ಮಾಜಿ ಸಂಸದೆ ರಮ್ಯಾ ವಿರುದ್ಧ ಮಂಡ್ಯ ಎಸ್ಪಿಗೆ ದೂರು

Posted By:
Subscribe to Oneindia Kannada

ಮಂಡ್ಯ, ಸೆಪ್ಟೆಂಬರ್ 01 : ಮಾಜಿ ಸಂಸದೆ ರಮ್ಯಾ ಅವರ ವಿರುದ್ಧ ಬಿಜೆಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದೆ. ಬೇಜವಾಬ್ದಾರಿ ಹೇಳಿಕೆ ಮೂಲಕ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಿಜೆಪಿ ಮುಖಂಡ ಮತ್ತು ಮಾರಚಾಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಟ್ಟಸ್ವಾಮಿ ಅವರು ಬುಧವಾರ ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ರಮ್ಯಾ ವಿರುದ್ಧ ದೂರು ನೀಡಿದ್ದಾರೆ. ರಮ್ಯಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.['ರಮ್ಯಾ ಅವರ ಹಿಂದಿನ ಜನ್ಮದ ಬಗ್ಗೆ ಗೊತ್ತಿಲ್ಲ']

ramya

'ದೇಶಭಕ್ತಿಗೆ ಹೆಸರಾಗಿರುವ ಆರ್‌ಎಸ್‌ಎಸ್‌ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಬ್ರಿಟಿಷರೊಂದಿಗೆ ಕೈಜೋಡಿಸಿದ್ದವು' ಎಂದು ಹೇಳುವ ಮೂಲಕ ರಮ್ಯಾ ಅವರು ಜನರ ಭಾವನೆ ಕೆರಳಿಸುತ್ತಿದ್ದಾರೆ ಎಂದು ದೂರಲಾಗಿದೆ.['ರಮ್ಯಾ ಅವರಿಗೆ ಯಾರ ಬೆಂಬಲದ ಅಗತ್ಯವೂ ಇಲ್ಲ']

ರಮ್ಯಾ ಹೇಳಿದ್ದೇನು? : ಮಂಗಳವಾರ ಮಂಡ್ಯದಲ್ಲಿ ಮಾತನಾಡಿದ್ದ ರಮ್ಯಾ ಅವರು, 'ಕಾಂಗ್ರೆಸ್‌ನವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಹೋರಾಟ ಮಾಡಿಲ್ಲ. ಅವರು ಬ್ರಿಟಿಷರೊಂದಿಗೆ ಸೇರಿದ್ದರು' ಎಂದು ಹೇಳಿದ್ದರು.[ಗೊತ್ತಿಲ್ಲದ ವಿಷಯ ಮಾತಾಡುವ ರಮ್ಯಾಗೆ ಯಾಕ್ರೀ ಇಷ್ಟೊಂದು ಪ್ರಚಾರ?]

ಈ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಕಳೆದ ವಾರ ಟಿವಿ ವಾಹಿನಿಯೊಂದಲ್ಲಿ 'ಮಂಗಳೂರು ನರಕ' ಎಂದು ಹೇಳಿಕೆ ಕೊಟ್ಟು ರಮ್ಯಾ ವಿವಾದ ಹುಟ್ಟುಹಾಕಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Mandya BJP leader Puttaswamy on Wednesday lodged a complaint at the Superintendent of Police office against Former Mandya MP Ramya for her irresponsible statements.
Please Wait while comments are loading...