ನಾಗಮಂಗಲ ಗಲಭೆ ಅಖಾಡಕ್ಕೆ ಇಂದು ಬಿಜೆಪಿ ನಾಯಕರ ಎಂಟ್ರಿ
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿದ್ದ ಗಲಭೆಗೆ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಕೂಡ ಈ ಘಟನೆಯನ್ನು ಖಂಡಿಸಿದ್ದು, ಇದರ ಸತ್ಯಾಸತ್ಯತೆ ತಿಳಿಯಲು ಒಂದು ಸತ್ಯಶೋಧನಾ ಸಮಿತಿಯನ್ನೂ ರಚಿಸಿದೆ. ಇಂದು ಈ ಬಿಜೆಪಿಯ ಸಮಿತಿಯು ಮಂಡ್ಯಕ್ಕೆ ನಾಗಮಂಗಲಕ್ಕೆ ತೆರಳಲಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ವೇಳೆ ನಡೆದ ದಾಳಿಯು ಇದೀಗ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಅಲ್ಲದೆ ಈ ಗಲಭೆಯು ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ಕಿತ್ತಾಟಕ್ಕೂ ಕಾರಣವಾಗಿದೆ.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿಯು ಘಟನೆಯ ಕುರಿತು ಸತ್ಯಾಸತ್ಯತೆ ತಿಳಿಯಲು ಸತ್ಯಶೋಧನಾ ತಂಡವನ್ನು ರಚಿಸಿ, ಸಮಗ್ರ ವರದಿ ನೀಡಲು ನಿರ್ದೇಶಿಸಿತ್ತು. ಅದರಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸತ್ಯಶೋಧನಾ ತಂಡ ರಚಿಸಿ ಆದೇಶಿಸಿದ್ದು, ಇದರಲ್ಲಿ ಬಿಜೆಪಿ ನಾಯಕರಾದ ಸಿ.ಎನ್.ಅಶ್ವತ್ಥ್ ನಾರಾಯಣ್, ಬೈರತಿ ಬಸವರಾಜ್, ಕೆ.ಸಿ.ನಾರಾಯಣಗೌಡ, ರಾಜ್ಯ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಇದ್ದಾರೆ.
ನಾಗಮಂಗಲದಲ್ಲಿ ಕಳೆದ ಬುಧವಾರ ರಾತ್ರಿ ಗಣೇಶ ಮೂರ್ತಿಯ ಮೆರವಣಿಗೆ ವೇಳೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ನಾಗಮಂಗಲದ ಮಂಡ್ಯ ಸರ್ಕಲ್‌ನಲ್ಲಿ ಈ ಘಟನೆ ನಡೆದಿತ್ತು. ಗಣೇಶ ವಿಸರ್ಜನೆಯ ಅಂಗವಾಗಿ ಮೂರ್ತಿಯನ್ನು ಮೆರವಣಿಗೆಗೆ ತಂದಿದ್ದ ವೇಳೆ ಇಲ್ಲಿನ ದರ್ಗಾ ಬಳಿ ಏಕಾಏಕಿ ಕಲ್ಲು ತೂರಾಟ ನಡೆದಿತ್ತು. ಕೆಲವರು ಅಲ್ಲಿನ
ಮೆರವಣಿಗೆ ನಡೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಕೆಲವರು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಪೆಟ್ರೋಲ್ ಬಾಂಬ್ ಎಸೆದು ಸಿಕ್ಕ ಸಿಕ್ಕಲ್ಲಿ ಬೆಂಕಿ ಕೂಡ ಹಚ್ಚಿದ್ದರು. ಅಲ್ಲಿದ್ದ ಕೆಲ ವಾಹನಗಳಿಗೂ ಕೂಡ ಬೆಂಕಿ ಹಚ್ಚಿದ್ದು, ಅಂಗಡಿ ಮುಂಗಟ್ಟುಗಳನ್ನು ಧ್ವಂಸ ಮಾಡಿ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದರು.

ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಕೈಯಲ್ಲಿ ಕತ್ತಿ, ತಲ್ವಾರ್ ಕೂಡ ಹಿಡಿದು ಬಂದಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿ, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದರು. ಬಳಿಕ ಲಾಠಿ ಚಾರ್ಜ್ ಮೂಲಕ ದುಷ್ಕರ್ಮಿಗಳನ್ನು ಅಲ್ಲಿಂದ ಚದುರಿಸಿ, ಅವರು ತಂದಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದರು. ಘಟನೆಯಲ್ಲಿ ಕೆಲವರು ಗಂಭೀರ ಗಾಯಗೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಲು 144 ಸೆಕ್ಷನ್ ಜಾರಿ ಮಾಡಲಾಗಿತ್ತು.
ಇನ್ನು ಇಲ್ಲಿನ ಮುಸ್ಲಿಂ ಸಮುದಾಯದ ಕೆಲ ಯುವಕರು ಈ ರೀತಿ ಉದ್ದೇಶಪೂರ್ವಕವಾಗಿ ದಾಳಿ ನಡೆಸಿದ್ದಾರೆ ಎಂದು ಗಣೇಶೋತ್ಸವದ ಯುವಕರು ಆರೋಪಿಸಿ, ಗಣಪತಿ ಮೂರ್ತಿಯನ್ನು ನೇರವಾಗಿ ನಾಗಮಂಗಲ ಪೊಲೀಸ್ ಠಾಣೆಯ ಎದುರು ಕರೆದೊಯ್ದು, ಧಿಕ್ಕಾರ ಕೂಡ ಕೂಗಿದ್ದರು.
ಬಳಿಕ ಈ ಗಲಭೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಬಿಜೆಪಿ ನಾಯಕರು ಇದರ ಸತ್ಯಾಸತ್ಯತೆ ತಿಳಿಯಲು ಸತ್ಯಶೋಧನಾ ಸಮಿತಿ ರಚಿಸಿ ಆದೇಶಿಸಿತ್ತು. ಅದರಂತೆ ಗಲಭೆ ಸಂಬಂಧ ಸತ್ಯಾಂಶ ತಿಳಿಯಲು ಇಂದು ಬಿಜೆಪಿ ನಾಯಕರು ಮಂಡ್ಯಕ್ಕೆ ತೆರಳಲಿದ್ದಾರೆ.
ಈ ಬಗ್ಗೆ ಮಾತನಾಡಿರುವ ಬಿಜೆಪಿ ಶಾಸಕ ಸಿ.ಎನ್.ಅಶ್ವತ್ಥ ನಾರಾಯಣ, ನಮ್ಮ ನೇತೃತ್ವದ ಸತ್ಯಶೋಧನಾ ಸಮಿತಿ ನಾಗಮಂಗಲದ ಘಟನಾ ಸ್ಥಳಕ್ಕೆ ಭೇಟಿ ನೀಡಲಿದೆ. ನಾಗಮಂಗಲದ ಗಲಭೆಗೆ ಅಲ್ಲಿನ ಪೊಲೀಸರ ವೈಫಲ್ಯವೇ ಕಾರಣ ಎಂಬುದು ಗೊತ್ತಾಗಿದೆ. ಈ ಘಟನೆ ನಡೆದಾಗ ರಾಜ್ಯ ಸರ್ಕಾರ ಇದನ್ನು ಹಗುರವಾಗಿ ಪರಿಗಣಿಸಿತ್ತು. ಅದರಂತೆ ಗುಪ್ತಚರ ವಿಭಾಗದ ಮುಖ್ಯಸ್ಥರ ವರ್ಗಾವಣೆ ಮಾಡುವ ಮೂಲಕ ತಮ್ಮ ತಪ್ಪನ್ನು ಒಪ್ಪಿಕೊಂಡಿದೆ ಎಂದು ಆರೋಪಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ಧರ್ಮದ ಜನರ ಪರ ಕೆಲಸ ಮಾಡುತ್ತಿದೆ. ಒಂದು ಕೋಮಿನವರ ಪ್ರಚೋದನೆಯೇ ನಾಗಮಂಗಲದಲ್ಲಿ ಗಲಭೆಗೆ ಕಾರಣ ಎಂದೂ ಅಶ್ವತ್ಥನಾರಾಯಣ ದೂರಿದ್ದಾರೆ. ಒಂದು ಬಿಜೆಪಿ ನಾಯಕರು ನಾಗಮಂಗಲದ ಘಟನಾ ಸ್ಥಳಕ್ಕೆ ತೆರಳಿ, ಅಲ್ಲಿನ ಗಲಭೆಗೆ ಕಾರಣ ಏನು? ಎನ್ನುವ ಅಂಶಗಳನ್ನು ಪತ್ತೆ ಹಚ್ಚಲಿದ್ದಾರೆ. ಬಳಿಕ ವರದಿ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications