ಸುಮಲತಾ ಬೆಂಬಲಿಗರ ಮೇಲೆ ಜೆಡಿಎಸ್ ಬೆಂಬಲಿಗರ ಹಲ್ಲೆ: ದೂರು ದಾಖಲು
Recommended Video
ಮಂಡ್ಯ, ಮೇ 24: ಭಾರಿ ಜಿದ್ದಾ-ಜಿದ್ದಿನ ಕಣವಾಗಿದ್ದ ಮಂಡ್ಯದಲ್ಲಿ ಸುಮಲತಾ ಅವರು ಗೆಲುವು ಸಾಧಿಸುತ್ತಿದ್ದಂತೆ ಅವರ ಬೆಂಬಲಿಗರ ಹರ್ಷ ಮುಗಿಲು ಮುಟ್ಟಿದೆ ಅದರ ಜೊತೆಗೆ ಜೆಡಿಎಸ್ ಕಾರ್ಯಕರ್ತರ ತೀವ್ರ ಅಸಮಾಧಾನವೂ ಉಂಟಾಗಿದೆ.
ಸುಮಲತಾ ಅವರ ಗೆಲುವಿನ ಬೆನ್ನಲ್ಲೆ ಮಂಡ್ಯದ ಮದ್ದೂರಿನಲ್ಲಿ ಕೆಲವು ಜೆಡಿಎಸ್ ಕಾರ್ಯಕರ್ತರು ಸುಮಲತಾ ಅವರ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸ್ ಕೇಸ್ ಕೂಡಾ ದಾಖಲಾಗಿದೆ.
ಮದ್ದೂರು ತಾಲ್ಲೂಕಿನ ಕೊಳಗೆರೆ ಗೇಟ್ ಬಳಿ ಸುಮಲತಾ ಬೆಂಬಲಿಗರಾದ ಶಶಿಧರ್ ಮತ್ತು ಕುಮಾರ್ ಎಂಬುವರ ಮೇಲೆ ಹಲ್ಲೆ ನಡೆಸಲಾಗಿದೆ. ಬಿಯರ್ ಬಾಟಲಿ ಮತ್ತು ಚಾಕುವಿನಿಂದ ದಾಳಿ ನಡೆದಿದೆ ಎಂದು ದೂರು ನೀಡಲಾಗಿದೆ.

ಜೆಡಿಎಸ್ ಕಾರ್ಯಕರ್ತರಾದ ಕುಲ್ ದೀಪ್, ಅಭಿಷೇಕ್, ಪ್ರಮೋದ್ ಹಾಗೂ ವರುಣ್ ಅವರು ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತಂತೆ ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಆರೋಪಿಗಳ ಶೀಘ್ರ ಬಂಧನಕ್ಕೆ ಸುಮಲತಾ ಬೆಂಬಲಿಗರು ಆಗ್ರಹಿಸಿದ್ದಾರೆ.
ಮಂಡ್ಯದಲ್ಲಿ ಸುಮಲತಾ ಮತ್ತು ನಿಖಿಲ್ ಕುಮಾರಸ್ವಾಮಿ ನಡುವೆ ಭಾರಿ ಪೈಪೋಟಿ ನಡೆದಿತ್ತು. ನಿನ್ನೆ ನಡೆದ ಫಲಿತಾಂಶದಲ್ಲಿ ಸುಮಲತಾ ಅವರು 125,876 ಮತಗಳ ಅಂತರದಲ್ಲಿ ಗೆದ್ದಿದ್ದಾರೆ.












Click it and Unblock the Notifications