ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪ ಚುನಾವಣೆ: ಬಿಜೆಪಿಯಿಂದ ಕಾಂಗ್ರೆಸ್ ಅಭ್ಯರ್ಥಿಗೆ 15 ಕೋಟಿ..?

|
Google Oneindia Kannada News

ಮಂಡ್ಯ, ಡಿಸೆಂಬರ್ 25: ಉಪ ಚುನಾವಣೆಯಲ್ಲಿ ಕೆ.ಆರ್.ಪೇಟೆ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಅವರು ಬಿಜೆಪಿಯಿಂದ 15 ಕೋಟಿ ರೂ, ಪಡೆದಿದ್ದಾರೆ ಎಂದು ಜೆಡಿಎಸ್ ತಾಲ್ಲೂಕು ಪಂಚಾಯಿತಿ ಸದಸ್ಯ ದಿನೇಶ್ ರಾಜಾಹುಲಿ ಆರೋಪಿಸಿದ್ದಾರೆ.

ಮಂಡ್ಯ ಜೆಡಿಎಸ್ ನ ಭದ್ರಕೋಟೆಯಾಗಿದೆ. ಆದರೂ ಉಪ ಚುನಾವಣೆಯಲ್ಲಿ ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ಗೆ ಸೋಲಾಗಿದ್ದು ಅಚ್ಚರಿಯನ್ನುಂಟು ಮಾಡಿದೆ ಎಂದು ದಿನೇಶ್ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ.

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ಸೋಲಿಗೆ ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ಸೋಲಿಗೆ "ಒಳೇಟು" ಕಾರಣವಂತೆ

ನಮ್ಮ ಅಭ್ಯರ್ಥಿಗೆ ಸೋಲಾಗಲು ಕಾಂಗ್ರೆಸ್ ಕಾರಣ, ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿಯು ಬಿಜೆಪಿಗೆ 15 ಕೋಟಿ ರೂ, ಗೆ ಮಾರಾಟವಾಗಿದ್ದಾರೆ ಎಂದು ಆರೋಪಿಸಿದ್ದಾರೆ.

By Elections 2019: BJP Gave 15 Crores To Congress Candidate?

ಕ್ಷೇತ್ರದ ಮತದಾರರಿಗೆ ಈ ವಿಷಯ ಗೊತ್ತಾಗಲಿಲ್ಲ, ಆದರೆ ಕಾಂಗ್ರೆಸ್ ನ ಕೆಲವು ಮತದಾರರಿಗೆ ಈ ವಿಷಯ ಗೊತ್ತಾಗಿ ಜೆಡಿಎಸ್ ಬೆಂಬಲಿಸಿದರು ಎಂದಿದ್ದಾರೆ.

ನಮ್ಮ ಜೆಡಿಎಸ್ ಅಭ್ಯರ್ಥಿಗೆ ಈ ಉಪ ಚುನಾವಣೆಯಲ್ಲಿ ಸೋಲಾಗಿಲ್ಲ, ಪ್ರಬಲ ಸ್ಪರ್ಧೆಯೊಡ್ಡಿದ್ದರು. ಈಗ ಇನ್ನಷ್ಟು ಶಕ್ತಿ ಹೆಚ್ಚಿಸಿಕೊಂಡಿದ್ದಾರೆ ಎಂದು ದಿನೇಶ್ ಹೇಳಿದ್ದಾರೆ.

ಕೆ.ಆರ್. ಪೇಟೆಯಲ್ಲಿ ಬಿಜೆಪಿ ಗೆಲುವಿಗೆ ನಿಜವಾಗಿಯೂ ಕಾರಣವಾಗಿದ್ದೇನು?ಕೆ.ಆರ್. ಪೇಟೆಯಲ್ಲಿ ಬಿಜೆಪಿ ಗೆಲುವಿಗೆ ನಿಜವಾಗಿಯೂ ಕಾರಣವಾಗಿದ್ದೇನು?

ಜೆಡಿಎಸ್ ಶಾಸಕರಾಗಿದ್ದ ನಾರಾಯಣ ಗೌಡ ಅವರು ಜೆಡಿಎಸ್ ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಗೆಲುವು ದಾಖಲಿಸಿದ್ದರು. ಜೆಡಿಎಸ್ ತನ್ನ ಭದ್ರಕೋಟೆಯಲ್ಲಿಯೇ ನೆಲೆ ಕಳೆದುಕೊಂಡಿದ್ದರಿಂದ ಕಾಂಗ್ರೆಸ್ ಮೇಲೆ ಆರೋಪ ಮಾಡಲಾಗಿದೆ.

English summary
JDS Talluk Panchayat member Dinesh Rajahuli alleged that KR Pate Congress candidate KB Chandrasekhar had received Rs 15 crore from BJP in By-Election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X