ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

KRS ನಿಂದ ನಾಲೆಗಳಿಗೆ ನೀರು; ಕೃಷಿ ಚಟುವಟಿಕೆ ಆರಂಭ

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮಂಡ್ಯ, ಜುಲೈ 30: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗಿದೆ. ಹೀಗಾಗಿ ಕೆಆರ್ ಎಸ್ ಜಲಾಶಯಕ್ಕೆ ಒಳಹರಿವಿನ ಪ್ರಮಾಣವೂ ಏರಿಕೆಯಾಗಿದ್ದು, ನಾಲೆಗಳಿಗೆ ನಿನ್ನೆ ನೀರು ಹರಿಸಲಾಗಿದೆ.

Recommended Video

Hardik Pandya And Natasa Stankovic Blessed With A Baby Boy | Oneindia Kannada

ಕೆಲ ದಿನಗಳ ಹಿಂದಷ್ಟೇ ನಡೆದಿದ್ದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕಬಿನಿ ಹಾಗೂ ಕೆಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ಜುಲೈ 28ರಂದು ನೀರು ಹರಿಸಬೇಕು, ಹಾರಂಗಿ ಜಲಾಶಯದಿಂದಲೂ ಅದೇ ದಿನ ಇಲ್ಲವೇ ಆದಷ್ಟು ಶೀಘ್ರವಾಗಿ ನೀರು ಬಿಡಲು ಕ್ರಮ ಕೈಗೊಳ್ಳಿ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸರ್ಕಾರದ ಆದೇಶದ‌ ಮೇರೆಗೆ ನಿನ್ನೆ ಕೆಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲಾಗಿದೆ.

Agriculture Activities Started As Water Released To Canals From KRS

 ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾದ ಮಳೆ; ಕೆಆರ್ ಎಸ್ ಒಳಹರಿವು ಹೆಚ್ಚಳ ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾದ ಮಳೆ; ಕೆಆರ್ ಎಸ್ ಒಳಹರಿವು ಹೆಚ್ಚಳ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ‌ಎಸ್ ಜಲಾಶಯದಲ್ಲಿ ಈಚೆಗೆ ಮಳೆಯಿಂದಾಗಿ ನೀರಿನ ಒಳ ಹರಿವು ಹೆಚ್ಚಾಗಿ ಜಲಾಶಯದ ನೀರಿನ ಮಟ್ಟ 107 ಅಡಿಗೆ ತಲುಪಿತ್ತು. ಇದೀಗ ನಾಲೆಗಳಿಗೆ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ರೈತರು ಸಂತಸಗೊಂಡಿದ್ದು, ಕೃಷಿ ಕಾರ್ಯಗಳನ್ನು ಆರಂಭಿಸುತ್ತಿದ್ದಾರೆ. ನೀರು ಬಿಡುತ್ತಿದ್ದಂತೆ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ಗರಿಗೆದರಲಿವೆ.

English summary
Heavy rainfall has been reported in the cauvery basin this time. Thus the inflow to the KRS reservoir has also increased and the water released to canals yesterday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X