ಕೆ.ಆರ್.ಪೇಟೆಯಲ್ಲಿ ಸುಮಲತಾ ಬೆಂಬಲವಿಲ್ಲದೇ ಗೆದ್ದ ಬಿಜೆಪಿ
ಮಂಡ್ಯ, ಡಿಸೆಂಬರ್ 10: ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮಂಡ್ಯದ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲವಿಲ್ಲದೆ ಬಿಜೆಪಿ ಪಕ್ಷ ಗೆದ್ದಿದೆ. ಭಾರೀ ಪರಿಶ್ರಮದಿಂದ ಅನರ್ಹ ಶಾಸಕರಾಗಿದ್ದ ಕೆ.ಸಿ.ನಾರಾಯಣಗೌಡ ಅವರು ವಿಜಯ ಸಾಧಿಸಿದ್ದಾರೆ.
ಕೆ.ಆರ್.ಪೇಟೆಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಅವರು ಗೆಲುವು ಸಾಧಿಸಿದ್ದಾರೆ. ಸುಮಲತಾ ಅವರ ಬೆಂಬಲಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಪೈಪೊಟಿ ನಡೆಸಿದ್ದವು. ಆದರೆ ಸುಮಲತಾ ಅವರು ಯಾರಿಗೂ ಬೆಂಬಲ ನೀಡದೆ ತಟಸ್ಥವಾಗಿ ಉಳಿಯುವುದಾಗಿ ಹೇಳಿದ್ದರು.
ಉಪ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸುಮಲತಾ ಅವರನ್ನು ಎರಡೂ ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳು ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದರು, ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸ್ಥಳೀಯ ಬಿಜೆಪಿ ನಾಯಕರು ತಮ್ಮ ಪರವಾಗಿ ಪ್ರಚಾರ ಮಾಡುವಂತೆ ಕೇಳಿಕೊಂಡಿದ್ದರು.

ಇನ್ನು ಕಾಂಗ್ರೆಸ್ ನಿಂದ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಚಿವ ಚಲುವರಾಯಸ್ವಾಮಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ ಬರುವಂತೆ ಕೋರಿದ್ದರು, ಆದರೆ ಸಂಸದೆ ಸುಮಲತಾ ಅವರು ಯಾರಿಗೂ ಬೆಂಬಲ ನೀಡಿರಲಿಲ್ಲ.
ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಸುಮಲತಾ ಅಂಬರೀಶ್ ಅವರಿಗೆ ಬಾಹ್ಯ ಬೆಂಬಲ ನೀಡಿತ್ತು, ಅಲ್ಲದೇ ಪಕ್ಷದ ಕಾರ್ಯಕರ್ತರು ಕೂಡಾ ಅವರ ಗೆಲುವಿಗೆ ಶ್ರಮಿಸಿದ್ದರು. ಇನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೂ ಸುಮಲತಾ ಬೆಂಬಲಿಸಿದ್ದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications