ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಗಮಂಗಲ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ ದೃಢ: ಕಾಲೇಜು ಸೀಲ್‌ಡೌನ್

|
Google Oneindia Kannada News

ಮಂಡ್ಯ, ಸೆಪ್ಟೆಂಬರ್ 30: ಒಂದೇ ಕಾಲೇಜಿನಲ್ಲಿ 28 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ.

ನಾಗಮಂಗಲ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ 28 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಡಳಿತವು ಸರ್ಕಾರಿ ಕಾಲೇಜನ್ನು ಒಂದು ವಾರಗಳ ಕಾಲ ಸೀಲ್‍ಡೌನ್ ಮಾಡಿದೆ. ಈ ಕಾಲೇಜಿನಲ್ಲಿ 412 ವಿದ್ಯಾರ್ಥಿನಿಯರು ಇದ್ದು, ಈ ಪೈಕಿ 28 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ತಗುಲಿದೆ.

ಕೋವಿಡ್ ಸೋಂಕು ತಗುಲಿರುವ ವಿದ್ಯಾರ್ಥಿನಿಯರಿಗೆ ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದ ವಿದ್ಯಾರ್ಥಿನಿಯರನ್ನು ಹಾಗೂ ಉಪನ್ಯಾಸಕರನ್ನು ಕ್ವಾರಂಟೈನ್ ಮಾಡಲಾಗಿದೆ.

Mandya: 28 Students Of Nagamangala Govt PU College Tests Positive For Covid-19; College sealed down

ಭಾರತದಲ್ಲಿ 23,529 ಹೊಸ ಕೊವಿಡ್ -19 ಪ್ರಕರಣ
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 23,529 ಹೊಸ ಕೊವಿಡ್-19 ಪ್ರಕರಣಗಳು ವರದಿಯಾಗಿವೆ. ಇದು ಬುಧವಾರಕ್ಕಿಂತ 24 ಪ್ರತಿಶತದಷ್ಟು ಹೆಚ್ಚಾಗಿದೆ.

ಇದರೊಂದಿಗೆ ಹೊಸ ಸೋಂಕುಗಳೊಂದಿಗೆ ಒಟ್ಟು ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 3,37,39,980ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 311 ಸಾವುಗಳು ವರದಿಯಾಗಿವೆ. ಒಟ್ಟು ಸಾವಿನ ಸಂಖ್ಯೆ 4,48,062ಕ್ಕೆ ತಲುಪಿದೆ.

ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ 0.82 ಶೇಕಡಾವನ್ನು ಆಗಿದ್ದು, ದೇಶದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 2,77,020 ಇದೆ.

ಬುಧವಾರ ಒಂದೇ ದಿನದಲ್ಲಿ ಒಟ್ಟು 59,48,118 ಲಸಿಕೆ ಡೋಸ್‌ಗಳನ್ನು ನೀಡಿದ್ದರಿಂದ ದೇಶದಲ್ಲಿ ಒಟ್ಟು ಕೊವಿಡ್ -19 ಲಸಿಕೆ ಪ್ರಮಾಣ 88 ಕೋಟಿ ದಾಟಿದೆ. ಈವರೆಗೆ 88,34,70,578 ಲಸಿಕೆಗಳನ್ನು ನೀಡಲಾಗಿದೆ.

ಚೇತರಿಕೆ ಪ್ರಮಾಣ ಶೇಕಡ 97.85 ರಷ್ಟಿದ್ದು, ಕಳೆದ ವರ್ಷ ಮಾರ್ಚ್‌ನಿಂದ ಚೇತರಿಕೆ ಕೂಡ ಅತ್ಯಧಿಕವಾಗಿದ್ದು, ಕಳೆದ 24 ಗಂಟೆಗಳಲ್ಲಿ 28,718 ರೋಗಿಗಳು ಗುಣಮುಖರಾಗಿದ್ದಾರೆ.

Recommended Video

ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ ₹1.5ಲಕ್ಷ ಪರಿಹಾರ ಘೋಷಿಸಿದ ಸರ್ಕಾರ | Oneindia Kannada

English summary
28 Students of Mandya district Nagamangala Govt PU College tests positive for Covid-19, College sealed down for One Week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X