ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ವಿರುದ್ಧ 40% ಕಮಿಷನ್‌ ಆರೋಪ: ದಾಖಲೆ ನೀಡದಿದ್ದರೆ ಕೆಂಪಣ್ಣ ವಿರುದ್ಧ ಪ್ರಕರಣ ದಾಖಲಿಸಿ ಎಂದ ಸಿ.ಟಿ.ಮಂಜುನಾಥ್

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮಂಡ್ಯ, ಆಗಸ್ಟ್‌, 25: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಶೇಕಡಾ 40 ಪರ್ಸೆಂಟ್ ಕಮೀಷನ್ ಪಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದ್ದರು. ಈ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಬಳಿ ದಾಖಲಾತಿ ಇದ್ದಲ್ಲಿ ಲೋಕಾಯುಕ್ತಕ್ಕೆ ನೀಡಬೇಕು. ಸುಮ್ಮನೆ ಆರೋಪ ಮಾಡುವ ಮೂಲಕ ರಾಜ್ಯದ ಜನರನ್ನು ದಿಕ್ಕು ತಪ್ಪಿಸುತ್ತಿರುವ ಕೆಂಪಣ್ಣನ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಮಂಡ್ಯದಲ್ಲಿ ಆಗ್ರಹಿಸಿದರು.

ಕಳೆದ ನಾಲ್ಕು ವರ್ಷಗಳಿಂದ ಬಿಜೆಪಿ ನೇತೃತ್ವದ ಸರ್ಕಾರ ಉತ್ತಮವಾಗಿ ಆಡಳಿತ ನೀಡುತ್ತಿದೆ. ಕೋವಿಡ್‌ನಂತಹ ಸಾಂಕ್ರಾಮಿಕ ಪರಿಸ್ಥಿತಿಯಲ್ಲೂ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಒಳ್ಳೆಯ ಕೆಲಸಗಳಿಗೆ ಬೆಂಬಲ ನೀಡಬೇಕಾಗದ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು, ಸರ್ಕಾರದ ಹಣ ತಿಂದು ಇಲ್ಲ ಸಲ್ಲದ ಆರೋಪ ಮಾಡುವುದನ್ನು ಇನ್ನಾದರೂ ನಿಲ್ಲಿಸಬೇಕು ಎಂದು ಕಿಡಿಕಾರಿದರು.

ಒಂದು ವರ್ಷದಿಂದಲೂ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಮ್ಮ ಸರ್ಕಾರದ ಮೇಲೆ ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಹೀಗೆ ಸುಮ್ಮನೆ ಆರೋಪ ಮಾಡುತ್ತಿರುವುದು ಸರಿಯಲ್ಲ. ದಾಖಲೆ ಇದ್ದರೆ ಬಿಡುಗಡೆ ಮಾಡಿ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್‌ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರಿಗೆ ಸವಾಲು ಹಾಕಿದರು.

40% ಕಮೀಷನ್ ದಂಧೆ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸಿದರೆ 100 ಶಾಸಕರ ಅಕ್ರಮ ಬಯಲು: ಕೆಂಪಣ್ಣ40% ಕಮೀಷನ್ ದಂಧೆ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸಿದರೆ 100 ಶಾಸಕರ ಅಕ್ರಮ ಬಯಲು: ಕೆಂಪಣ್ಣ

ಈ ನಡುವೆ ರಾಜ್ಯದಲ್ಲಿ ಹಿಂದೆ ಬಿಜೆಪಿ ಸರಕಾರ ಇದ್ದಾಗ ಭೂ ವ್ಯವಹಾರಗಳಲ್ಲಿ ಅಕ್ರಮ ನಡೆದು ಸ್ವತಃ ಕೈಗಾರಿಕಾ ಸಚಿವರೇ ಜೈಲಿಗೆ ಹೋದರು. ಅದರೂ ಬಿಜೆಪಿ ಪಾಠ ಕಲಿತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ.

{photo-feature}

English summary
President of Contractors Association Kempanna accused the BJP of 40% commission. record, release Manjunath challenged in mandya. know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X