'8 ಜೆಡಿಎಸ್ ಶಾಸಕರು ಸಂಪರ್ಕದಲ್ಲಿದ್ದಾರೆ'

Posted By:
Subscribe to Oneindia Kannada

ಮಂಡ್ಯ, ಆಗಸ್ಟ್ 20 : 'ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ ಎಂಟು ಶಾಸಕರು ಸಂಪರ್ಕದಲ್ಲಿದ್ದಾರೆ. ಅವರು ಕಾಂಗ್ರೆಸ್ ಪಕ್ಷ ಸೇರುವುದಾದರೆ ಸ್ವಾಗತಿಸುತ್ತೇವೆ. ಮುಂದಿನ ಬೆಳವಣಿಗೆಗಳನ್ನು ಕಾದು ನೋಡೋಣ' ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಶುಕ್ರವಾರ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, 'ಮಂಡ್ಯ ಜಿಲ್ಲೆಯ ಅನೇಕ ಜೆಡಿಎಸ್ ಮುಖಂಡರು ಮತ್ತು ಪಕ್ಷದಿಂದ ಅಮಾನತುಗೊಂಡ ಎಂಟು ಶಾಸಕರು ನಿರಂತರವಾಗಿ ನನ್ನ ಜೊತೆ ಸಂಪರ್ಕದಲ್ಲಿದ್ದಾರೆ' ಎಂದರು.['ನಾನು ಅವರಿಗೆ ಹಣ ಕೊಟ್ಟು ಸಾಕುವಷ್ಟು ಶ್ರೀಮಂತನಲ್ಲ']

ಡಿ.ಕೆ.ಶಿವಕುಮಾರ್ ಅವರ ಜೊತೆ ನಾಗಮಂಗಲದ ಶಾಸಕ ಚೆಲುವರಾಯ ಸ್ವಾಮಿ ಅವರೂ ಇದ್ದರು. 'ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ ನಾಯಕತ್ವದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು' ಎಂದು ಹೇಳಿದರು.[ಜೆಡಿಯುನತ್ತ ಹೊರಟ ಜೆಡಿಎಸ್ ನ 8 ಶಾಸಕರು?]

'ಮಾಜಿ ಸಂಸದೆ ರಮ್ಯಾ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತಾರೆ ಎನ್ನುವುದೆಲ್ಲಾ ಊಹಾಪೋಹ. ರಮ್ಯಾ ಅವರನ್ನು ವಿಧಾನಪರಿಷತ್‌ಗೆ ನಾಮಕರಣ ಮಾಡುವ ಯಾವುದೇ ಆಲೋಚನೆಯೂ ಇಲ್ಲ' ಎಂದು ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು....

ಮುಂದಿನ ಬೆಳವಣಿಗೆ ಕಾದು ನೋಡೋಣ

ಮುಂದಿನ ಬೆಳವಣಿಗೆ ಕಾದು ನೋಡೋಣ

'ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ ಎಂಟು ಶಾಸಕರು ಸಂಪರ್ಕದಲ್ಲಿದ್ದಾರೆ. ಅವರು ಕಾಂಗ್ರೆಸ್ ಪಕ್ಷ ಸೇರುವುದಾದರೆ ಸ್ವಾಗತಿಸುತ್ತೇವೆ. ಮುಂದಿನ ಬೆಳವಣಿಗೆಗಳನ್ನು ಕಾದು ನೋಡೋಣ' ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

'ಬೇರೆ ಜಿಲ್ಲೆಯವರು ಎನಿಸುತ್ತಿಲ್ಲ'

'ಬೇರೆ ಜಿಲ್ಲೆಯವರು ಎನಿಸುತ್ತಿಲ್ಲ'

