ಕೇಂದ್ರ ಸರ್ಕಾರ ಸಂವಿಧಾನವನ್ನು ತಿರುಚುವ ಪ್ರಯತ್ನ ಮಾಡುತ್ತಿದೆ - ಮಲ್ಲಿಕಾರ್ಜುನ ಖರ್ಗೆ ಆರೋಪ

ಮಂಡ್ಯ, ಏಪ್ರಿಲ್‌30: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನವನ್ನು ತಿರುಚುವ ಪ್ರಯತ್ನ ಮಾಡತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತದಾರರಲ್ಲಿ ಮನವಿ ಮಾಡಿದರು.

ಪಟ್ಟಣದ ಭಕ್ತ ಕನಕದಾಸ ಕ್ರೀಡಾಂಗಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇವತ್ತಿನ ಸರ್ಕಾರ ಸಂವಿಧಾನ ತಿರುಚಿವ ಕೆಲಸ ಮಾಡುತ್ತಿರುವುದರಿಂದ ಕರ್ನಾಟಕದ ಚುನಾವಣೆ ಬಹಳ ಮಹತ್ವವನ್ನು ಪಡೆದುಕೊಂಡಿದೆ. ಪ್ರಜಾಪ್ರಭತ್ವವನ್ನು ನಾಶಪಡಿಸಿದರ ಓಟಿನ ಅಧಿಕಾರವನ್ನು ಇಲ್ಲದಂತೆ ಮಾಡುತ್ತಾರೆ. ಅಂಬೇಡ್ಕರ್ ಮತ್ತು ನೆಹರು ಕೊಟ್ಟ ಓಟಿನ ಅಧಿಕಾರದಿಂದಲೇ ಇಂದು ಓಟಿಗಾಗಿ ಮನೆ ಬಾಗಿಲಿಗೆ ಬರುತ್ತಿದ್ದಾರೆ. ನಮ್ಮ ಹಕ್ಕುಗಳ ರಕ್ಷಣೆಗಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.

AICC President Mallikarjun Kharge Lashes Out At BJP Government

ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ದೂರವಿಡಬೇಕಾದರೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ಹಲವಾರು ವರ್ಷ ಆಳ್ವಿಕೆ ನಡೆಸಿರುವ ಕಾಂಗ್ರೆಸ್ ಪಕ್ಷ ಏನು ಮಾಡಿದೆ ಎಂದು ಪ್ರಶ್ನೆ ಮಾಡುತ್ತಾರೆ, ಶಿಕ್ಷಣವಂತರನ್ನು ಹೆಚ್ಚು ಮಾಡಿದೆ. ಜನರ ಆರೋಗ್ಯಕ್ಕಾಗಿ ಆಸ್ಪತ್ರೆಗಳನ್ನು ನಿರ್ಮಿಸಿದೆ, ಉದ್ಯೋಗಕ್ಕಾಗಿ ಹಲವಾರು ಕಾರ್ಖಾನೆಗಳು ಮತ್ತು ಉದ್ಯಮಗಳನ್ನು ನಿರ್ಮಿಸುವುದರ ಜೊತೆಗೆ ಗ್ರಾಮೀಣ ಪ್ರದೇಶಕ್ಕೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದ್ದು, ಹಿಂದಿನಿಂದಲೂ ನುಡಿದಂತೆ ನಡೆಯುವ ಸರ್ಕಾರ ಕಾಂಗ್ರೆಸ್ ಪಕ್ಷವಾಗಿದೆ ಎಂದರು.

ನಿರುದ್ಯೋಗಿಗಳಿಗೆ ಉದ್ಯೋಗ ನೀಡುತ್ತೇವೆಂದು ಹೇಳುವ ಬಿಜೆಪಿ ಸರ್ಕಾರ ಉದ್ಯೋಗ ನೀಡುವಲ್ಲಿ ವಿಫಲ ಕಂಡಿದೆ. ಆಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟದಲ್ಲಿ ಬದುಕುತ್ತಿದ್ದಾರೆ. ಬೋಗಸ್ ಮಾತು, ಸುಳ್ಳು ಹೇಳುವುದು ಬಿಜೆಪಿಯ ಸಾಧನೆಯಾಗಿದೆ. ನಿಜ ಹಾಗೂ ಬಡವರ ಪರ ಇರುವ ಪಕ್ಷ ಕಾಂಗ್ರೆಸ್ ಪಕ್ಷವಾಗಿದ್ದು, ಕಾರ್ಮಿಕರಿಗಾಗಿ ಹಲವು ಕಾನೂನು ತಂದಿದ್ದೇವೆ ಆದರೆ ಮೋದಿ ಸರ್ಕಾರ ಆ ಎಲ್ಲಾ ಕಾನೂನು ತೆಗೆದಿದ್ದಾರೆ ಎಂದು ಆರೋಪಿಸಿದರು.

