ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ: ನವಜಾತ ಶಿಶುಗಳಿಗಾಗಿ ಸದ್ದಿಲ್ಲದೆ ನಡೆಯುತ್ತಿದೆ ಎದೆಹಾಲು ಸಂಗ್ರಹ ಕಾರ್ಯ

By ಮಂಡ್ಯ, ಪ್ರತಿನಿಧಿ
|
Google Oneindia Kannada News

ಮಂಡ್ಯ ಜನವರಿ18 : ಹುಟ್ಟಿದ ಮಗುವಿಗೆ ತಾಯಿಯ ಎದೆಹಾಲು ಅಮೃತಕ್ಕೆ ಸಮ. ಇಂತಹ ಅಮೃತ

ಪಾನವನ್ನು ಸರಿಯಾದ ಸಮಯದಲ್ಲಿ ಪಡೆಯಲು ಆಗದೆ ಅದೆಷ್ಟೋ ನವಜಾತಶಿಶುಗಳು ಸಾವನ್ನಪ್ಪಿರುವುದನ್ನು ಕಂಡಿದ್ದೇವೆ. ಈ ಶಿಶುಗಳಿಗೆ ಜೀವರಕ್ಷಕವಾಗಿರುವ ಎದೆಹಾಲನ್ನು ಪೂರೈಸುವ ಕೆಲಸ ಜಿಲ್ಲೆಯೊಳಗೆ ಸದ್ದಿಲ್ಲದೆ ನಡೆಯುತ್ತಿದೆ.

ಹುಟ್ಟುವಾಗಲೇ ತಾಯಿ ಕಳೆದುಕೊಂಡಿರುವ ಅಥವಾ ನಾನಾ ಕಾರಣಕ್ಕೆ ಶಿಶುಗಳಿಗೆ ಎದೆ ಹಾಲಿನ ಕೊರತೆ ಉಂಟಾಗುತ್ತದೆ. ಅಂತಹ ಮಕ್ಕಳ ಪ್ರಾಣ ಉಳಿಸಲು ಬೆಂಗಳೂರಿನ ನಿಯೋಲ್ಯಾಕ್ಟಾ ಲೈಫ್ ಸೈನ್ಸ್‌ ಲಿಮಿಟೆಡ್ ಎಂಬ ಸಂಸ್ಥೆಯ ಆಶ್ರಯದಲ್ಲಿ ಜಿಲ್ಲೆಯೊಳಗೆ ಕೆಲವು ಸ್ವಯಂಸೇವಾ ಸಂಸ್ಥೆಗಳು ಹೆಚ್ಚು ಎದೆಹಾಲು ಬರುವ ತಾಯಂದಿರಿಂದ ಸಂಗ್ರಹಿಸಿ ಪೂರೈಸುವ ಕೆಲಸವನ್ನು ಮಾಡುತ್ತಿವೆ.

'2024ಕ್ಕೆ ಮಂಡ್ಯ ಸಂಸದರು ಬೆಂಗಳೂರಿನಲ್ಲಿ ಸ್ಪರ್ಧೆ': ನಿಖಿಲ್ ಕುಮಾರಸ್ವಾಮಿ'2024ಕ್ಕೆ ಮಂಡ್ಯ ಸಂಸದರು ಬೆಂಗಳೂರಿನಲ್ಲಿ ಸ್ಪರ್ಧೆ': ನಿಖಿಲ್ ಕುಮಾರಸ್ವಾಮಿ

ಮಗುವಿನ ತಾಯಿ ಅನಾರೋಗ್ಯಕ್ಕೆ ಒಳಗಾದಾಗ, ತಾಯಿಗೆ ಎದೆ ಹಾಲು ಕೊರತೆ ಆದಾಗ, ಅನಾಥ ಮಕ್ಕಳು, ಅವಧಿ ಪೂರ್ವ ಜನಿಸಿದ ಮಗು ಹೆಚ್ಚಿನ ಸಮಯ ಆಸ್ಪತ್ರೆಯಲ್ಲಿ ಇರುವಾಗ ಒಟ್ಟಾರೆ ತನ್ನ ಹೆತ್ತ ತಾಯಿಯಿಂದ ಸೂಕ್ತ ಸಮಯಕ್ಕೆ ಹಾಲನ್ನು ಕುಡಿಯಲಾಗದ ಮಗುವಿಗೆ ಇದರ ಪ್ರಯೋಜನ ದೊರೆಯಲಿದೆ.

