ಮಂಡ್ಯದಲ್ಲಿ ಮುಂದುವರೆದ ಅಂಬಿ ಅಭಿಮಾನಿಗಳ ಆತ್ಮಹತ್ಯೆ

ಮಂಡ್ಯ, ನವೆಂಬರ್.26: ನಟ ಅಂಬರೀಶ್ ಅಭಿಮಾನಿಯೋರ್ವ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಗೊರವನಹಳ್ಳಿ ಗ್ರಾಮದಲ್ಲಿ ಇಂದು ಸೋಮವಾರ (ನ.26) ಜರುಗಿದೆ.

ಲೇಟ್ ಸಿದ್ದೇಗೌಡರ ಪುತ್ರ ಸುರೇಂದ್ರ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದು, ಈತ ಭಾನುವಾರ ರಾತ್ರಿ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂಬರೀಶ್ ಅವರ ಅಂತಿಮ ದರ್ಶನ ಪಡೆದು ಮನೆಯಲ್ಲಿ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.

Ambareesh fan committed suicide at Goravanahalli

ಅಂಬಿ ಸಾವಿನ ಸುದ್ದಿ ಕೇಳಿ ಮನನೊಂದ ಅಭಿಮಾನಿ ಆತ್ಮಹತ್ಯೆ

ಸುರೇಂದ್ರ ಸುಮಾರು ಇಪ್ಪತ್ತು ವರ್ಷಗಳಿಂದಲೂ ಅಂಬಿ ಅಭಿಮಾನಿಯಾಗಿದ್ದು, ತನ್ನ ಬಲಗೈಯ್ಯಲ್ಲಿ ಅಂಬರೀಶ್ ಎಂದು ಹಚ್ಚೆ ಹಾಕಿಸಿಕೊಂಡಿರುವುದು ತಿಳಿದು ಬಂದಿದೆ.

ಅಂಬರೀಶ್‌ ನಿಧನದಿಂದ ಆಘಾತಕ್ಕೊಳಗಾಗಿ ತಮ್ಮಯ್ಯ ಎಂಬ ಅಭಿಮಾನಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೊಟ್ಟೆ ಗೌಡನದೊಡ್ಡಿ ಗ್ರಾಮದಲ್ಲಿ ನಿನ್ನೆ (ನ.25) ನಡೆದಿತ್ತು. ಇದೀಗ ಇಂದು ಮತ್ತೊಬ್ಬ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅಭಿಮಾನಿಗಳ ಸಾವಿನ ಸಂಖ್ಯೆ ಎರಡಕ್ಕೇರಿದೆ.

ತೀವ್ರ ಉಸಿರಾಟದ ತೊಂದರೆ ಹಾಗೂ ಎದೆ ನೋವಿನಿಂದ ಶನಿವಾರ (ನ.25) ಸಂಜೆ ಆಸ್ಪತ್ರೆಗೆ ದಾಖಲಾಗಿದ್ದ ಅಂಬರೀಶ್, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10.15ರ ಸುಮಾರಿಗೆ ಕೊನೆಯುಸಿರೆಳೆದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+