Darshan: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ
ಅಚ್ಚರಿಯ ಬೆಳವಣಿಗೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ. ಗುರುವಾರ ಮಂಡ್ಯ ಲೋಕಸಭಾ ಕ್ಷೇತ್ರದ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಪ್ರಚಾರ ಮಾಡುವುದು ಖಚಿತವಾಗಿದೆ.
ರಾಜ್ಯ ಮಾತ್ರವಲ್ಲದೇ ದೇಶದಲ್ಲೇ ಹಲವು ಕಾರಣಗಳಿಂದ ಮಂಡ್ಯ ಲೋಕಸಭಾ ಕ್ಷೇತ್ರ ಗಮನ ಸೆಳೆಯುತ್ತಿದೆ. ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ ಬಳಿಕ ಸುಮಲತಾ ಅವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಅಧಿಕೃತವಾಗಿ ಬಿಜೆಪಿಗೆ ಸೇರಿದ್ದ ಅವರು, ಮೈತ್ರಿ ಅಭ್ಯರ್ಥಿ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಪರ ಪ್ರಚಾರ ಮಾಡುವ ನಿರೀಕ್ಷೆ ಇತ್ತು.

ಸುಮಲತಾ ಅವರನ್ನು ಅಮ್ಮ ಎಂದೇ ಕರೆಯುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಸುಮಲತಾ ಅವರ ಏನು ಹೇಳಿದರೂ ಕೇಳುತ್ತೇನೆ ಎಂದು ಹೇಳಿದ್ದರು. ಆದರೆ ಈಗ ಅವರು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವುದು ಭಾರಿ ಕುತೂಹಲ ಕೆರಳಿಸಿದೆ.
ಸುಮಲತಾ ಅವರು ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ ಪರ ಪ್ರಚಾರ ಮಾಡಬೇಕು. ಅವರು ಸದ್ಯ ಎಚ್‌ಡಿಕೆ ಪರ ಪ್ರಚಾರ ಮಾಡುವ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಆದರೆ ಸುಮಲತ ಅವರ ಆಪ್ತರಾದ ದರ್ಶನ್ ಕಾಂಗ್ರೆಸ್ ಪರ ಪ್ರಚಾರ ಮಾಡಲು ಒಪ್ಪಿರುವುದು ಗೊಂದಲಕ್ಕೆ ಕಾರಣವಾಗಿದೆ.
ಸುಮಲತಾ ಪ್ರಚಾರ ಮಾಡ್ತಾರಾ?
ಎಚ್.ಡಿ. ಕುಮಾರಸ್ವಾಮಿ ಪರವಾಗಿ ಸುಮಲತಾ ಅವರು ಪ್ರಚಾರ ಮಾಡುತ್ತಾರ ಎನ್ನುವ ಕುತೂಹಲ ಇದೆ. ಬಿಜೆಪಿ ನಾಯಕರೇನೋ ಸುಮಲತಾ ಅವರು ಎಚ್‌ಡಿಕೆ ಹೇಳಿದ ದಿನ ಸುಮಲತಾ ಮಂಡ್ಯದಲ್ಲಿ ಪ್ರಚಾರ ಮಾಡುತ್ತಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಆಗಲಿ ಸುಮಲತಾ ಆಗಲಿ ಇನ್ನೂ ಹೇಳಿಕೆ ನೀಡಿಲ್ಲ.
ಕಳೆದ ಬಾರಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅವರ ಬೆನ್ನಿಗೆ ನಿಂತಿದ್ದೇ ನಟ ದರ್ಶನ್ ಮತ್ತು ಯಶ್. ಈ ಬಾರಿ ಯಶ್ ರಾಜಕೀಯದಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ. ಆದರೆ ದರ್ಶನ್ ಮಾತ್ರ ಸುಮಲತಾ ಮಂಡ್ಯದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಪಾಲ್ಗೊಂಡಿದ್ದರು. ಸುಮಲತಾ ಅವರು ಬಾವಿಗೆ ಬೀಳು ಅಂದರೂ ಬೀಳುತ್ತೇನೆ ಎನ್ನುವ ಮೂಲಕ ಅವರಿಗೆ ಬೆಂಬಲ ಕೊಟ್ಟಿದ್ದರು.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೂಡ ದರ್ಶನ್ ಯಾವುದೇ ಪಕ್ಷಕ್ಕೂ ಅಂಟಿಕೊಳ್ಳದೆ ತಮ್ಮ ಆಪ್ತರ ಪರವಾಗಿ ಪ್ರಚಾರ ಮಾಡಿದ್ದರು.












Click it and Unblock the Notifications