ಸಕ್ಕರೆ ನಾಡಿನ ಕನ್ನಡ ಹಬ್ಬಕ್ಕೆ ಭರ್ಜರಿ ಸಜ್ಜು : ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ ಹೇಗಿದೆ..?
ಮಂಡ್ಯ, ನವೆಂಬರ್ 14: ಮಂಡ್ಯ ನಗರದಲ್ಲಿ ಡಿಸೆಂಬರ್ 20, 21, 22ರಂದು ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಹಬ್ಬ. ನಮ್ಮ ಮನೆಯ ಹಬ್ಬ. ಕುಟುಂಬದವರೊಂದಿಗೆ ಹಬ್ಬ ಆಚರಣೆ ಮಾಡುವಂತೆ ಜಿಲ್ಲೆಯ ಜನತೆ ಒಟ್ಟಾಗಿ ಕನ್ನಡ ಹಬ್ಬವನ್ನು ಆಚರಣೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಹೇಳಿದರು.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮಾಧ್ಯಮ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ಯಶಸ್ವಿಗೆ ಮಾಧ್ಯಮದ ಪಾತ್ರ ಬಹಳ ಮುಖ್ಯ. ಸಾಹಿತ್ಯ ಸಮ್ಮೇಳನದ ಕುರಿತು ಮಾಧ್ಯಮದಲ್ಲಿ ವ್ಯಾಪಕ ಪ್ರಚಾರ ನೀಡುವ ಮೂಲಕ ಸಮ್ಮೇಳನದ ಯಶಸ್ವಿಗೆ ಮಾಧ್ಯಮದವರು ಸಹಕರಿಸಬೇಕು ಎಂದರು.

ಇದು ಕನ್ನಡದ ಹಬ್ಬ, ನಮ್ಮ ಮನೆ ಹಬ್ಬ. ಕನ್ನಡದ ತೇರು ಎಳೆಯಲು ಎಲ್ಲರ ಸಹಕಾರ ಮುಖ್ಯ. ಮಾಧ್ಯಮದಲ್ಲಿ ಹೆಚ್ಚಿನ ಪ್ರಚಾರ ನೀಡಿ ಸಕ್ಕರೆಯ ನಾಡು ಅಕ್ಕರೆಯ ಬೀಡಿನ ಗಮಲನ್ನು ಜಗಕ್ಕೆ ಪಸರಿಸುವಂತೆ ಮಾಡಬೇಕು. ಮಂಡ್ಯ ಆತಿಥ್ಯಕ್ಕೆ ಹೆಸರುವಾಸಿ. ರಾಜ್ಯ, ಹೊರ ರಾಜ್ಯದಿಂದ ಆಗಮಿಸುವ ಸಾಹಿತ್ಯಾಸಕ್ತರು, ಮಾಧ್ಯಮ ಮಿತ್ರರ ಆತಿಥ್ಯಕ್ಕೆ ಯಾವುದೇ ಕುಂದುಕೊರತೆ ಉಂಟಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡಬಾರದು ಎಂದು ಸೂಚಿಸಿದರು.
ರಾಜ್ಯ, ಜಿಲ್ಲಾ, ತಾಲೂಕು ಹಾಗೂ ಸ್ಥಳೀಯ ಪತ್ರಿಕೆ ಮತ್ತು ಟಿವಿ ಚಾನೆಲ್ ಗಳು ಹೆಚ್ಚಿನ ಪ್ರಚಾರ ನೀಡಿ ನುಡಿ ಹಬ್ಬವನ್ನು ಯಶಸ್ವಿಗೊಳಿಸಬೇಕು. ಎನ್ ಸಿಸಿ, ಸ್ಕೌಟ್ಸ್ ಅಂಡ್ ಗೈಡ್ಸ್, ಹಾಗೂ ಎನ್ ಜಿಒಗಳಿಂದ ಸ್ವಯಂ ಸೇವಕರನ್ನು ನೇಮಿಸುಕೊಳ್ಳಬೇಕು. ನಮ್ಮನೆ ಕಾರ್ಯಕ್ರಮದಂತೆ ಕಾರ್ಯ ನಿರ್ವಹಿಸಬೇಕು. ಮಾಧ್ಯಮ ಸಂಸ್ಥೆಗಳಿಂದ ಸಮ್ಮೇಳನಕ್ಕೆ ಆಗಮಿಸುವವವರಿಗೆ ಸೂಕ್ತ ವಸತಿ ವ್ಯವಸ್ಥೆ, ವಾಹನ, ಊಟ, ತಿಂಡಿ ವ್ಯವಸ್ಥೆ ಆಗಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಕಾರ್ಯ ಆರಂಭ: ಜಿಲ್ಲಾಧಿಕಾರಿ ಕುಮಾರ್
ಸಾಹಿತ್ಯ ಸಮ್ಮೇಳನದ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ರಾಜ್ಯದ ನಾನಾ ಭಾಗಗಳಲ್ಲಿ ಸಂಚರಿಸುತ್ತಿರುವ ಜ್ಯೋತಿ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುತ್ತಿದೆ. ಎಲ್ಲೆಡೆ ನಿರೀಕ್ಷೆಗೂ ಮೀರಿ ರಥವನ್ನು ಬರಮಾಡಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕುಮಾರ್ ಅವರು ಹೇಳಿದರು.

ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕೆ ಸಾಕಷ್ಟು ಒತ್ತು ನೀಡಲಾಗುತ್ತಿದೆ. ಪ್ರಚಾರದ ರೂವಾರಿಗಳು ಮಾಧ್ಯಮದವರೇ. ಜನರನ್ನು ತಲುಪಲು ಮಾಧ್ಯಮಗಳ ಸಹಕಾರ ಬಹಳ ಮುಖ್ಯ. ಸಮ್ಮೇಳನದ ಯಶಸ್ವಿಗೆ ಎಲ್ಲರ ಸಲಹೆಗಳನ್ನು ಪಡೆದುಕೊಂಡು ಕಾರ್ಯರೂಪಕ್ಕೆ ತರಲಾಗುವುದು. ಮಾಧ್ಯಮ ಸಮನ್ವಯ ಸಮಿತಿ ಬಹಳ ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ. ಅಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರ ಕಾರ್ಯಕ್ಕೆ ಜಿಲ್ಲಾಡಳಿತ ವತಿಯಿಂದ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ರಾಜ್ಯ, ರಾಷ್ಟ್ರದ ನಾನಾ ಭಾಗಗಳಿಂದ ಬರುವವರಿಗೆ ಸಕಲ ವ್ಯವಸ್ಥೆ ಮಾಡಲಾಗುವುದು. ಊಟ, ಪುಸ್ತಕ ಮಳಿಗೆ, ವೇದಿಕೆ ಒಂದೇ ಕಡೆ ಇರುವಂತೆ ಜಾಗ ಗುರುತಿಸಲಾಗಿದೆ. ಎಲ್ಲಾ ಆಯಮದಲ್ಲಿ ಚರ್ಚಿಸಿ, ತಾಂತ್ರಿಕ ವರದಿ ಆಧರಿಸಿ ಜಾಗ ಗುರುತಿಸಲಾಗಿದೆ. ಸಂಚಾರ ದಟ್ಟಣೆ ಆಗದಂತೆ ಕ್ರಮವಹಿಸಲಾಗುವುದು ಎಂದು ಹೇಳಿದರು.
-
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications