ಪ್ರತಿಮೆ ನಿರ್ಮಾಣಕ್ಕಿಂತ ಬಡವರ ಬದುಕಿನ ಬಗ್ಗೆ ಚಿಂತನೆ ಮಾಡಿ: ಬಿಜೆಪಿಗೆ ಮಧು ಬಂಗಾರಪ್ಪ
ಮಂಡ್ಯ, ನವೆಂಬರ್ 11 : ಪ್ರತಿಮೆ ನಿರ್ಮಾಣವೇ ಅಭಿವೃದ್ಧಿಯಲ್ಲ. ಪ್ರತಿಮೆ ನಿರ್ಮಾಣ ಮಾಡುವುದಕ್ಕಿಂತ ಬಡವರ ಬಗ್ಗೆ ಚಿಂತನೆ, ಹಿಂದುಳಿದವರ ಬದುಕಿಗೆ ಸಹಕಾರವಾಗುವಂಥ ಕಾರ್ಯಕ್ರಮಗಳನ್ನು ಜಾರಿಗೊಳಿಸುವುದು ಮುಖ್ಯ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಬಲ್ ಇಂಜಿನ್ ಸರ್ಕಾರ ಎಂದೇಳಿಕೊಳ್ಳುವ ಬಿಜೆಪಿ ಬಡವರ ಆರ್ಥಿಕ ಸ್ಥಿತಿಯನ್ನು ಎಲ್ಲಿಗೆ ತಂದು ನಿಲ್ಲಿಸಿದ್ದಾರೆ. ರೈತರ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸಲು ಮುಂದಾಗಿರುವ ಈ ಸರ್ಕಾರ ರೈತರ ಪರವಾಗಿದೆಯೇ ಎಂದು ಪ್ರಶ್ನಿಸಿದರು.
ಅರಣ್ಯದಲ್ಲಿ ವಾಸವಾಗಿರುವ ಜನರನ್ನು ಒಕ್ಕಲೆಬ್ಬಿಸಿ ಆ ಭೂಮಿಯನ್ನು ಭೂಗಳ್ಳರಿಗೆ ನೀಡುವುದಕ್ಕೆ ಮುಂದಾಗಿದೆ. ಧರ್ಮ, ಜಾತಿ ಹೆಸರಿನಲ್ಲಿ ದ್ವೇಷವನ್ನು ಹುಟ್ಟುಹಾಕುವ ಸಂಸ್ಕೃತಿ ಬಿಜೆಪಿಯದ್ದಾಗಿದೆ. ನಿಜವಾಗಿಯೂ ಹಿಂದುಳಿದ ವರ್ಗದ ಜನರ ಕಷ್ಟಗಳನ್ನು ಅರ್ಥೈಸಿಕೊಂಡು ಅವರ ಬದುಕಿಗೆ ಅನುಕೂಲ ಕಲ್ಪಿಸಿಕೊಟ್ಟಿದ್ದು ಕಾಂಗ್ರೆಸ್ ಎಂದು ದೃಢವಾಗಿ ಹೇಳಿದರು.
ದೇವರಾಜ ಅರಸು ಹಿಂದುಳಿದ ವರ್ಗದವರು, ಬಡವರಿಗಾಗಿ ಭೂಮಿ ಕೊಟ್ಟರು, ಸಿದ್ದರಾಮಯ್ಯ ಅನ್ನ ಕೊಟ್ಟರು, ಬಂಗಾರಪ್ಪನವರು ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕೊಟ್ಟರು. ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಬಿಜೆಪಿ ಸರ್ಕಾರದವರು ಏನು ಕೊಟ್ಟರು ಎಂದು ಪ್ರಶ್ನಿಸಿದರು.

ಜಿಲ್ಲಾ ಸಮಸ್ಯಗನುಗುಣವಾಗಿ ಪ್ರಣಾಳಿಕೆ
ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷನಾದ ಬಳಿಕ ರಾಜ್ಯವ್ಯಾಪಿ ಸಂಚರಿಸುತ್ತಾ ಹಿಂದುಳಿದ ವರ್ಗದಲ್ಲಿರುವ ಎಲ್ಲಾ ಸಮುದಾಯಗಳ ಕಷ್ಟ ಕಾರ್ಪಣ್ಯಗಳನ್ನು ತಿಳಿಯುವ, ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದೇನೆ. ಒಂದೊಂದು ಜಿಲ್ಲೆಯಲ್ಲಿ ಒಂದೊಂದು ರೀತಿಯ ಸಮಸ್ಯೆಗಳಿದ್ದು ಅವುಗಳನ್ನು ಕ್ರೋಢೀಕರಿಸಿಕೊಂಡು ಯಾವ ಸಣ್ಣ ಸಮುದಾಯಕ್ಕೂ ಅನ್ಯಾಯವಾಗದ ರೀತಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಲು ಪ್ರಣಾಳಿಕೆಗೆ ಸೇರಿಸುವುದಾಗಿ ಹೇಳಿದರು.
ಡಿಸೆಂಬರ್ 15ರ ಬಳಿಕ ಜಿಲ್ಲಾಮಟ್ಟದ ಹಿಂದುಳಿದ ವರ್ಗಗಳ ಸಮಾವೇಶ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅಥವಾ ಇತರೆ ನಾಯಕರ ನಾಯಕತ್ವದಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.

ಹಿಂದೂ ವಿರೋಧಿಯಾಗಿರುವ ಬಿಜೆಪಿ
ಪ್ರವೀಣ್ ನೆಟ್ಯಾರು ಹತ್ಯೆ ಬಳಿಕ ಕರಾವಳಿ ಭಾಗದಲ್ಲಿ ಬಿಜೆಪಿ ವಿರೋಧಿ ಅಲೆ ಶುರುವಾಗಿದೆ. ಹತ್ಯೆ ಬಳಿಕ ವಿಶ್ವಹಿಂದೂಪರಿಷತ್ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷರ ಕಾರನ್ನು ಜಗ್ಗಾಡಿ ಆಕ್ರೋಶ ವ್ಯಕ್ತಪಡಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ. ಆಜಾನ್ ಮೇಲೆ ನಿಷೇಧ ತರುವ ಕಾರ್ಯಕ್ಕೆ ಮುಂದಾಗಿ ಶೇ.80ರಷ್ಟಿದ್ದ ಹಿಂದು ದೇಗುಲಗಳಲ್ಲಿ ಅಳವಡಿಸಿದ್ದ ಧ್ವನಿವರ್ಧಕಗಳನ್ನು ನಿಲ್ಲಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಧರ್ಮ ವಿರೋಧಿ ಧೋರಣೆ ಪ್ರದರ್ಶಿಸಲು ಹೋಗಿ ಹಿಂದೂ ವಿರೋಧಿಯಾಗಿ ಜನರ ಮುಂದೆ ನಿಂತಿದೆ. ಇದಕ್ಕೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.

ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಮನವಿ
ಹಿಂದುಳಿದ ವರ್ಗಗಳಲ್ಲೂ ಸಮರ್ಥರಿದ್ದಾರೆ. ಅವರಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವಂತೆ ರಾಜ್ಯ ನಾಯಕರಿಗೆ ತಿಳಿಸಿದ್ದೇನೆ. ಹಿಂದುಳಿದ ವರ್ಗದ ಇಷ್ಟೇ ಪ್ರಮಾಣದ ಜನರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡಬೇಕೆಂದು ಒತ್ತಾಯಿಸಲಾಗುವುದಿಲ್ಲ. ಆದರೆ, ಟಿಕೆಟ್ ಹಂಚಿಕೆ ಮಾಡುವಾಗ ಹಿಂದುಳಿದ ವರ್ಗದಲ್ಲಿರುವ ಗೆಲ್ಲುವ ಅಭ್ಯರ್ಥಿಗಳನ್ನು ಪರಿಗಣಿಸುವಂತೆ ತಿಳಿಸಿದರು.

ನಾನು ಧರ್ಮ ಹಾಗೂ ಜಾತಿ ವಿಷಯದಿಂದ ದೂರ
ಹಿಂದೂ ಪದದ ವಿಚಾರವಾಗಿ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ನಾನು ಧರ್ಮ ಹಾಗೂ ಜಾತಿ ವಿಷಯದಿಂದ ದೂರವಿದ್ದೇನೆ. ಆ ವಿಷಯವಾಗಿ ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ನಾನು ಆ ಬಗ್ಗೆ ಪ್ರತಿಕ್ರಿಯೆ ನೀಡುವುದು ಅಷ್ಟು ಸಮಂಜಸವಲ್ಲ ಎಂದು ನುಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಮುಖಂಡರಾದ ಅಂಜನಾ, ಡಾ.ಹೆಚ್.ಕೃಷ್ಣ, ಹಾಲಹಳ್ಳಿ ರಾಮಲಿಂಗಯ್ಯ ಇತರರಿದ್ದರು.
-
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?











Click it and Unblock the Notifications