ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಬೆಂಬಲ ವಿಚಾರ: ಕಾಂಗ್ರೆಸ್ ಒಳಗೇ ಕಿತ್ತಾಟ
ಮಂಡ್ಯ, ಏ.10: ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಬೆಂಬಲಿಸುವ ವಿಚಾರವಾಗಿ ಕಾಂಗ್ರೆಸ್ ಪಕ್ಷದೊಳಗೇ ಕಿತ್ತಾಟ ನಡೆದಿದೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರೂ ಕಾಂಗ್ರೆಸ್ ಮುಖಂಡರನ್ನೇ ತರಾಟೆಗೆ ತೆಗೆದುಕೊಂಡಿದ್ದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಎಲ್ಲರಿಗೂ ತಿಳಿದಿರುವ ಹಾಗೆ ಮಂಡ್ಯದಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಇನ್ನೊಂದೆಡೆ ನಟ, ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಸ್ವತಂತ್ರವಾಗಿ ಸ್ಪರ್ಧೆಗಿಳಿದಿದ್ದಾರೆ.
ಇದರ ಮಧ್ಯೆ ಬಿಜೆಪಿ ಬೇಷರತ್ ಬೆಂಬಲ ನೀಡಿದ್ದರೆ ಕಾಂಗ್ರೆಸ್ ಕಾರ್ಯಕರ್ತರೂ ಕೂಡ ಕಾಂಗ್ರೆಸ್ ಬಾವುಟ ಹಿಡಿದು ಸುಮಲತಾ ಪರ ಪ್ರಚಾರಕ್ಕಿಳಿದಿದ್ದಾರೆ. ನಿಖಿಲ್ ಕುಮಾರಸ್ವಾಮಿಯವರನ್ನು ಗೆಲ್ಲಿಸಲು ಮೈತ್ರಿ ಪಕ್ಷ ಪಣತೊಟ್ಟಿದೆ ಆದರೆ ಕಾಂಗ್ರೆಸ್‌ನ ಒಳಗೇ ಒಳಜಗಳ ಮುಂದುವರೆದಿದೆ.

ಮಂಗಳವಾರ ಮಂಡ್ಯದಲ್ಲಿ ಕೇಂದ್ರ ಮಾಜಿ ಸಚಿವ ರೆಹಮಾನ್ ಖಾನ್ ಮನೆಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ, ನಾಗಮಂಗಲ ಶಾಸಕ ಸುರೇಶ್ ಗೌಡ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಟಿ ಶ್ರೀಕಂಠೇಗೌಡರನ್ನು ಕಾರ್ಯಕರ್ತರು ತರಾಟೆ ತಗೆದುಕೊಂಡರು.
ಮಂಡ್ಯ ಮನ್ ಮುಲ್‍ನಲ್ಲಿ ಕರೆಯಲಾಗಿದ್ದ ವಿವಿಧ ಹುದ್ದೆಗಳ ನೇಮಕಾತಿ ಮಾಡಲು ಸಚಿವರಾದ ತಮ್ಮಣ್ಣ, ಪುಟ್ಟರಾಜು ಒಪ್ಪಿಕೊಂಡಿದ್ದರು. ನೀವು ಮಧ್ಯಪ್ರವೇಶ ಮಾಡಿ ತಡೆದಿದ್ದೀರಿ ಎಂದು ಆರೋಪಿಸಿದರು.
ಇದೇ ವೇಳೆ ಹಾಜರಿದ್ದ ಕೆಆರ್ ಪೇಟೆ ಕಾಂಗ್ರೆಸ್ ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಉಪ ಚುನಾವಣೆಯಲ್ಲಿ ಶಿವರಾಮೇಗೌಡರ ನೇಮಕಾತಿಗೆ ಅಡ್ಡಿಪಡಿಸಿದ್ದೇ ನೀವು ಎಂದು ಹೇಳಿದರು.
ಈ ವೇಳೆ ಮಧ್ಯ ಪ್ರವೇಶಿಸಿ ಕೆ.ಟಿ ಶ್ರೀಕಂಠೇಗೌಡ ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದಿದಕ್ಕೆ ಆಗ ಸುಮ್ನೆ ಇರು ಶ್ರೀಕಂಠೇಗೌಡ ಹಿಂದೊಂದು ಮುಂದೊಂದು ಮಾತನಾಡಬೇಡಿ.
ನೀವೆಷ್ಟು ರಾಜಕೀಯ ಮಾಡುತ್ತೀರೋ ಹಾಗೆ ನಾವು ಮಾಡುತ್ತೇವೆ. ನೀವೆಲ್ಲೋ ಹತ್ತು ಸಾರಿ ನಾಲ್ಕೈದು ಸಾರಿ ರಾಜಕೀಯ ಮಾಡುತ್ತಿರಬಹುದು. ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ದಿನಗಳಿಂದ ರಾಜಕೀಯ ಮಾಡುತ್ತಿದ್ದೇವೆ ಎಂದು ಹೇಳುತ್ತಾ ತರಾಟೆಗೆ ತೆಗೆದುಕೊಂಡರು.












Click it and Unblock the Notifications