ನಾಗಮಂಗಲದ ಸೋಮನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಚೆಲುವರಾಯ ಸ್ವಾಮಿ ಅವರು, 'ಡಿ.ಕೆ.ಶಿವಕುಮಾರ್‌ ಹೊರ ಜಿಲ್ಲೆಯವರು ಎನಿಸುತ್ತಿಲ್ಲ. ಎಲ್ಲೇ ಹೋದರೂ ತಮ್ಮ ಜಿಲ್ಲೆ ಎಂಬ ಭಾವನೆಯಿಂದಲೇ ಕಾರ್ಯನಿರ್ವಹಿಸುತ್ತಾರೆ. ಆಡಳಿತಕ್ಕೆ ಚುರುಕು ನೀಡುವ ಹಾಗೂ ಅಧಿಕಾರಿಗಳ ಕಾರ್ಯದಕ್ಷತೆ ಹೆಚ್ಚಿಸುವಲ್ಲಿ ಅವರು ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ' ಎಂದರು.

ಅಮಾನತುಗೊಂಡ ಶಾಸಕರು

ಅಮಾನತುಗೊಂಡ ಶಾಸಕರು

ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ), ಕೆ.ಗೋಪಾಲಯ್ಯ (ಮಹಾಲಕ್ಷ್ಮೀ ಪುರ), ಅಖಂಡ ಶ್ರೀನಿವಾಸಮೂರ್ತಿ (ಪುಲಿಕೇಶಿ ನಗರ), ಚೆಲುವರಾಯ ಸ್ವಾಮಿ (ನಾಗಮಂಗಲ), ಎಚ್.ಸಿ.ಬಾಲಕೃಷ್ಣ (ಮಾಗಡಿ) ಇಕ್ಬಾಲ್ ಅನ್ಸಾರಿ (ಗಂಗಾವತಿ), ರಮೇಶ್ ಬಂಡಿಸಿದ್ದೇಗೌಡ (ಶ್ರೀರಂಗಪಟ್ಟಣ), ಭೀಮಾ ನಾಯಕ್ (ಹಗರಿಬೊಮ್ಮನಹಳ್ಳಿ).

'ಶಾಸಕರನ್ನು ಉಚ್ಛಾಟಿಸುವುದು ಖಚಿತ'

'ಶಾಸಕರನ್ನು ಉಚ್ಛಾಟಿಸುವುದು ಖಚಿತ'

'ಮುಂದಿನ ದಿನಗಳಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು 8 ಶಾಸಕರನ್ನು ಅಮಾತನು ಮಾಡುವ ಬಗ್ಗೆ ನಿರ್ಧಾರವನ್ನು ಕೈಗೊಳ್ಳುತ್ತಾರೆ. ಅದಕ್ಕೂ ಮುನ್ನ ಅವರ ಕ್ಷೇತ್ರದ ಜನರು ಅವರನ್ನು ಉಚ್ಛಾಟಿಸುತ್ತಾರೆ. ಶಾಸಕರನ್ನು ಪುನಃ ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳುವುದಿಲ್ಲ' ಎಂದು ಹೇಳಿದರು.

ರಮ್ಯಾ ಲೋಕಸಭೆಗೆ ಸ್ಪರ್ಧಿಸಲಿದ್ದಾರೆ

ರಮ್ಯಾ ಲೋಕಸಭೆಗೆ ಸ್ಪರ್ಧಿಸಲಿದ್ದಾರೆ

'ಮಾಜಿ ಸಂಸದೆ ರಮ್ಯಾ ಅವರು ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ. ಅವರು ಮುಂದೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.ರಮ್ಯಾ ರಾಜ್ಯ ರಾಜಕಾರಣಕ್ಕೆ ಬರುತ್ತಾರೆ ಎನ್ನುವುದೆಲ್ಲಾ ಊಹಾಪೋಹ. ರಮ್ಯಾ ಅವರನ್ನು ವಿಧಾನಪರಿಷತ್‌ಗೆ ನಾಮಕರಣ ಮಾಡುವ ಯಾವುದೇ ಆಲೋಚನೆಯೂ ಇಲ್ಲ' ಎಂದು ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Mandya district incharge minister D.K.Shiva Kumar said that, 8 JDS suspended MLA's were in touch with him. He will come them if they wish to join Congress.
Please Wait while comments are loading...