ಮಂಡ್ಯ: ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿ ಅಮಾನತು

ಮಂಡ್ಯ, ಮೇ 31: ಆಟೋ ಚಾಲಕರೊಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಪಾಳ ಮೋಕ್ಷ ಮಾಡಿದ ಪೊಲೀಸ್ ಕಾನ್ಸ್‌ಸ್ಟೇಬಲ್‌ ಮಹೇಂದ್ರ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರು ಅಮಾನತು ಮಾಡಿದ್ದಾರೆ.

ಪೊಲೀಸ್ ಕಾನ್ಸ್‌ಸ್ಟೇಬಲ್‌ ಸಾರ್ವಜನಿಕವಾಗಿ ಎಲ್ಲರ ಮುಂದೆ ಹಲ್ಲೆ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು, ಕೆಲವರು ಟ್ವೀಟ್‌ ಮೂಲಕ ಮಂಡ್ಯ ಎಸ್‌ಪಿ ಹಾಗೂ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ಈ ಕೃತ್ಯವನ್ನು ತಂದು ಕ್ರಮಕ್ಕೆ ಆಗ್ರಹಿಸಿದ್ದರು ಎನ್ನಲಾಗಿದೆ.

Auto Driver In Mandya

ಮಂಡ್ಯ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾನ್ಸ್‌ಸ್ಟೇಬಲ್‌ ಮಹೇಂದ್ರ ಅವರು ಆಟೋ ಚಾಲಕನಿಗೆ ಕಪಾಳ ಮೋಕ್ಷ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿರುವ ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯಿಸಿ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಕಾನ್ಸ್‌ಸ್ಟೇಬಲ್‌ನನ್ನು ಅಮಾನತುಗೊಳಿಸಲಾಗಿದೆ.

ಇಂತಹ ಅನುಚಿತ ವರ್ತನೆಯನ್ನು ಸಹಿಸುವುದಿಲ್ಲ. ಸಭ್ಯತೆಯೇ ಸಾರ್ವಜನಿಕರು ಪೊಲೀಸರಿಂದ ನಿರೀಕ್ಷಿಸುವ ಕನಿಷ್ಠ ವಿಷಯವಾಗಿದೆ. ಕಾನ್ಸ್‌ಸ್ಟೇಬಲ್‌ ಆಟೋ ಚಾಲಕನ ಮೇಲೆ ಹಲ್ಲೆ ನಡೆಸುವಾಗ ಸ್ಥಳದಲ್ಲೇ ಪೊಲೀಸ್ ಇನ್ಸ್‌ಪೆಕ್ಟರ್ ಜೊತೆಯಲ್ಲೇ ಇದ್ದರು, ಅವರ ವಿರುದ್ಧವೂ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಹುಬ್ಬಳ್ಳಿ: ನಳಂದಾ ಕಾಲೇಜು ಬಳಿ ಭೀಕರ ಅಪಘಾತ, ಬೈಕ್ ಸವಾರ ಸಾವು

ಹುಬ್ಬಳ್ಳಿ: ಮುಂದೆ ಹೋಗುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ತಲೆ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಗದಗ ರಸ್ತೆಯ ನಳಂದಾ ಕಾಲೇಜು ಬಳಿ ನಡೆದಿದೆ.

Auto Driver In Mandya

ಇಂದು ಮಧ್ಯಾಹ್ನ 12.30ರ ಸುಮಾರಿಗೆ ನಳಂದಾ ಕಾಲೇಜು ಬಳಿ ಹುಬ್ಬಳ್ಳಿ ಕಡೆಯಿಂದ ಗದಗ ಕಡೆಗೆ ಹೊರಟಿದ್ದ ಪಾರ್ಚುನರ್ ಕಾರು ಮುಂದೆ ಹೋಗುತ್ತಿದ್ದ ಆಕ್ಟೀವ್ ಹೋಂಡಾ ಬೈಕ್‌ಗೆ ಅತಿ ಜೋರಾಗಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹೊಲದಲ್ಲಿ ಹೋಗಿ ಬಿದಿದ್ದೆ. ಬೈಕ್ ಸವಾರನ ತಲೆ ಛಿದ್ರ ಛಿದ್ರವಾಗಿ ನಡು ರಸ್ತೆಯಲ್ಲಿಯೇ ಸಾವನಪ್ಪಿದ್ದಾನೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಬೈಕ್ ಸವಾರನ ಶವವನ್ನು ಕಿಮ್ಸ್ ಶವಾಗಾರಕ್ಕೆ ರವಾನಿಸಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+