ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಶುಗರ್ ಕಾರ್ಖಾನೆ ಖಾಸಗೀಕರಣ ಮಾಡಿದರೆ ರಕ್ತಪಾತ: ಜೆಡಿಎಸ್ ಶಾಸಕ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 22: ಮಂಡ್ಯ ಮೈಶುಗರ್ ಕಾರ್ಖಾನೆ ಖಾಸಗೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕ ಸುರೇಶ್‌ ಗೌಡ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, "ಕಾರ್ಖಾನೆ ಖಾಸಗೀಕರಣ ಮಾಡಿದರೆ ರಕ್ತಪಾತವಾಗುತ್ತದೆ," ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ ಅಧಿವೇಶನದಲ್ಲಿ ಮೈಶುಗರ್ ಕಾರ್ಖಾನೆ ಖಾಸಗೀಕರಣದ ಬಗ್ಗೆ ಮಾತನಾಡಿದ ಅವರು, "ಮಂಡ್ಯ ಮೈಶುಗರ್ ಕಾರ್ಖಾನೆ ವಿಚಾರದಲ್ಲಿ ಸರ್ಕಾರ ತಮಾಷೆ ಮಾಡಬಾರದು. ಸರ್ಕಾರಕ್ಕೆ ನಿರ್ವಹಣೆ ಮಾಡಲು ಏಕೆ ಸಾಧ್ಯವಾಗುತ್ತಿಲ್ಲ? ನಿಮಗೆ ಮಾಡಲು ಸಾಧ್ಯವಾಗದಿದ್ದರೆ ನಮಗೆ ಬಿಟ್ಟುಕೊಡಿ. ಚಂದಾ ಎತ್ತಿ ನಾವು ಮೈಶುಗರ್ ಕಾರ್ಖಾನೆಯನ್ನು ನಡೆಸುತ್ತೇವೆ. ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡುವಂತಿಲ್ಲ. ಆದರೆ ಅಂದು ಸಿಎಂ ಆಗಿದ್ದ ಎಚ್.ಡಿ. ಕುಮಾರಸ್ವಾಮಿ ಕೊಟ್ಟ 100 ಕೋಟಿ ರೂಪಾಯಿ ಏನಾಯ್ತು?," ಎಂದು ಪ್ರಶ್ನಿಸಿದರು.

Bloodshed If Mysugar factory Privatized: JDS MLA Suresh Gowda

ಇನ್ನು ಇದಕ್ಕೆ ಸರ್ಕಾರದ ಪರ ಉತ್ತರ ನೀಡಿದ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, "ಕೇಂದ್ರ ಸಚಿವರ ಜೊತೆಗೆ ಎರಡು ಸಲ ಚರ್ಚೆ ಮಾಡಿದ್ದೇವೆ. ಮಂಡ್ಯ ಭಾಗದ ರೈತರ ಹಿತಾಸಕ್ತಿ ದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗುವುದು. ಇನ್ನು ಪುನಶ್ಚೇತನ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿ ನಿರ್ಧರಿಸುತ್ತೇವೆ. ಈ ಭಾಗದ ರೈತರಿಗೆ ಒಳ್ಳೆಯದಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ. ಕಾರ್ಖಾನೆ ಪುನಶ್ಚೇತನ ಬಗ್ಗೆ ಶೀಘ್ರದಲ್ಲೇ ನಿರ್ಧರಿಸುತ್ತೇವೆ," ಎಂದರು.

Recommended Video

T Natarajanಗೆ ಕೋವಿಡ್ ಸೋಂಕು , ಆದರೂ ಆಟ ನಿಲ್ಲೋದಿಲ್ಲ | Oneindia Kannada

English summary
Nagamangala JDS MLA Suresh Gowda warned the state government in the assembly on the issue of privatization of the Mandya Mysugar factory.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X