ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಪಟ್ಟಿ ಬಿಡುಗಡೆ: ಮಂಡ್ಯದಲ್ಲಿ ಸುಮಲತಾಗೆ ಬೆಂಬಲ ಘೋಷಣೆ

|
Google Oneindia Kannada News

Recommended Video

ಅಧಿಕೃತವಾಗಿ ಸುಮಲತಾ ಬೆಂಬಲಕ್ಕೆ ನಿಂತ ಯಡಿಯೂರಪ್ಪ..! | Oneindia Kannada

ನವದೆಹಲಿ, ಮಾರ್ಚ್ 23: ಲೋಕಸಭೆ ಚುನಾವಣೆಗೆ ಬಿಜೆಪಿಯು ಮತ್ತೊಂದು ಪಟ್ಟಿ ಬಿಡುಗಡೆ ಆಗಿದ್ದು, ಮಂಡ್ಯದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಸುಮಲತಾಗೆ ಅಧಿಕೃತವಾಗಿ ಬೆಂಬಲ ಘೋಷಿಸಿದೆ.

ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ

ಇಂದು ರಾತ್ರಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಸುಮಲತಾ ಅವರಿಗೆ ಬೆಂಬಲ ಘೋಷಿಸಿರುವ ಜೊತೆಗೆ ಕೋಲಾರ ಕ್ಷೇತ್ರಕ್ಕೆ ಎಸ್.ಮುನಿಸ್ವಾಮಿಗೆ ಟಿಕೆಟ್ ನೀಡಲಾಗಿದೆ. ಆಕಾಂಕ್ಷಿ ಛಲವಾದಿ ನಾರಾಯಣಸ್ವಾಮಿಗೆ ಟಿಕೆಟ್ ಕೈತಪ್ಪಿದೆ.

ಲೋಕಸಭೆ ಚುನಾವಣೆ 2019: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಅಚ್ಚರಿಲೋಕಸಭೆ ಚುನಾವಣೆ 2019: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಅಚ್ಚರಿ

ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕೋಡಿ, ಕೊಪ್ಪಳ, ರಾಯಚೂರು ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ.

BJP supporting Mandya independent candidate Sumalatha

ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಪಕ್ಷೇತರರಾಗಿ ಕಣಕ್ಕಿಳಿದಿದ್ದು, ಅವರು ಮೈತ್ರಿ ಅಭ್ಯರ್ಥಿ ನಿಖಿಲ್ ಅವರನ್ನು ಎದುರಿಸುತ್ತಿದ್ದಾರೆ. ಬಿಜೆಪಿಯು ಬೆಂಬಲ ಘೋಷಿಸಿರುವುದು ಸುಮಲತಾ ಅವರಿಗೆ ಶಕ್ತಿ ಹೆಚ್ಚಿಸಿದೆ.

ಕಳೆದ ಲೋಕಸಭಾ ಉಪ ಚುನಾವಣೆಯಲ್ಲಿ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಎರಡು ಲಕ್ಷಕ್ಕೂ ಹೆಚ್ಚು ಮತ ಗಳಿಸಿದ್ದರು, ಮಂಡ್ಯದಲ್ಲಿ ಬಿಜೆಪಿ ಸಂಘಟನೆ ಉತ್ತಮವಾಗಿಯೇ ಆಗಿದ್ದು, ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡಿರುವುದು ಹೆಚ್ಚಿನ ಶಕ್ತಿ ನೀಡಿದೆ.

ಸುಮಲತಾ ಅಂಬರೀಶ್ ಬಿಜೆಪಿಗೆ : ಯಾರು, ಏನು ಹೇಳಿದರು?ಸುಮಲತಾ ಅಂಬರೀಶ್ ಬಿಜೆಪಿಗೆ : ಯಾರು, ಏನು ಹೇಳಿದರು?

ಇಂದು ರಾತ್ರಿ ಬಿಡುಗಡೆ ಮಾಡಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಧ್ಯಪ್ರದೇಶ ರಾಜ್ಯದ 15 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಪ್ರಕಟಿಸಿದೆ. ಜಾರ್ಖಂಡ್ ರಾಜ್ಯದ 10 ಕ್ಷೇತ್ರಗಳಿಗೆ ಅಭ್ಯರ್ಥಿ ಪ್ರಕಟಿಸಿದೆ. ಗುಜರಾತ್ ರಾಜ್ಯದ 15 ಕ್ಷೇತ್ರಗಳಿಗೆ ಅಭ್ಯರ್ಥಿ ಪ್ರಕಟಿಸಿದೆ. ಹಿಮಾಚಲ ಪ್ರದೇಶದ ನಾಲ್ಕು ಕ್ಷೇತ್ರ ಹಾಗೂ ಗೋವಾದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಮಂಡ್ಯದ ಬಗ್ಗೆ ಗುಪ್ತಚರ ವರದಿ, ಜೆಡಿಎಸ್‌ ಹಾದಿ ಸುಲಭವಲ್ಲ! ಮಂಡ್ಯದ ಬಗ್ಗೆ ಗುಪ್ತಚರ ವರದಿ, ಜೆಡಿಎಸ್‌ ಹಾದಿ ಸುಲಭವಲ್ಲ!

ಜೊತೆಗೆ ವಿಧಾನಸಭೆ ಉಪ ಚುನಾವಣೆಗೆ ಗೋವಾದ ಮೂರು ಮತ್ತು ಗುಜರಾತ್‌ನ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ.

English summary
BJP supporting Mandya independent candidate Sumalatha Ambareesh. BJP released candidate list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X