ನಾಗಮಂಗಲ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ ದೃಢ: ಕಾಲೇಜು ಸೀಲ್ಡೌನ್
ಮಂಡ್ಯ, ಸೆಪ್ಟೆಂಬರ್ 30: ಒಂದೇ ಕಾಲೇಜಿನಲ್ಲಿ 28 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ.
ನಾಗಮಂಗಲ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ 28 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಡಳಿತವು ಸರ್ಕಾರಿ ಕಾಲೇಜನ್ನು ಒಂದು ವಾರಗಳ ಕಾಲ ಸೀಲ್ಡೌನ್ ಮಾಡಿದೆ. ಈ ಕಾಲೇಜಿನಲ್ಲಿ 412 ವಿದ್ಯಾರ್ಥಿನಿಯರು ಇದ್ದು, ಈ ಪೈಕಿ 28 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ತಗುಲಿದೆ.
ಕೋವಿಡ್ ಸೋಂಕು ತಗುಲಿರುವ ವಿದ್ಯಾರ್ಥಿನಿಯರಿಗೆ ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದ ವಿದ್ಯಾರ್ಥಿನಿಯರನ್ನು ಹಾಗೂ ಉಪನ್ಯಾಸಕರನ್ನು ಕ್ವಾರಂಟೈನ್ ಮಾಡಲಾಗಿದೆ.

ಭಾರತದಲ್ಲಿ 23,529 ಹೊಸ ಕೊವಿಡ್ -19 ಪ್ರಕರಣ
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 23,529 ಹೊಸ ಕೊವಿಡ್-19 ಪ್ರಕರಣಗಳು ವರದಿಯಾಗಿವೆ. ಇದು ಬುಧವಾರಕ್ಕಿಂತ 24 ಪ್ರತಿಶತದಷ್ಟು ಹೆಚ್ಚಾಗಿದೆ.
ಇದರೊಂದಿಗೆ ಹೊಸ ಸೋಂಕುಗಳೊಂದಿಗೆ ಒಟ್ಟು ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 3,37,39,980ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 311 ಸಾವುಗಳು ವರದಿಯಾಗಿವೆ. ಒಟ್ಟು ಸಾವಿನ ಸಂಖ್ಯೆ 4,48,062ಕ್ಕೆ ತಲುಪಿದೆ.
ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ 0.82 ಶೇಕಡಾವನ್ನು ಆಗಿದ್ದು, ದೇಶದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 2,77,020 ಇದೆ.
ಬುಧವಾರ ಒಂದೇ ದಿನದಲ್ಲಿ ಒಟ್ಟು 59,48,118 ಲಸಿಕೆ ಡೋಸ್ಗಳನ್ನು ನೀಡಿದ್ದರಿಂದ ದೇಶದಲ್ಲಿ ಒಟ್ಟು ಕೊವಿಡ್ -19 ಲಸಿಕೆ ಪ್ರಮಾಣ 88 ಕೋಟಿ ದಾಟಿದೆ. ಈವರೆಗೆ 88,34,70,578 ಲಸಿಕೆಗಳನ್ನು ನೀಡಲಾಗಿದೆ.
ಚೇತರಿಕೆ ಪ್ರಮಾಣ ಶೇಕಡ 97.85 ರಷ್ಟಿದ್ದು, ಕಳೆದ ವರ್ಷ ಮಾರ್ಚ್ನಿಂದ ಚೇತರಿಕೆ ಕೂಡ ಅತ್ಯಧಿಕವಾಗಿದ್ದು, ಕಳೆದ 24 ಗಂಟೆಗಳಲ್ಲಿ 28,718 ರೋಗಿಗಳು ಗುಣಮುಖರಾಗಿದ್ದಾರೆ.
Recommended Video
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications