ಬಿಜೆಪಿಯವರ ಪ್ರತಿಭಟನೆ, ಎಸ್ಪಿಗೆ ಬೈಗುಳ: ಇದು ಸಿಎಂ ಸಿದ್ದರಾಮಯ್ಯ ನ್ಯಾಯ!

By: ಮಂಡ್ಯ ಪ್ರತಿನಿಧಿ
Subscribe to Oneindia Kannada

ಮಂಡ್ಯ, ಏಪ್ರಿಲ್ 21: ಮಳವಳ್ಳಿಯಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಬಂದ ವೇಳೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರಿಂದ ಸಿಟ್ಟಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಗರಂ ಆದ ಘಟನೆ ನಡೆದಿದೆ.

ಹೆಲಿಕ್ಯಾಪ್ಟರ್ ನಿಂದ ಇಳಿದು ಸಿದ್ದರಾಮಯ್ಯ ಅವರು ರಸ್ತೆ ಮಾರ್ಗವಾಗಿ ವೇದಿಕೆ ಕಡೆಗೆ ಹೋಗುತ್ತಿದ್ದಾಗ ಸಾರಿಗೆ ಬಸ್ ನಿಲ್ದಾಣದ ಬಳಿ ಎದುರಾದ ಬಿಜೆಪಿ ತಾಲೂಕು ಘಟಕದ ಮಾಜಿ ಅಧ್ಯಕ್ಷ ಬಸವರಾಜು, ಸ್ಲಂ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್ ಸೇರಿದಂತೆ ಹಲವು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

BJP protest, CM Siddaramaiah angry on Mandya SP

ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಜುಗರ ತಂದಿತು. ಇದರಿಂದ ಕೆಂಡಾಮಂಡಲವಾದ ಅವರು ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಸಿಟ್ಟಾದರು. ಆದರೆ ಅಷ್ಟರಲ್ಲೇ ಪೊಲೀಸರು ಪ್ರತಿಭಟನಾನಿರತ ಆರು ಮಂದಿಯನ್ನು ಬಂಧಿಸಲಾಗಿತ್ತು.[ನಮ್ಮಪ್ಪನಾಣೆಗೂ ಬಿಜೆಪಿ ಅಧಿಕಾರಕ್ಕೆ ಬರಲ್ಲ: ಸಿದ್ದರಾಮಯ್ಯ]

ಆದರೆ, ಬಿಜೆಪಿ ಕಾರ್ಯಕರ್ತರು ದಿಢೀರ್ ಪ್ರತಿಭಟಿಸಿ ಸಂಚಾರಕ್ಕೆ ಸಂಚಕಾರ ತಂದೊಡ್ಡಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಜುಗರಕ್ಕೀಡಾಗಿದ್ದು, ವೇದಿಕೆ ಏರುತ್ತಿದ್ದಂತೆಯೇ ಎಸ್ಪಿಯನ್ನು ಕರೆಸಿಕೊಂಡು, ನಿಮ್ಮ ಭದ್ರತಾ ವೈಫಲ್ಯದಿಂದ ಪ್ರತಿಭಟನೆ ನಡೆದಿದೆ. ಏನ್ ಕೆಲ್ಸ ಮಾಡ್ತೀರಾ ಎಂದು ಏರು ಧ್ವನಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದರು. ಅವರ ಮಾತಿಗೆ ಯಾವುದೇ ಉತ್ತರ ನೀಡದ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಯಾವುದೇ ಮಾತನಾಡದೆ ಸುಮ್ಮನಿದ್ದದ್ದು ಕಂಡು ಬಂತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BJP workers protested against CM Siddaramaiah at Malavalli function. Due to this irritated Siddaramaiah angry on Mandya SP Sudheerkumar Reddy and abused him.
Please Wait while comments are loading...