ಎದೆ ಹಾಲು ಮಾರಾಟ ಅಪರಾಧ

ಎದೆ ಹಾಲು ಮಾರಾಟ ಅಪರಾಧ

ತಾಯಿಯ ಎದೆಯಲ್ಲಿ ಉತ್ಪತ್ತಿಯಾಗುವ ಹಾಲನ್ನೆಲ್ಲಾ ಮಕ್ಕಳು ಕುಡಿಯುವುದಿಲ್ಲ. ಮಗು ಅಗತ್ಯವಿರುವಷ್ಟು ಹಾಲನ್ನು ಕುಡಿದು ಉಳಿಯುವ ಹಾಲನ್ನು ತಾಯಂದಿರು ವ್ಯರ್ಥವಾಗಿ ಹೊರಹಾಕುತ್ತಾರೆ. ಅಂತಹ ತಾಯಂದಿರಿಂದ ಮಾತ್ರ ಹಾಲನ್ನು ಸಂಗ್ರಹಿಸಲಾಗುತ್ತದೆ. ಅಗತ್ಯಕ್ಕಿಂತ ಹೆಚ್ಚು ಎದೆಹಾಲು ಹೊಂದಿರುವ ತಾಯಿಯರೆಲ್ಲ ಹಾಲನ್ನು ದಾನ ನೀಡಲಾಗುವುದಿಲ್ಲ. ಮಾರಾಟ ಮಾಡುವುದು ಕೂಡ ಅಪರಾಧ. ಎಚ್‌ಐವಿ ಸೋಂಕು, ಜ್ವರ ಅಥವಾ ಇನ್ನಿತರ ಗಂಭೀರ ಸಮಸ್ಯೆಗೆ ಒಳಗಾಗಿದ್ದರೆ ಹಾಲನ್ನು ದಾನವಾಗಿ ಕೊಡುವಂತಿಲ್ಲ. ತಜ್ಞರಿಂದ ಪರೀಕ್ಷೆಗೆ ಒಳಗಾಗಿ ಅನಂತರವೇ ಇನ್ನೊಂದು ಶಿಶುವಿಗೆ ಹಾಲನ್ನು ನೀಡಬಹುದು.

ತಜ್ಞರಿಂದ ಎದೆ ಹಾಲಿನ ಪರೀಕ್ಷೆ

ತಜ್ಞರಿಂದ ಎದೆ ಹಾಲಿನ ಪರೀಕ್ಷೆ

ಮಗುವಿನ ಅಗತ್ಯಕ್ಕಿಂತ ಹೆಚ್ಚು ಹಾಲನ್ನು ಹೊಂದಿರುವ ತಾಯಂದಿರನ್ನು ಗುರುತಿಸಿ ಮೊದಲು ಅವರನ್ನು ಸಂದರ್ಶನ ಮಾಡಲಾಗುತ್ತದೆ. ಅವರ ರಕ್ತವನ್ನು ಪರೀಕ್ಷಿಸಿ ತಾಯಿಯ ಆರೋಗ್ಯದಲ್ಲಿ ಯಾವುದೇ ಗಂಭೀರ ಸಮಸ್ಯೆಗಳಿಲ್ಲದಿರುವುದನ್ನು ಖಚಿತಪಡಿಸಿಕೊಂಡ ನಂತರ ಒಪ್ಪಂದ ಪತ್ರಕ್ಕೆ ಸಹಿ ಹಾಕಿಸಿಕೊಂಡು ಹಾಲನ್ನು ಸಂಗ್ರಹಿಸಲಾಗುತ್ತದೆ. ಇಲ್ಲಿಂದ ಕಳುಹಿಸಿದ ಹಾಲನ್ನು ಸಂಸ್ಥೆಯವರು ಮತ್ತೊಮ್ಮೆ ಪರೀಕ್ಷಿಸಿ ಮಗು ಕುಡಿಯಲು ಯೋಗ್ಯವೇ ಎಂಬುದನ್ನು ಖಚಿತಪಡಿಸಿಕೊಂಡು ನೀಡಲಾಗುತ್ತದೆ ಎಂದು ಪರಸ್ಪರ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ದೇವರಾಜು ಕೊಪ್ಪ ಅವರು ತಿಳಿಸಿದರು.

 ಮಂಡ್ಯ ವಿವಿಧ ಸಂಸ್ಥೆಯ ವಿನೂತನ ಕಾರ್ಯ

ಮಂಡ್ಯ ವಿವಿಧ ಸಂಸ್ಥೆಯ ವಿನೂತನ ಕಾರ್ಯ

ಒಬ್ಬ ತಾಯಿ ತಮ್ಮ ಶಕ್ತಾನುಸಾರ ಹಾಲನ್ನು ನೀಡುವ ಸಾಮರ್ಥ್ಯ ಹೊಂದಿರುತ್ತಾರೆ. ಕೆಲವರು 50 ಮಿ.ಲೀ., 100 ಮಿ.ಲೀ., ಮತ್ತೆ ಕೆಲವರು 200 ಮಿ.ಲೀ.ವರೆಗೆ ಹಾಲನ್ನು ನೀಡುವರು. ಈ ತಾಯಂದಿರಿಂದ 6 ತಿಂಗಳವರೆಗಷ್ಟೇ ಎದೆ ಹಾಲನ್ನು ಸಂಗ್ರಹಿಸಲಾಗುತ್ತದೆ. ಆನಂತರ ತಾಯಿಯು ಸಾಮಾನ್ಯ ಆಹಾರ ಸೇವಿಸಲು ಆರಂಭಿಸುವುದರಿಂದ ಹಾಲು ಗಟ್ಟಿಯಾಗುತ್ತದೆ. ನವಜಾತ ಶಿಶುಗಳು ಈ ಹಾಲನ್ನು ಕುಡಿದು ಜೀರ್ಣಿಸಿಕೊಳ್ಳಲು ಶಕ್ತಿ ಇರುವುದಿಲ್ಲ. ಹಾಗಾಗಿ ನಿಗದಿತ ಸಮಯದ ಬಳಿಕ ಹಾಲು ಸಂಗ್ರಹವನ್ನು ನಿಲ್ಲಿಸಲಾಗುತ್ತದೆ.


