ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇಶದ ಯುವ ಜನತೆಗಾಗಿ ಅಗ್ನಿಪಥ್ ಯೋಜನೆ ಜಾರಿ, ವಿರೋಧ ಬೇಡ :ಎಸ್.ಎಂ. ಕೃಷ್ಣ

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮಂಡ್ಯ, ಜೂನ್ 22 : ದೇಶದ ಯುವ ಸಮುದಾಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರಸರ್ಕಾರ ನೂತನವಾಗಿ ಜಾರಿಗೊಳಿಸಿರುವ ಅಗ್ನಿಪಥ್ ಯೋಜನೆಗೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹೇಳಿ ಹೇಳಿದ್ದಾರೆ.

ತಾಲೂಕಿನ ಸೋಮನಹಳ್ಳಿಯಲ್ಲಿ ದಿವಂಗತ ಎಸ್.ಎಂ.ಶಂಕರ್ ಮೆಮೋರಿಯಲ್ ಟ್ರಸ್ಟ್‌ಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದುವರೆದ ದೇಶಗಳಾದ ಅಮೆರಿಕಾ, ಬ್ರಿಟನ್ ಸೇರಿದಂತೆ ಹಲವು ದೇಶಗಳಲ್ಲಿ ಈ ವ್ಯವಸ್ಥೆ ಜಾರಿಯಲ್ಲಿದೆ. 20 ವರ್ಷ ತುಂಬಿದ ಯುವಕರು ಎರಡು ವರ್ಷ ಸೈನಿಕ ಶಿಕ್ಷಣ ಕಲಿಯುವುದು ಕಡ್ಡಾಯವಾಗಿದೆ. ಇಂತಹ ಆದರ್ಶಪ್ರಾಯ ಯೋಜನೆಯನ್ನು ಜಾರಿಗೊಳಿಸಿ ಔನ್ನತ್ಯ ಸಾಧಿಸಿವೆ. ಆದರೆ, ನಮ್ಮ ದೇಶದಲ್ಲಿ ಈ ಯೋಜನೆಗೆ ವಿನೂತನ ಪ್ರಸ್ತಾವನೆ ಕಂಡುಬರುತ್ತಿದೆ ಎಂದು ಬೇಸರದಿಂದ ನುಡಿದರು.

ಅಗ್ನಿಪಥ್: ಅಗ್ನಿವೀರರಿಗೆ ಕಂಪನಿಗಳ ಉದ್ಯೋಗದ ಭರವಸೆಅಗ್ನಿಪಥ್: ಅಗ್ನಿವೀರರಿಗೆ ಕಂಪನಿಗಳ ಉದ್ಯೋಗದ ಭರವಸೆ

ಅಗ್ನಿವೀರರು ನಾಲ್ಕು ವರ್ಷ ಸೈನ್ಯದಲ್ಲಿ ಕೆಲಸ ನಿರ್ವಹಿಸಿದ ಬಳಿಕ ಬೇರೆ ಕಡೆಗಳಲ್ಲಿ ಉದ್ಯೋಗಗಳನ್ನು ಅವಲಂಬಿಸುವುದಕ್ಕೆ ಅವಕಾಶವಿದೆ. ಮಿಲಿಟರಿಯ ವಿವಿಧ ವಿಭಾಗಗಳು, ಖಾಸಗಿ ಕಂಪನಿಗಳು, ಸರ್ಕಾರಿ ಹುದ್ದೆಗಳಲ್ಲೂ ಮೀಸಲಾತಿ ನೀಡುತ್ತಿರುವುದರಿಂದ ಅಗ್ನಿವೀರರಿಗೆ ಉದ್ಯೋಗದ ವಿಪುಲ ಅವಕಾಶಗಳು ದೊರಕಿದಂತಾಗಿವೆ. ಇದನ್ನು ರಾಜಕೀಯ ಹಿನ್ನೆಲೆಯಿಂದ ನೋಡದೆ ದೇಶದ ಅಭಿವೃದ್ಧಿ ದೃಷ್ಟಿಯಿಂದ ನೋಡುವಂತೆ ಸಲಹೆ ನೀಡಿದರು.

