• search
 • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪದವಿ ವಿಭಾಗದ ತರಗತಿ ಹಾಗೂ ಪರೀಕ್ಷೆಗಳ ಬಗ್ಗೆ ಅಶ್ವಥ್ ನಾರಾಯಣ್ ಸ್ಪಷ್ಟನೆ

|

ಬೆಂಗಳೂರು, ಜೂನ್ 12: ಪದವಿ ವಿಭಾಗದ ತರಗತಿ ಹಾಗೂ ಪರೀಕ್ಷೆಯ ಬಗ್ಗೆ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ. ಇಂದು ಮಂಡ್ಯದಲ್ಲಿ ಈ ಬಗ್ಗೆ ಅವರು ಮಾತನಾಡಿದ್ದಾರೆ.

   ಇವರಿಗೇ ಪರಿಷತ್ ಸ್ಥಾನ ಕೊಡಬೇಕು ಎಂದ ಸಚಿವ ಎಸ್.ಟಿ ಸೋಮಶೇಖರ್ | ST Somashekar | Oneindia Kannada

   ''ಲಾಕ್‌ಡೌನ್‌ ತೆರವು ನಂತರ ಪದವಿ ವಿಭಾಗದ ತರಗತಿ ಮತ್ತು ಪರೀಕ್ಷೆಯನ್ನು ಯಾವಾಗ ನಡೆಸಬೇಕು ಎಂದು ನಿರ್ಧರಿಸಲಾಗುವುದು'' ಎಂದು ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ. ಜೂನ್‌ 30ರ ಬಳಿಕ ಲಾಕ್‌ಡೌನ್ ತೆರವಾಗಲಿದ್ದು, ಆ ಬಳಿಕ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

   ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದುಗೊಳಿಸಿ: ಆಮ್‌ ಆದ್ಮಿ ಪಕ್ಷದ ಆಗ್ರಹ

   ಶೀಘ್ರದಲ್ಲೇ ಮಂಡ್ಯ ವಿಶ್ವವಿದ್ಯಾನಿಲಯಕ್ಕೆ ಕುಲಪತಿಯನ್ನು ನೇಮಕ ಮಾಡಲಾಗುವುದು. ಮಂಡ್ಯ ಕ್ಲಸ್ಟರ್ ವಿಶ್ವವಿದ್ಯಾನಿಲಯಗಳಿಗೆ ವಿಶ್ವವಿದ್ಯಾಲಯದ ಮಾನ್ಯತೆ ಕೊಡಲು ಸಂಪುಟ ಅನುಮೋದನೆ ದೊರೆತಿದೆ. ಈ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಅಶ್ವತ್ಥ ನಾರಾಯಣ್ ಹೇಳಿದ್ದಾರೆ.

   ಲಾಕ್‌ಡೌನ್‌ನಿಂದ ಪರೀಕ್ಷೆ ದಿನಾಂಕದ ವ್ಯತ್ತಾಸ ಆಗುತ್ತಿದ್ದು, ವಿದ್ಯಾರ್ಥಿಗಳು ಇದರಿಂದ ಗೊಂದಲಕ್ಕೆ ಒಳಗಾಗದೆ, ಚೆನ್ನಾಗಿ ಓದಬೇಕು ಎಂದು ಅವರು ತಿಳಿಸಿದ್ದಾರೆ.

   ಇಂದು ಮಂಡ್ಯ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ ಅಶ್ವತ್ಥ ನಾರಾಯಣ್ ಪದವಿ ತರಗತಿ ಹಾಗೂ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

   English summary
   Deputy Chief Minister Ashwath Narayan gave classification about karnataka degree examinations.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X