AICC President Mallikarjun Kharge Lashes Out At BJP Government

ಎಸ್ಟಿ ಎಸ್ಟಿಗಡ ಬಜೆಟ್ ಇರಲಿಲ್ಲ, ಕಾಂಗ್ರೆಸ್ ಪಕ್ಷ ಅಧಿಕಾರ ಬಂದ ಬಳಿಕ ಜನಸಂಖ್ಯೆ ಆಧಾರದ ಮೇಲೆ ಬಜೆಟ್ ಕೊಡುವುದನ್ನು ಪ್ರಾರಂಭಿಸಲಾಯಿತು. ಸಿದ್ದರಾಮಯ್ಯ ಎಸ್ಪಿಪಿ ಹಣ ಕೊಟ್ಟು ಅನುಕೂಲ ಮಾಡಿಕೊಟ್ಟರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳ್ಳೆಯ ಕಾರ್ಯಕ್ರಮ ಜಾರಿಯಾಗುತ್ತವೆ, ಗೃಹ ಜ್ಯೋತಿ 200 ಯುನಿಟ್ ಉಚಿತ.ವರ್ಷಕ್ಕೆ 24 ಸಾವಿರ ಮಹಿಳೆಯರಿಗೆ ಹಣ, ಅನ್ನಭಾಗ್ಯ 10 ಕೆಜಿ ಅಕ್ಕಿಕೊಟ್ಟು ಹಸಿವನ್ನು ನಿವಾರಿಸಲಾಗುವುದು ಎಂದರು.

ಮೇಕೆದಾಟು ಯೋಜನೆಗೆ ಡಿಕೆ ಶಿವಕುಮಾರ್ ಅವರು ನೇತೃತ್ವದಲ್ಲಿ ಚಳುವಳಿ ಮಾಡಿದ್ದಾರೆ. ಭಾರತ್ ಜೋಡೋ ಯಾತ್ರೆಯನ್ನು ರಾಹುಲ್ ಗಾಂಧಿಯವರು ಮಾಡಿದ್ದಾರೆ. ಹೋರಾಟ ಮಾಡಿ ಸಮಸ್ಯೆ ಬಗೆಹರಿಸುವುದು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯವಾಗಿದ್ದು, ಕಾಂಗ್ರೆಸ್ ಪಕ್ಷವನ್ನು ಅಧಿಕಾರವನ್ನು ತರಲು ಕಾಂಗ್ರೆಸ್ ಅಭ್ಯರ್ಥಿ ಪಿ.ಎಂ ನರೇಂದ್ರಸ್ವಾಮಿ ಅವರಿಗೆ ಮತ ನೀಡಿ ಗೆಲ್ಲಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿ, ಮಹಾತ್ಮ ಗಾಂಧೀಜಿ ಕುಳಿತಿದ್ದ ಜಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಚುಕ್ಕಾಣಿಯನ್ನು ಹಿಡಿದಿದ್ದಾರೆ. ಮಳವಳ್ಳಿ ಮೀಸಲು ಕ್ಷೇತ್ರದಲ್ಲಿ ಪಿ.ಎಂ ನರೇಂದ್ರ ಸ್ವಾಮಿ ಅವರನ್ನು ಪಕ್ಷ ಅಭ್ಯರ್ಥಿಯನ್ನಾಗಿ ಮಾಡಿದೆ, ಇದು ನನ್ನ ಕ್ಷೇತ್ರದ ಪಕ್ಕದ ಕ್ಷೇತ್ರವಾಗಿದ್ದು, ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಅಭಿವೃದ್ಧಿಯಾಗುವುದರಿಂದ ಕಾಂಗ್ರೆಸ್ ಅಭ್ಯರ್ಥಿ ನರೇಂದ್ರಸ್ವಾಮಿ ಅವರನ್ನು ಗೆಲ್ಲಿಸಬೇಕೆಂದು ಕೋರಿದರು.