Agnipath Scheme Implemented for Youth,dont oppose it: SM Krishna

ಅಭಿವೃದ್ಧಿಶೀಲ ರಾಷ್ಟ್ರಗಳು ಇಂತಹ ಯೋಜನೆಗಳಿಂದ ಪ್ರಗತಿಯತ್ತ ದಾಪುಗಾಲಿಟ್ಟಿವೆ. ಭಾರತವೂ ಆ ದಿಸೆಯಲ್ಲಿ ಹೊಸ ಹೆಜ್ಜೆಯನ್ನಿಟ್ಟಿದೆ. ಅದಕ್ಕೆ ಎಲ್ಲರೂ ಸಹಕಾರಿಯಾಗಿ ನಿಲ್ಲಬೇಕು. ಅಗ್ನಿಪಥ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವುದು ನನಗೆ ಅರ್ಥವಾಗುತ್ತಿಲ್ಲ. ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಎಲ್ಲರೂ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಅಗ್ನಿಪಥ್‌ ಯೋಜನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ದೋವಲ್‌ಅಗ್ನಿಪಥ್‌ ಯೋಜನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ದೋವಲ್‌

ರಾಜಕಾರಣ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಎಸ್.ಎಂ.ಕೃಷ್ಣ ಅವರು, "ನಾನು ನನ್ನ ಕುಟುಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದೇನೆ. ಇಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಕುರಿತು ಮಾತನಾಡುವುದಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಕ್ಷೇತ್ರದ ಶಾಸಕ ಡಿ.ಸಿ.ತಮ್ಮಣ್ಣನವರು ಬಂದಿದ್ದಾರೆ. ಇಲ್ಲಿ ರಾಜಕಾರಣದ ಬಗ್ಗೆ ಮಾತನಾಡುವುದು ಅಪ್ರಸ್ತುತ," ಎಂದು ಹೇಳಿದರು.

Agnipath Scheme Implemented for Youth,dont oppose it: SM Krishna

2023ರ ಚುನಾವಣೆಯಲ್ಲಿ ತಮ್ಮ ರಾಜಕೀಯ ನಿಲುವೇನು ಎಂದು ಕೇಳಿದಾಗ, ನಾವಿನ್ನೂ 2022ರಲ್ಲಿದ್ದೇವೆ. 2023 ಬಂದಾಗ ಯೋಚಿಸೋಣ. ಅದರ ಬಗ್ಗೆ ಈಗಲೇ ತಲೆಕೆಡಿಸಿಕೊಳ್ಳುವುದು ಬೇಡ ಎಂದರು. ಕುಟುಂಬದವರು ರಾಜಕೀಯ ಪ್ರವೇಶಿಸುವರೇ ಎಂದು ಕೇಳಿದಾಗಲೂ ವೌನವೇ ಉತ್ತರವಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ನ್ನು ಗುರುಚರಣ್‌ಗೆ ಘೋಷಿಸಿದ್ದು, ಚುನಾವಣೆಗೆ ಸ್ಪರ್ಧಿಸಿದರೆ ಗೆಲ್ಲುವರೇ ಎಂದು ಕೇಳಿದಾಗ, ಜನಬೆಂಬಲವಿದ್ದರೆ ಗೆದ್ದೇ ಗೆಲ್ಲುತ್ತಾರೆ ಎಂದ ಎಸ್.ಎಂ.ಕೃಷ್ಣ ಅವರು, ನಿಮ್ಮ ಕುಟುಂಬದಿಂದ ಬೇರೆಯವರು ಮದ್ದೂರು ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿಯುವ ವದಂತಿಗಳು ಹರಡಿರುವ ಬಗ್ಗೆ ಪ್ರಶ್ನಿಸಿದಾಗ, ವದಂತಿಗಳು ವದಂತಿಗಳಾಗಿಯೇ ಉಳಿಯಲಿವೆ. ಆಧಾರರಹಿತ ವದಂತಿಗಳಿಗೆ ಸೊಪ್ಪು ಹಾಕಬೇಡಿ ಎಂದು ಹೇಳಿದರು.

English summary
Centre government implemented Agnipath scheme for country's youth. all countries already implemented this plan and success, SM krishna said in Mandya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X