• search
  • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಂಗಾಪುರ ಸರ್ಕಾರಿ ಶಾಲೆಯಲ್ಲಿ ಕುಕ್ಕರ್ ಸ್ಫೋಟ: ವಿದ್ಯಾರ್ಥಿನಿಗೆ ಗಾಯ

By ಮಂಡ್ಯ ಪ್ರತಿನಿಧಿ
|

ಪಾಂಡವಪುರ, ಜನವರಿ 02: ಸರ್ಕಾರಿ ಶಾಲೆಯಲ್ಲಿ ಕುಕ್ಕರ್ ಸ್ಫೋಟಗೊಂಡು ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಸಂಗಾಪುರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಸಿಂಚನ(9) ಗಾಯಗೊಂಡಿರುವ ವಿದ್ಯಾರ್ಥಿನಿ. ಮಂಗಳವಾರ ಮಧ್ಯಾಹ್ನ ಬಿಸಿಯೂಟದ ಅಡುಗೆ ಸಹಾಯಕಿಯರು ಅಡುಗೆ ಸಹಾಯಕ್ಕಾಗಿ ವಿದ್ಯಾರ್ಥಿನಿಯನ್ನು ಅಡುಗೆ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ಈ ಸಮಯದಲ್ಲಿ ಗ್ಯಾಸ್ ಒಲೆಯ ಮೇಲಿನ ಕುಕ್ಕರ್ ಸ್ಫೋಟಗೊಂಡಿದೆ.

ಚೀನಾದ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 22 ಮಂದಿ ಸಾವು

ಈ ವೇಳೆ ವಿದ್ಯಾರ್ಥಿನಿ ಸಿಂಚನಳ ಮೈಮೇಲೆ ಕುಕ್ಕರ್ ನ ಬಿಸಿನೀರು ಬಿದ್ದ ಪರಿಣಾಮ ಸಿಂಚನಳ ಮೈ, ಕೈಕಾಲುಗಳು ಸುಟ್ಟುಹೋಗಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ತಕ್ಷಣ ಗಾಯಗೊಂಡ ವಿದ್ಯಾರ್ಥಿನಿಯನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಗಿದ್ದು ಅಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಅಸ್ಸಾಂ: ಮಾರ್ಕೆಟ್‌ನಲ್ಲಿ ಗ್ರೆನೇಡ್ ಸ್ಫೋಟದಿಂದ ಇಬ್ಬರ ಸಾವು

ವಿಷಯ ತಿಳಿದು ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಶ್ವರಿ ಘಟನಾ ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.

English summary
A student was injured in the cooker blast at the Sangapura government school.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X