ತಮಿಳುನಾಡಿಗೆ ಕಾವೇರಿ ನೀರು: ಮಂಡ್ಯದಲ್ಲಿ ಜಾನುವಾರುಗಳೊಂದಿಗೆ ಬಿಜೆಪಿ ಕಾರ್ಯಕರ್ತರ "ಚಡ್ಡಿ" ಮೆರವಣಿಗೆ

ಮಂಡ್ಯ, ಸೆಪ್ಟೆಂಬರ್‌, 25: ಕೃಷ್ಣರಾಜಸಾಗರ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಚಡ್ಡಿ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಜಮಾಯಿಸಿದ ಕಾರ್ಯಕರ್ತರು, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ರಾಸುಗಳ ಜೊತೆ ಚಡ್ಡಿ ಮೆರವಣಿಗೆ ಹೊರಟು, ಜೆ.ಸಿ. ವೃತ್ತ, ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದರು.

cauvery-dispute

ಯಾವುದೇ ಆದೇಶ ಇಲ್ಲದಿದ್ದರೂ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಿ ಕಾಂಗ್ರೆಸ್ ಸರ್ಕಾರ ದುಡುಕಿನ ನಿರ್ಧಾರ ಕೈಗೊಂಡಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಧೋರಣೆಯಿಂದ ಜಲಾಶಯಗಳಲ್ಲಿ ನೀರು ಬರಿದಾಗುತ್ತಿದೆ ಎಂದು ಆರೋಪಿಸಿದರು. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ, ಸುಪ್ರೀಂ ಕೋರ್ಟ್‌ನಲ್ಲಿ ವಾಸ್ತವ ಸ್ಥಿತಿ ವಿಚಾರ ಮುಂದಿಟ್ಟು ವಾದ ಮಂಡನೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಖುದ್ದು ಹಾಜರಾಗದೆ ವಿಡಿಯೋ ಕಾಸ್ಫರೆನ್ಸ್‌ ಮೂಲಕ ಮಾಹಿತಿ ನೀಡಿರುವುದು ಸರ್ಕಾರದ ವೈಫಲ್ಯತೆಯನ್ನು ಎತ್ತಿ ತೋರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೀರು ಬಿಡುವುದಿಲ್ಲ ಎಂದು ಹೇಳಿದ ಸರ್ಕಾರ ಇದೀಗ ತಮಿಳುನಾಡಿಗೆ ನೀರು ಹರಿಸುತ್ತಿದೆ. ಕಾವೇರಿ ಕಣಿವೆ ರೈತರಿಗೆ ಒಂದು ಬೆಳೆಗೂ ನೀರಿಲ್ಲ. ಆದರೆ ತಮಿಳುನಾಡಿಗೆ ಮೂರನೇ ಬೆಳೆಗೆ ಸಾಕಾಗುವಷ್ಟು ನೀರು ಬಿಡುತ್ತಿದೆ. ಈ ಮೂಲಕ ರೈತರಿಗೆ ನಿರಂತರ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ರೀತಿ ನೀರು ಹರಿಸುತ್ತಿದ್ದರೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಲಿದೆ. ಪರಿಸ್ಥಿತಿಯನ್ನು ಅರಿತು ತಕ್ಷಣ ನೀರು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ. ಉಮೇಶ್, ಮುಖಂಡರಾದ ಡಾ.ಸಿದ್ದರಾಮಯ್ಯ, ಸಚ್ಚಿದಾನಂದ, ಡಾ.ಇಂದ್ರೇಶ್, ಕೆ.ಕೃಷ್ಣಪ್ಪ, ಸಾದೊಳಲು ಸ್ವಾಮಿ, ಮಲ್ಲಿಕಾರ್ಜುನ್, ವಿವೇಕ್, ಸಿ.ಟಿ. ಮಂಜುನಾಥ್, ನಾಗಾನಂದ, ಎಂ.ಬಿ.ರಮೇಶ, ಅಶೋಕ್ ಜಯರಾಂ, ಕೃಷ್ಣ, ಅಂಕಪ್ಪ ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+