ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಆಡಳಿತದ ರಾಜ್ಯಗಳ ಸಂಖ್ಯೆ 22ಕ್ಕೆ ಏರಿಕೆ ಆಗಲಿದೆ: ಬಿಎಸ್‌ವೈ

By Manjunatha
|
Google Oneindia Kannada News

Recommended Video

ಬಿಜೆಪಿ ಆಡಳಿತದ ರಾಜ್ಯಗಳ ಸಂಖ್ಯೆ 22ಕ್ಕೆ ಏರಿಕೆ ಆಗಲಿದೆ: ಬಿಎಸ್‌ವೈ | Oneindia Kannada

ಮದ್ದೂರು, ಜನವರಿ 19: ಈ ವರ್ಷ ಮುಗಿಯುವಷ್ಟರಲ್ಲಿ ಕರ್ನಾಟಕ ಸೇರಿದಂತೆ 22 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಏರಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಹೇಳಿದರು.

ಮದ್ದೂರಿನಲ್ಲಿ ಆಯೋಜಿತವಾಗಿದ್ದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು ಇಂದಿರಾ ಗಾಂಧಿ ಪ್ರಧಾನಿ ಆಗಿದ್ದಾಗ ಕಾಂಗ್ರೆಸ್ ಅಧಿಕಾರದಲ್ಲಿದ್ದುದು 18 ರಾಜ್ಯಗಳಲ್ಲಿ, ಈಗ ಬಿಜೆಪಿ 19 ರಾಜ್ಯಗಳಲ್ಲಿ ಅಧಿಕಾರದಲ್ಲಿದೆ ಎಂದರು.

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಳ್ಳಿ: ಎಸ್‌ಎಂ ಕೃಷ್ಣ ಕರೆಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಳ್ಳಿ: ಎಸ್‌ಎಂ ಕೃಷ್ಣ ಕರೆ

ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ವರ್ಗಾವಣೆಯನ್ನು ದಂದೆಯನ್ನಾಗಿ ಮಾಡಿಕೊಂಡಿದ್ದು, ಚುನಾವಣೆಗೆ ಹಣ ಕ್ರೂಡೀಕರಣ ಮಾಡುವ ಕಾರ್ಯದಲ್ಲಿ ನಿರತವಾಗಿದೆ ಎಂದು ಅವರು ಆರೋಪಿಸಿದರು.

BJP will rise its state count to 22: BS Yeddyurappa

ರಾಜ್ಯದಲ್ಲಿ ಪ್ರತಿದಿನ ಕೊಲೆ, ಸುಲಿಗೆ ಅತ್ಯಾಚಾರ ಸಾಮಾನ್ಯವಾಗಿಬಿಟ್ಟಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಈ ಬಗ್ಗೆ ಹೈಕೋರ್ಟ್ ಸಹ ಅಸಹನೆ ವ್ಯಕ್ತಪಡಿಸಿದ್ದು, ಹೈಕೋರ್ಟ್ ನ್ಯಾಯಮೂರ್ತಿಗಳು ರಾಜ್ಯ ಸರ್ಕಾರಕ್ಕೆ ತಪರಾಕಿ ಹಾಕಿದ್ದಾರೆ ಎಂದರು.

BJP will rise its state count to 22: BS Yeddyurappa

ವೇದಿಕೆಯಲ್ಲಿದ್ದ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಅವರ ಬಗ್ಗೆ ಮಾತನಾಡಿದ ಯಡಿಯೂರಪ್ಪ ಅವರು, ಕೃಷ್ಣ ಅವರು ಹಿರಿಯರಾಗಿದ್ದು, ಅವರಿಗೆ ಬಿಜೆಪಿಯ ಅಭಿವೃದ್ಧಿ ಪರ ಚಿಂತನೆಗಳು ಅರ್ಥವಾಗಿದೆ ಹಾಗಾಗಿ ನಮಗೆ ಬೆಂಬಲ ನೀಡುತ್ತಿದ್ದಾರೆ. ಎಸ್‌.ಎಂ.ಕೃಷ್ಣ ಅವರಂತಹಾ ಹಿರಿಯರ ಮಾರ್ಗದರ್ಶನದಲ್ಲಿ ಮಂಡ್ಯದಲ್ಲಿ ಬಿಜೆಪಿ ಜಯಭೇರಿ ಭಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

English summary
BJP state president BS Yeddyurappa said 'In 18 states BJP is in Power, at the end of this year the number will rise to 22.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X