ಮಂಡ್ಯದಲ್ಲಿ ಕಳೆದ ಬಾರಿ ಒಂದು ಸೀಟು ಗೆಲ್ಲೋಕೆ ಆಗಲಿಲ್ಲ, ಈ ಬಾರಿ ಅಭ್ಯರ್ಥಿ ಹಾಕಿದ್ದೇವೆ ಹೀಗಾಗಿ ಆಶೀರ್ವಾದ ಮಾಡಿ, ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವ ಮಳವಳ್ಳಿ ಜನ ಬೆಂಬಲಿಸಬೇಕು. ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸವಾಗಿದೆ. ಬಿಜೆಪಿನ ದೂರ ಇಟ್ಟು ಕುಮಾರಸ್ವಾಮಿಗೆ ದರ್ಬಾರ್ ಮಾಡು ಅಂತ ಅಧಿಕಾರ ಕೊಟ್ಟೋ ಆದ್ರೆ ಅವರು ಉಳಿಸಿಕೊಳ್ಳಿಲ್ಲ. ನಂತರ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಯಿಂದಾಗಿ ಜನ ಸಮಾನ್ಯರು ನೆಮ್ಮದಿ ಕಳೆದುಕೊಂಡಿದ್ದು, ಮೇ. 10 ರಂದು ಮತದಾನದಲ್ಲಿ ನಿಮ್ಮ ಭವಿಷ್ಯನ ನೀವೇ ನಿರ್ಮಾಣ ಮಾಡುವ ದಿನ ಬಂದಿರುವುದರಿಂದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರೇ ಅಭ್ಯರ್ಥಿ ಎಂದು ತಿಳಿದು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಇಲ್ಲದಿದ್ದರೂ ಇಬ್ಬರು ಎಲ್‌ಎಲ್‌ಸಿಗಳು ಗೆದ್ದಿರುವುದು ಬದಲಾವಣೆಗಾಗಿ ಜನರು ಬಯಸುತ್ತಿದ್ದಾರೆ ಎನ್ನುವುದು ಸಾಬೀತು ಹಾಗಿದೆ. ರಾಜ್ಯದಲ್ಲಿ ಹಲವಾರು ನಾಯಕರು ಬಿಜೆಪಿ ಮತ್ತು ಜೆಡಿಎಸ್ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಕಾಂಗ್ರೆಸ್ ಪಕ್ಷದ ಉತ್ತಮ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿಯನ್ನು ಅಧಿಕಾರ ವಹಿಸಿಕೊಂಡ ಒಂದು ತಿಂಗಳಲ್ಲಿಯೇ ಜಾರಿಗೆ ತರುತ್ತೇವೆ. ಇವೆಲ್ಲಾ ಘೋಷಣೆ ಮಾಡಿಲ್ಲ ಅಂದ್ರೆ ಮತ್ತೆ ಓಟ್ ಕೇಳೋಕೆ ಬರಲ್ಲ. ಇದು ಕಾಂಗ್ರೆಸ್ ಪಕ್ಷದ ಶಪಥವಾಗಿದೆ ಎಂದರು.

ನರೇಂದ್ರ ಸ್ವಾಮಿ ಅಭ್ಯರ್ಥಿ ಏನಾದ್ರೂ ತಪ್ಪು ಮಾಡಿದ್ರೆ ದಯವಿಟ್ಟು ಹೊಟ್ಟೆಗೆ ಹಾಕೊಳ್ಳಿ, ಇವತ್ತು ಕಾಂಗ್ರೆಸ್ ಪಕ್ಷ ಜನರ ಬದುಕಿನ ಬಗ್ಗೆ ಯೋಚನೆ ಮಾಡುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವವನ್ನು ಮತ್ತಷ್ಟು ಗಟ್ಟಿ ಗೊಳಿಸಬೇಕಾಗಿರುವುದರಿಂದ ನರೇಂದ್ರಸ್ವಾಮಿ ಅವರನ್ನು ಗೆಲ್ಲಿಸಬೇಕೆಂದು ಕೋರಿದರು.

ಕಾಂಗ್ರೆಸ್ ಅಭ್ಯರ್ಥಿ ಪಿ.ಎಂ ನರೇಂದ್ರಸ್ವಾಮಿ ಮಾತನಾಡಿ, ನಿಮ್ಮ ಮನೆಯ ಮಗನಾಗಿ ಸಾವಿರಾರು ಕೋಟಿ ಅನುದಾನವನ್ನು ತಂದು ಕ್ಷೇತ್ರವನ್ನು ಅಭಿವೃದ್ದಿ ಪಡಿಸಿದ್ದೇನೆ. ಮತ್ತೊಮ್ಮೆ ನಿಮ್ಮ ಮನೆ ಮಗನಿಗೆ ನಿಮ್ಮಗಳ ಸೇವೆ ಮಾಡುವ ಅವಕಾಶ ಮಾಡಿಕೊಡಿ, ಇನ್ನೂ ಹೆಚ್ಚಿನ ಅಭಿವೃದ್ದಿಪಡಿಸುವ ಹಂಬಲ ಹೊಂದಿರುವ ನನಗೆ ಮತದಾರರು ಆಶೀರ್ವದಿಸಿ ಚುನಾವಣೆಯಲ್ಲಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+