87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಾವಾಗ?
ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಬರುವ ಡಿಸೆಂಬರ್‌ನಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ನಿಗದಿಗೊಳಿಸಲಾಗುವುದು ಎಂದು ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ತಿಳಿಸಿದರು.
ಮಂಡ್ಯ ನಗರದ ಎಸ್.ಬಿ ಸಮುದಾಯ ಭವನದಲ್ಲಿ ನಡೆದ ಸಮ್ಮೇಳನದ ಪುಸ್ತಕ ಪ್ರಕಟಣೆ ಸಮಿತಿಯ ಮೂರನೇ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಿಸೆಂಬರ್‌ನಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ಧತೆ ಮಾಡಲಾಗುವುದು ಎಂದು ಹೇಳಿದರು.

ತಾವು ಅಮೆರಿಕಾ ಪ್ರವಾಸ ಕೈಗೊಂಡ ವೇಳೆ ಮಂಡ್ಯದವರೂ ಸೇರಿದಂತೆ ಅನೇಕ ಕನ್ನಡಿಗರು ಅಮೆರಿಕದ ಉದ್ದಕ್ಕೂ ಉನ್ನತ ಹುದ್ದೆಗಳಲ್ಲಿ ಇದ್ದು ಮಂಡ್ಯ ಸಾಹಿತ್ಯ ಸಮ್ಮೇಳನದ ಬಗ್ಗೆ ತೀವ್ರ ಆಸಕ್ತಿ ಹೊಂದಿದ್ದಾರೆ. ಸುಮಾರು 500 ಜನ ವಿದೇಶಿ ಕನ್ನಡಿಗರು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
87 ಕೃತಿ ಹೊರತರಲು ನಿರ್ಧಾರ
ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 87 ಕೃತಿಗಳನ್ನು ಹೊರತರಲು ನಿರ್ಧರಿಸಲಾಗಿದ್ದು, ಜಿಲ್ಲೆಯ ಏಳು 'ತಾಲೂಕು ದರ್ಶನ' ಕೃತಿಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದರು.
ಈಗಾಗಲೇ 87 ಕೃತಿಗಳನ್ನು ಹೊರ ತರಲು ನಿರ್ಧರಿಸಲಾಗಿದ್ದು, ಅವುಗಳಲ್ಲಿ 35 ಪುಸ್ತಕಗಳನ್ನು ಜಿಲ್ಲೆಯ ಲೇಖಕರಿಂದ ಬರೆಸಲು ಯೋಚಿಸಲಾಗಿದೆ. ಜಿಲ್ಲೆಯ ಏಳು ತಾಲೂಕುಗಳ ತಾಲೂಕು ದರ್ಶನ ಕೃತಿಗಳು ಸೇರಿದ್ದು ತಾಲೂಕು ಕೇಂದ್ರಗಳ ಸ್ಥಳನಾಮ, ಸಂಸ್ಕೃತಿ, ಸಾಹಿತ್ಯ ತಾಲೂಕಿನ ಸಾಧಕರು, ಪ್ರವಾಸಿ ತಾಣಗಳು, ಪರಂಪರೆ,ಇತಿಹಾಸ ಸೇರಿದಂತೆ ಉಳಿದ ವಿಷಯಗಳ ಬಗ್ಗೆ ಸಮಿತಿ ಮುದ್ದೇಗೌಡರ ನೇತೃತ್ವದಲ್ಲಿ ಏಕರೂಪದ ನಿರ್ಣಯ ತೆಗೆದುಕೊಳ್ಳುತ್ತದೆ ಎಂದರು.
ಜನಸಾಮಾನ್ಯ ಓದುಗರನ್ನು ದೃಷ್ಟಿ ಇಟ್ಟುಕೊಂಡು ಪುಸ್ತಕ ರಚಿಸಬೇಕಾಗಿದ್ದು ಯಾವುದೇ ಟೀಕೆ ಟಿಪ್ಪಣಿಗಳಿಗೆ ಅವಕಾಶವಿಲ್ಲದಂತೆ ಬರುವ ಸವಾಲುಗಳನ್ನು ಎದುರಿಸಿ ಪುಸ್ತಕ ಸಮಿತಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಪುಸ್ತಕ ಸಮಿತಿಯ ಅಧ್ಯಕ್ಷ ಡಾ.ಹೆಚ್.ಎಸ್.ಮುದ್ದೇಗೌಡ ಮಾತನಾಡಿ, ಈ ಹಿಂದೆ ಪ್ರಕಟವಾಗಿರುವ 'ಸುವರ್ಣ ಮಂಡ್ಯ' ಜಿಲ್ಲಾ ಸಮ್ಮೇಳನ ಸ್ಮರಣ ಸಂಚಿಕೆಗಳನ್ನು ಮರು ಮುದ್ರಣ ಮಾಡುವುದರ ಜೊತೆಗೆ ಸೃಜನಾತ್ಮಕ ಬರಹಗಳನ್ನು ಬರೆಯಲು ಉದಯೋನ್ಮುಖ ಲೇಖಕರು ಮತ್ತು ಆಯಾ ಕ್ಷೇತ್ರದಲ್ಲಿ ಪರಿಣತಿ ಇರುವವರಿಗೆ ಅವಕಾಶ ನೀಡಲಾಗುವುದು. ಜಿಲ್ಲೆಯ ಕವಿಗಳು ಬರೆಯುವ ಪ್ರಾತಿನಿಧಿಕ ಕವನ ಸಂಕಲನವೊಂದನ್ನು ಹೊರತರಲಾಗುವುದು. ಪುಸ್ತಕಗಳು ಕನಿಷ್ಠ 100-150 ಪುಟಗಳ ಮಿತಿಯಲ್ಲಿರಲಿ ಎಂಬ ಸಲಹೆ ನೀಡಿದರು.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications