ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಒಕ್ಕಲಿಗ ಸಮುದಾಯಕ್ಕೆ ಮಿಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಮಂಡ್ಯದಲ್ಲಿ ಪತ್ರ ಚಳವಳಿ

By ಮಂಡ್ಯ, ಪ್ರತಿನಿಧಿ
|
Google Oneindia Kannada News

ಮಂಡ್ಯ, ಡಿಸೆಂಬರ್‌ 26: ಆರ್ಥಿಕವಾಗಿ ಹಿಂದುಳಿದಿರುವ ಒಕ್ಕಲಿಗರ ಸಮುದಾಯಕ್ಕೆ ಮೀಸಲಾತಿಯನ್ನು ಸರ್ಕಾರ ಹೆಚ್ಚಳ ಮಾಡಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಎನ್.ಚಲುವರಾಯಸ್ವಾಮಿ ಆಗ್ರಹಿಸಿದರು.

ನಗರದ ಗಾಂಧಿ ಭವನದಲ್ಲಿ ವಿಶ್ವ ಒಕ್ಕಲಿಗರ ಜನ ಜಾಗೃತಿ ಸಂಘ, ಒಕ್ಕಲಿಗ ಧರ್ಮ ಮಹಾಸಭಾದ ವತಿಯಿಂದ ನಡೆದ ಒಕ್ಕಲಿಗರ ಜನಸಂಖ್ಯಾ ಆಧಾರದ ಮೇಲೆ ಶೇ.18 ರಷ್ಟು ಮೀಸಲಾತಿಗಾಗಿ ಸರ್ಕಾರವನ್ನು ಆಗ್ರಹಿಸಿ ಪತ್ರ ಚಳವಳಿ ಹಾಗೂ ಪ್ರಚಾರಾಂದೋಲನ ಭಿತ್ತಿ ಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಒಕ್ಕಲಿಗರಿಗೆ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಬೇಕು ಎಂದರು.

ಒಕ್ಕಲಿಗರಿಗೆ ಶೇಕಡಾ 10ರಷ್ಟು ಮೀಸಲಾತಿ ಕೊಡಬೇಕು. ಒಕ್ಕಲಿಗ ಸಮುದಾಯದಲ್ಲಿ ರೈತರು, ಯುವಕರು ಸೇರಿದಂತೆ ಎಲ್ಲರಿಗೂ ಅನ್ಯಾಯವಾಗುತ್ತಿದೆ. ಏಕೆಂದರೆ ಮೀಸಲಾತಿಯಲ್ಲಿ ಅನ್ಯಾಯವಾಗಿದೆ. ಪಕ್ಷದ ವರಿಷ್ಠರನ್ನು ನಾವೆಲ್ಲರೂ ಒಪ್ಪಿಸುವ ಮೂಲಕ ಹೋರಾಟ ಮಾಡೋಣ, ಚುಂಚಶ್ರೀಗಳ ಆಶೀರ್ವಾದ ಹಾಗೂ ಅವರ ಸಲಹೆ ಮೇರೆಗೆ ಹೋರಾಟ ಮಾಡೋಣ ಎಂದು ಜನರಿಗೆ ತಿಳಿಸಿದರು.

ಒಕ್ಕಲಿಗರು ಯಾವುದೇ ಸಮಾಜವನ್ನು ಕಡೆಗಣಿಸಿಲ್ಲ

ಒಕ್ಕಲಿಗರು ಯಾವುದೇ ಸಮಾಜವನ್ನು ಕಡೆಗಣಿಸಿಲ್ಲ

ಮೀಸಲಾತಿ ಹೋರಾಟ ನಮ್ಮ ಸಮುದಾಯಕ್ಕೆ ಸಿಗಬೇಕು. ಬೇರೆ ಎಲ್ಲ ಸಮಾಜದಲ್ಲಿಯೂ ಅನ್ಯಾಯವಾಗಿರುವುದು ಒಕ್ಕಲಿಗರ ಸಮುದಾಯಕ್ಕೆ, ಒಕ್ಕಲಿಗರು ಯಾವುದೇ ಸಮಾಜವನ್ನು ಕಡೆಗಣಿಸಿಲ್ಲ, ಯಾರನ್ನೂ ತೇಜೋವಧೆ ಮಾಡಿಲ್ಲ, ರೈತರ ಪರವಾಗಿರುವ ಸಮುದಾಯ ಒಕ್ಕಲಿಗರ ಸಮುದಾಯವಾಗಿದೆ. ಆದರೆ ನಮ್ಮ ಸಮುದಾಯಕ್ಕೆ ನ್ಯಾಯ ಕೊಡಿ ಎಂಬ ಕೂಗು ಬರುತ್ತಿದೆ. ಬೇರೆ ಸಮಾಜಕ್ಕೆ ಹೋಲಿಸಿಕೊಂಡರೆ ಒಕ್ಕಲಿಗರ ಸಮಾಜವು ಹೋರಾಟದಲ್ಲಿ ಹಿಂದೆ ಉಳಿದಿದೆ ಎಂದು ಎನ್.ಚಲುವರಾಯಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳವಾಗಬೇಕು

ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳವಾಗಬೇಕು

ಮಾತು ಮುಂದುವರಿಸಿದ ಅವರು, ಒಕ್ಕಲಿಗ ಸಮಾಜವು ಹೋರಾಟಕ್ಕೆ ಸಿದ್ಧವಾಗಬೇಕು. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕಾದರೆ ಹೋರಾಟದ ಅನಿವಾರ್ಯತೆ ಇದ್ದೇ ಇರುತ್ತದೆ. ಒಕ್ಕಲಿಗರ ಸಮಾಜದ ವಿದ್ಯಾರ್ಥಿಗಳು ಇರುವ ಮೀಸಲಾತಿಯಲ್ಲಿ ಹೇಗೋ ಕಷ್ಟಪಟ್ಟು ಕೆಲಸಗಳನ್ನು ತೆಗೆದುಕೊಂಡಿದ್ದಾರೆ. ಇಂತಹ ಹರಸಾಹಸವನ್ನು ಎಲ್ಲಿ ತನಕ ಮಾಡಬೇಕು. ಇನ್ನಾದರೂ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳವಾಗಬೇಕು. ನಮ್ಮ ಸಮುದಾಯದ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಹೆಚ್ಚಳ ಮಾಡಬೇಕು. ಮುಖ್ಯವಾಹಿನಿಗೆ ನಮ್ಮ ಸಮುದಾಯ ಬರಬೇಕು. ಪ್ರಶ್ನೆ ಮಾಡುವ ಬೆಳವಣಿಗೆ ಆಗಬೇಕು ಎಂದು ಸಲಹೆ ನೀಡಿದರು.

ಒಕ್ಕಲಿಗರ ಬೇರು ಎಲ್ಲಿದೆ ಎನ್ನುವುದು ಗೊತ್ತಿಲ್ಲ

ಒಕ್ಕಲಿಗರ ಬೇರು ಎಲ್ಲಿದೆ ಎನ್ನುವುದು ಗೊತ್ತಿಲ್ಲ

ಈ ವೇಳೆ ಉಪಸ್ಥಿತರಿದ್ದ ಕುಣಿಗಲ್ ಅರೇ ಶಂಕರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಸದ್ದಿರಾಮ ಚೈತನ್ಯ ಸ್ವಾಮೀಜಿ ಮಾತನಾಡಿ" ಇಡೀ ಭಾರತದಲ್ಲಿ ಎರಡು ರೀತಿಯ ಮೀಸಲಾತಿಯಿದೆ. ಒಂದು ಧರ್ಮಾಧರಿತ ಮೀಸಲಾತಿ, ಮತ್ತೊಂದು ಜಾತ್ಯಾತೀತ ಮೀಸಲಾತಿ ಇದೆ. ಧರ್ಮದಾರಿತ ಮುಸ್ಲಿಂ ಹಾಗೂ ಕ್ರಿಶ್ಚಿಯನ್‌ ಅವರಿಗೆ ಇದೆ. ಜಾತಿವಾರುಗಳಿಗೆ ಬಂದರೆ ಅದರಲ್ಲಿಯೂ ಕರ್ನಾಟದಲ್ಲಿ ಒಕ್ಕಲಿಗರ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಒಕ್ಕಲಿಗರ ಬೇರು ಎಲ್ಲಿದೆ ಎಂಬುದು ಗೊತ್ತಿಲ್ಲ ಎಂದರು.

ಒಕ್ಕಲಿಗರ ಸಮುದಾಯ ಮೆಡಿಕಲ್, ಇಂಜಿನಿಯರಿಂಗ್ ಸೇರಿದಂತೆ ವಿವಿಧ ತಾಂತ್ರಿಕ ವಿಷಯಗಳಲ್ಲಿ ಒಕ್ಕಲಿಗ ವಿದ್ಯಾರ್ಥಿಯು ಅನ್ಯ ಸಮುದಾಯದ ವಿದ್ಯಾರ್ಥಿಗಿಂತ ಹೆಚ್ಚು ಅಂಕ ಪಡೆದಿದ್ದರೂ ಸಹ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗುವುದಿಲ್ಲ. ಕಡಿಮೆ ಅಂಕ ಪಡೆದಿರುವ ಬೇರೆ ಸಮುದಾಯದ ವಿದ್ಯಾರ್ಥಿಗಳಿಗೆ ಅವಕಾಶ ಸಿಗುತ್ತಿದೆ. ಕೇವಲ ಒಕ್ಕಲಿಗರ ಪ್ರಭಾವಿಗಳು ಎಂಬುದರಲ್ಲಿಯೇ ಮುಳುಗಿ ಹೋಗಿದ್ದೇವೆ, ಹಾಗಾಗಿ ಮೀಸಲಾತಿ ಹೆಚ್ಚಳಕ್ಕೆ ಪ್ರತಿಭಟನೆ ಆರಂಭಿಸಬೇಕು ಎಂದು ಆಗ್ರಹಿಸಿದರು.

ಒಕ್ಕಲಿಗರ ಸಮುದಾಯಕ್ಕೆ ಮಿಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರಚಾರಾಂದೋಲನ

ಒಕ್ಕಲಿಗರ ಸಮುದಾಯಕ್ಕೆ ಮಿಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರಚಾರಾಂದೋಲನ

ಇದೇ ಸಂದರ್ಭದಲ್ಲಿ ಒಕ್ಕಲಿಗರ ಸಮುದಾಯಕ್ಕೆ ಮಿಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪತ್ರ ಚಳವಳಿ ಹಾಗೂ ಪ್ರಚಾರಾಂದೋಲನದ ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಯುವ ರತ್ನ ಪ್ರಶಸ್ತಿ ಪುರಸ್ಕೃತ ಎಂ.ಜಿ.ಸಿದ್ದರೂಢ(ಸತೀಶ್‌ಗೌಡ), ಕಸ್ತೂರಿ ಕನ್ನಡ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್‌ಗೌಡ, ವಿಶ್ವ ಒಕ್ಕಲಿಗರ ಜನಜಾಗೃತಿ ಸಂಘದ ರಾಜ್ಯಾಧ್ಯಕ್ಷ ಕೆ.ಎಂ.ರಾಮಕೃಷ್ಣ, ಕರುನಾಡು ಸೇವಕರು ಸಂಘಟನೆ ಮೈಸೂರು ವಿಭಾಗೀಯ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ, ಮುಖಂಡರಾದ ಸಿ.ಎಂ.ಕ್ರಾಂತಿ ಸಿಂಹ, ಉಮಾಶಂಕರ್, ಶಿವಲಿಂಗೇಗೌಡ ಎಚ್.ಸಿ, ಲಕ್ಷ್ಮಿಮಂಜುಳ ಬೋರೇಗೌಡ ಸೇರಿದಂತೆ ಇತರರು ಭಾಗಿಯಾಗಿದ್ದರು.

English summary
KPCC Vice President N. Chaluvarayaswamy demanding an increase reservation for the Vokkaliga community.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X