ಭುಗಿಲೆದ್ದ ಕಾವೇರಿ ವಿವಾದ: ಮಂಡ್ಯ ಜಿಲ್ಲಾ ಬಂದ್ ಗೆ ಕರೆ

Written By:
Subscribe to Oneindia Kannada

ಮಂಡ್ಯ, ಸೆಪ್ಟೆಂಬರ್, 05: ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡುತ್ತಿದ್ದಂತೆ ಮಂಡ್ಯ ಜಿಲ್ಲೆಯಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ.

ಸೆಪ್ಟೆಂಬರ್ 6 ರಂದು ಮಂಡ್ಯ ಜಿಲ್ಲಾ ಬಂದ್ ಗೆ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ ಮಾದೇಗೌಡ ಕರೆ ನೀಡಿದ್ದಾರೆ. ರೈತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ದೂರವಾಣಿಯಲ್ಲಿ ಜಿ ಮಾದೇಗೌಡ ನೀರಾವರಿ ಸಚಿವ ಎಂ ಬಿ ಪಾಟೀಲ್ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆದಿದೆ.[ಗಾಯದ ಮೇಲೆ ಬರೆ: ತಮಿಳುನಾಡಿಗೆ ನೀರು ಹರಿಸಿ ಎಂದ ಸುಪ್ರೀಂ]

karnataka

ಕೆಆರ್ ಎಸ್ ಗೆ ಮುತ್ತಿಗೆ ಹಾಕಲು ರೈತರು ಯತ್ನ ಮಾಡಿದ್ದು ಪೊಲೀಸರು ರೈತರನ್ನು ತಡೆದರು. ಮುಂದಿನ 10 ದಿನಗಳ ಕಾಲದಲ್ಲಿ ಪ್ರತಿ ದಿನ 15,000 ಕ್ಯೂಸೆಕ್ಸ್ [1 ಟಿಎಂಸಿ= 11 574 ಕ್ಯೂಸೆಕ್ಸ್] ನೀರನ್ನು ಕರ್ನಾಟಕ ತಮಿಳುನಾಡಿಗೆ ಬಿಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಸೋಮವಾರ ಬೆಳಗ್ಗೆ ಆದೇಶ ನೀಡಿತ್ತು.[ನಮಗೇ ನೀರಿಲ್ಲ, ಇನ್ನು ತಮಿಳ್ನಾಡಿಗೆ ಎಲ್ಲಿಂದ ಬಿಡೋಣ?]

ಪ್ರತಿದಿನ 15 ಸಾವಿರ ಕ್ಯೂಸೆಕ್ ನೀರನ್ನು ಕರ್ನಾಟಕ ಹರಿಸಬೇಕು. ಕಾವೇರಿ ಪಾತ್ರದಿಂದ 50.52 ಟಿಎಂಸಿ ನೀರು ನೀಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂದು ತಮಿಳುನಾಡು ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶ ನೀಡಿದ ನಂತರ ರೈತರು ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Mandya: After the Supreme court verdict regarding Cauvery water to Tamil Nadu Cauvery Hitarakshana Samiti leader G. Madegowda called for Mandya Bandh on 6 September. 2016.
Please Wait while comments are loading...