ನಿಯೋಲ್ಯಾಕ್ಟಾ ಲೈಫ್ ಸೈನ್ಸ್‌ ಸಂಸ್ಥೆಯವರು ತಿಂಗಳಿಗೆ ಒಮ್ಮೆ ಬಂದು ಡೀ-ಫ್ರೀಜರ್‌ನಲ್ಲಿ ಸಂಗ್ರಹಿಡಲಾಗುವ ಎದೆಹಾಲನ್ನು ಸಂಗ್ರಹಿಸಿಕೊಂಡು ಹೋಗುವರು. ಜಿಲ್ಲೆಯ ಸ್ವಯಂಸೇವಾ ಸಂಸ್ಥೆಗಳಿಂದ ತಿಂಗಳಿಗೆ 200 ಲೀಟರ್‌ನಷ್ಟು ಎದೆಹಾಲು ಪೂರೈಸಲಾಗುತ್ತಿದೆ. ಒಮ್ಮೊಮ್ಮೆ ಇದು ಕಡಿಮೆಯಾಗುವ ಸಾಧ್ಯತೆಗಳಿರುತ್ತವೆ. ಎದೆಹಾಲನ್ನು ನೀಡುವ ತಾಯಂದಿರಿಗೆ ಯಾವುದೇ ಗೌರವಧನವನ್ನು ನೀಡಲಾಗುವುದಿಲ್ಲ. ಅದರ ಬದಲಿಗೆ ಪೌಷ್ಠಿಕ ಆಹಾರವಾದ ಸೊಪ್ಪು, ತರಕಾರಿ, ಕಡಲೆಬೇಳೆ. ರವೆ, ಮೊಟ್ಟೆಯಂತ ಪದಾರ್ಥಗಳನ್ನು ಪ್ರತಿ ತಿಂಗಳು ನೀಡಲಾಗುವುದು. ಮೊಟ್ಟೆ ತಿನ್ನದವರಿಗೆ ಪರ್ಯಾಯವಾಗಿ ಬೇರೆ ಪದಾರ್ಥಗಳನ್ನು ನೀಡಲಾಗುತ್ತಿದೆ.

ಆರೋಗ್ಯಕರ ಎದೆ ಹಾಲು ಸಂಗ್ರಹ

ಆರೋಗ್ಯಕರ ಎದೆ ಹಾಲು ಸಂಗ್ರಹ

ನಮ್ಮ ಸಂಸ್ಥೆ ಸೇರಿದಂತೆ ಜಿಲ್ಲೆಯೊಳಗೆ ಐದು ಸ್ವಯಂಸೇವಾ ಸಂಸ್ಥೆಗಳು ಎದೆಹಾಲು ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿವೆ. ಮಗುವಿನ ಅಗತ್ಯಕ್ಕಿಂತ ಹೆಚ್ಚು ಹಾಲನ್ನು ಹೊಂದಿರುವ ತಾಯಂದಿರನ್ನು ಗುರುತಿಸಿ ಅವರನ್ನು ಪರೀಕ್ಷೆಗೊಳಪಡಿಸಿ ಆರೋಗ್ಯ ಸಮಸ್ಯೆಗಳಿಲ್ಲವೆಂದು ಖಚಿತಪಡಿಸಿಕೊಂಡ ಬಳಿಕ ಹಾಲನ್ನು ಸಂಗ್ರಹಿಸಲಾಗುತ್ತಿದೆ.

ಬೇಡಿಕೆ ಒಂದೇ ಪ್ರಮಾಣದಲ್ಲಿ ಇರುವುದಿಲ್ಲ. ಕೆಲವೊಮ್ಮೆ ಹೆಚ್ಚು ಬೇಡಿಕೆ ಬಂದರೆ, ಕೆಲವು ತಿಂಗಳು ಬೇಡಿಕೆ ಇರುವುದಿಲ್ಲ. ಪ್ರತಿ ತಿಂಗಳು ಜಿಲ್ಲೆಯ ಎಲ್ಲಾ ಸಂಸ್ಥೆಗಳಿಂದ ಕನಿಷ್ಠ 200 ಲೀಟರ್ ಹಾಲನ್ನು ಬೆಂಗಳೂರಿನ ನಿಯೋಲ್ಯಾಕ್ಟಾ ಲೈಫ್ ಸೈನ್ಸ್‌ ಸಂಸ್ಥೆಗೆ ಪೂರೈಸಲಾಗುತ್ತಿದೆ.

English summary
Mandya five organisations collect Breast milk for newborn baby.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X