ನಾಗಮಂಗಲ ಗಲಭೆಯಲ್ಲಿ ಜೈಲು ಸೇರಿದ್ದ 55 ಮಂದಿಗೆ ಕೊನೆಗೂ ಬೇಲ್
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟ ಹಾಗೂ ಗಲಭೆ ಪ್ರಕರಣವು ರಾಜ್ಯದೆಲ್ಲೆಡೆ ಸದ್ದು ಮಾಡಿತ್ತು. ಈ ಪ್ರಕರಣ ಸಂಬಂಧ ಹಲವರು ಜೈಲು ಕೂಡ ಸೇರಿದ್ದರು. ಗಲಭೆಯಲ್ಲಿ ಬಂಧನವಾಗಿದ್ದ ಎಲ್ಲ ಆರೋಪಿಗಳಿಗೆ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಗಲಾಟೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ ಒಟ್ಟು 55 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಈ ಎಲ್ಲರಿಗೂ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ ಎಂದು ವರದಿಯಾಗಿದೆ.

ಆರೋಪಿಗಳಿಗೆ ತಲಾ ಒಂದು ಲಕ್ಷ ರೂಪಾಯಿ ಮೌಲ್ಯದ ಬಾಂಡ್, ಪ್ರತೀ ಭಾನುವಾರ ಠಾಣೆಗೆ ಬಂದು ಸಹಿ ಹಾಕುವುದು, ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ ಹಾಗೂ ಯಾವುದೇ ಅಪರಾಧ ಕೃತ್ಯಗಳಲ್ಲ ಭಾಗಿಯಾಗಬಾರದು ಎಂದು ಕೋರ್ಟ್ ಷರತ್ತುಗಳನ್ನು ವಿಧಿಸಿದೆ.
ನಾಗಮಂಗಲದಲ್ಲಿ ಗಲಭೆಯಾದ ನಂತರ ಪೊಲೀಸರು ಸೆಪ್ಟೆಂಬರ್ 11ರಂದು ಆರೋಪಿಗಳನ್ನು ಬಂಧಿಸಿದ್ದರು. ಸೆಪ್ಟೆಂಬರ್ 12 ರಿಂದ ಆರೋಪಿಗಳು ಮಂಡ್ಯ ಜೈಲಿನಲ್ಲೇ ಇದ್ದರು. ಇಂದು ಮತ್ತು ನಾಳೆ ರಜೆ ಇರುವ ಕಾರಣ ಆರೋಪಿಗಳಿಗೆ ಸೋಮವಾರ ಬಿಡುಗಡೆ ಭಾಗ್ಯ ಸಿಗಲಿದೆ ಎನ್ನಲಾಗಿದೆ.

ಏನಿದು ಪ್ರಕರಣ?: ಸಕ್ಕರೆ ನಾಡು ಮಂಡ್ಯದಲ್ಲಿ ಗಣೇಶೋತ್ಸವದ ಅಂಗವಾಗಿ ಯುವಕರು ಮೂರ್ತಿಯ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ಬಗ್ಗೆ ವರದಿಯಾಗಿತ್ತು. ಮಂಡ್ಯ ಜಿಲ್ಲೆಯ ನಾಗಮಂಗಲದ ಮಂಡ್ಯ ಸರ್ಕಲ್‌ನಲ್ಲಿ ಈ ಘಟನೆ ನಡೆದಿತ್ತು. ಗಣೇಶ ವಿಸರ್ಜನೆಯ ಅಂಗವಾಗಿ ಮೂರ್ತಿಯನ್ನು ಮೆರವಣಿಗೆಗೆ ತಂದಿದ್ದ ವೇಳೆ ಇಲ್ಲಿನ ದರ್ಗಾ ಬಳಿ ಏಕಾಏಕಿ ಕಲ್ಲು ತೂರಾಟ ನಡೆದಿತ್ತು.
ಮೆರವಣಿಗೆ ನಡೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಕೆಲವರು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಪೆಟ್ರೋಲ್ ಬಾಂಬ್ ಎಸೆದು ಸಿಕ್ಕ ಸಿಕ್ಕಲ್ಲಿ ಬೆಂಕಿ ಕೂಡ ಹಚ್ಚಿದ್ದರು. ಅಲ್ಲಿದ್ದ ಕೆಲ ವಾಹನಗಳಿಗೂ ಕೂಡ ಬೆಂಕಿ ಹಚ್ಚಿದ್ದು, ಅಂಗಡಿ ಮುಂಗಟ್ಟುಗಳನ್ನು ಧ್ವಂಸ ಮಾಡಿ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದರು.

ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಕೈಯಲ್ಲಿ ಕತ್ತಿ, ತಲ್ವಾರ್ ಕೂಡ ಹಿಡಿದು ಬಂದಿದ್ದರು ಎನ್ನಲಾಗಿತ್ತು. ಸ್ಥಳಕ್ಕೆ ಪೊಲೀಸರು ಧಾವಿಸಿ, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದರು. ಬಳಿಕ ಲಾಠಿ ಚಾರ್ಜ್ ಮೂಲಕ ದುಷ್ಕರ್ಮಿಗಳನ್ನು ಅಲ್ಲಿಂದ ಚದುರಿಸಿ, ಅವರು ತಂದಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದರು. ಘಟನೆಯಲ್ಲಿ ಕೆಲವರು ಗಂಭೀರ ಗಾಯಗೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಅಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿತ್ತು.
ಇನ್ನು ಅಲ್ಲಿನ ಮುಸ್ಲಿಂ ಸಮುದಾಯದ ಕೆಲ ಯುವಕರು ಈ ರೀತಿ ಉದ್ದೇಶಪೂರ್ವಕವಾಗಿ ದಾಳಿ ನಡೆಸಿದ್ದಾರೆ ಎಂದು ಗಣೇಶೋತ್ಸವದ ಯುವಕರು ಆರೋಪಿಸಿದ್ದು, ಗಣಪತಿ ಮೂರ್ತಿಯನ್ನು ನೇರವಾಗಿ ನಾಗಮಂಗಲ ಪೊಲೀಸ್ ಠಾಣೆಯ ಎದುರು ಕರೆದೊಯ್ದು, ಧಿಕ್ಕಾರ ಕೂಡ ಕೂಗಿದ್ದರು.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅನುಮಾನ ಬಂದಿದ್ದ ಎಲ್ಲರನ್ನೂ ಬಂಧಿಸಿ ಕ್ರಮ ತೆಗೆದುಕೊಂಡಿದ್ದರು. ಈ ಘಟನೆಯು ಕೋಮು ದಳ್ಳುರಿಗೂ ಕಾರಣವಾಗಿ ರಾಜ್ಯದ್ಯಂತ ಹಿಂದೂ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದವು. ಇದೇ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ನಡುವೆ ದೊಡ್ಡ ಮಟ್ಟದಲ್ಲಿ ಆರೋಪ ಪ್ರತ್ಯಾರೋಪಗಳು ಸಹ ನಡೆದಿತ್ತು.
ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಬಿಜೆಪಿಯು ಘಟನೆಯ ಕುರಿತು ಸತ್ಯಾಸತ್ಯತೆ ತಿಳಿಯಲು ಸತ್ಯಶೋಧನಾ ತಂಡವನ್ನು ರಚಿಸಿ, ಸಮಗ್ರ ವರದಿ ನೀಡಲು ನಿರ್ದೇಶಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸತ್ಯಶೋಧನಾ ತಂಡ ರಚಿಸಿದ್ದರು. ಇದರಲ್ಲಿ ಬಿಜೆಪಿ ನಾಯಕರಾದ ಸಿ.ಎನ್.ಅಶ್ವತ್ಥ್ ನಾರಾಯಣ್, ಬೈರತಿ ಬಸವರಾಜ್, ಕೆ.ಸಿ.ನಾರಾಯಣಗೌಡ, ರಾಜ್ಯ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಇದ್ದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications