೆಯೊಳಗೆ ಬರುತ್ತಿದ್ದಂತೆ ಯುವಕ ಪರಾರಿಯಾಗಿದ್ದಾನೆ. ಮಗುವಿನ ಪರಿಸ್ಥಿತಿ ನೋಡಿದ ಪೋಷಕರು ತಕ್ಷಣವೇ ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪೋಷಕರು ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಬಿಜಿಎಸ್ ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ ಭೇಟಿ ನೀಡಿ ಪೋಷಕರಿಂದ ಮಾಹಿತಿ ಪಡೆದಿದ್ದಾರೆ. ಕೃತ್ಯ ಎಸಗಿದ ಬಾಲಕ ತಪ್ಪಿಸಿಕೊಂಡಿದ್ದಾನೆ.












Click it and Unblock the Notifications