ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾನಗಲ್ ಫಲಿತಾಂಶ: ಶ್ರೀನಿವಾಸ್ ಮಾನೆ ಗೆಲುವು, ಕಾಂಗ್ರೆಸ್ ಗೆಲುವಲ್ಲ; ಸಿಎಂ ಬೊಮ್ಮಾಯಿ

|
Google Oneindia Kannada News

ಮಂಡ್ಯ, ನವೆಂಬರ್ 2: 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಒಂದೂವರೆ ವರ್ಷ ಇರುವಾಗಲೇ ರಾಜ್ಯದ ಜನರ ಗಮನ ಸೆಳೆದಿದ್ದ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ.

ತೀವ್ರ ಕುತೂಹಲ ಕೆರಳಿಸಿದ್ದ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿಯ ರಮೇಶ್ ಭೂಸನೂರಗೆ 93,865 ಮತ, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿಗೆ 62,680 ಮತ ಹಾಗೂ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿಗೆ 4,353 ಮತ ದೊರೆತಿದ್ದು, 31,185 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗೆ ಜಯ ಲಭಿಸಿದೆ.

Mandya: CM Basavaraj Bommai Reaction After By Election Results

ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಅಗ್ನಿಪರೀಕ್ಷೆ ಎಂದೇ ಕರೆಯಿಸಿಕೊಂಡಿದ್ದ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿಗೆ ಮುಖಭಂಗವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಜಯ ಗಳಿಸಿದ್ದಾರೆ. ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರವನ್ನು ಸ್ವತಃ ಮುಖ್ಯಮಂತ್ರಿಯೇ ಮುನ್ನಡೆಸಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಗೆ 87,113 ಮತಗಳು, ಬಿಜೆಪಿಯ ಶಿವರಾಜ್ ಸಜ್ಜನರಗೆ 79,515 ಮತಗಳು ಹಾಗೂ ಜೆಡಿಎಸ್​ ಅಭ್ಯರ್ಥಿ ನಿಯಾಜ್ ಶೇಖ್​ಗೆ 921 ಮತಗಳು ಸಿಕ್ಕಿವೆ. ಕಾಂಗ್ರೆಸ್​ನ ಶ್ರೀನಿವಾಸ ಮಾನೆಗೆ 7,598 ಮತಗಳ ಅಂತದಿಂದ ಜಯ ಸಿಕ್ಕಿದೆ.

ಉಪ ಚುನಾವಣೆಯ ಫಲಿತಾಂಶ ಕುರಿತು ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯದಲ್ಲಿ ಕಾವೇರಿಗೆ ಬಾಗಿನ ಅರ್ಪಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಹಾನಗಲ್​ನಲ್ಲಿ ನಿರೀಕ್ಷಿಸಿದಷ್ಟು ಮತಗಳು ಬಂದಿಲ್ಲ. ಹೀಗಾಗಿಯೇ ನಮಗೆ ಹಿನ್ನಡೆ ಆಗಿದೆ. ಸಿ.ಎಂ. ಉದಾಸಿಗೆ ಸಲ್ಲಬೇಕಿದ್ದ ಮತ ಪಡೆಯಲು ಆಗಿಲ್ಲ," ಎಂದು ಸೋಲನ್ನು ಒಪ್ಪಿಕೊಂಡರು.

Mandya: CM Basavaraj Bommai Reaction After By Election Results

"ನಮ್ಮ ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರು ಕಷ್ಟಪಟ್ಟು ಕೆಲಸ ಮಾಡಿದ್ದರು. ಉಪ ಚುನಾವಣೆಯಲ್ಲಿ ಕೆಲಸ ಮಾಡಿದವರಿಗೆ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್​ ಅಭ್ಯರ್ಥಿ ಹಾನಗಲ್ ಕ್ಷೇತ್ರದಲ್ಲಿ ಕಳೆದ 2-3 ವರ್ಷಗಳಿಂದ ಕೆಲಸ ಮಾಡಿದ್ದಾರೆ. ಹೀಗಾಗಿ ಕ್ಷೇತ್ರದ ಜನತೆ ಕಾಂಗ್ರೆಸ್​ನ ಶ್ರೀನಿವಾಸ ಮಾನೆ ಕೈಹಿಡಿದಿದ್ದಾರೆ," ಎಂದು ಫಲಿತಾಂಶ ಕುರಿತು ವಿಶ್ಲೇಷಿಸಿದರು.

"ಉಪ ಚುನಾವಣೆ ನಡೆದಿದ್ದ ರಾಜ್ಯದ ಎರಡು ಕ್ಷೇತ್ರಗಳ ಪೈಕಿ ಒಂದರಲ್ಲಿ ಗೆದ್ದು, ಮತ್ತೊಂದರಲ್ಲಿ ಸೋತಿದ್ದೇವೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗಲೂ ಇದೇ ರೀತಿ ಆಗಿತ್ತು. ಉಪ ಚುನಾವಣೆ ಫಲಿತಾಂಶವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಮುಂದೆ ಎಲ್ಲಾ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ. ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಎಲ್ಲ ತಪ್ಪುಗಳನ್ನು ಸರಿಪಡಿಸಿಕೊಂಡು ಮುನ್ನಡೆಯುತ್ತೇವೆ," ಎಂದು ತಿಳಿಸಿದರು.

Recommended Video

ಪುನೀತ್ ಗೆ ಅವಮಾನ ಮಾಡಿದವನಿಗೆ ಹಿಗ್ಗಾಮುಗ್ಗ ಜಾಡಿಸಿದ ಸುದೀಪ್ ಮಗಳು | Oneindia Kannada

ಇನ್ನು ಸಿಂದಗಿ ಉಪ ಚುನಾವಣೆ ಫಲಿತಾಂಶದಲ್ಲಿ ಹಣದ ಅಬ್ಬರ ಕೆಲಸ ಮಾಡಿದೆ ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, "ಚುನಾವಣೆಯಲ್ಲಿ ಸೋತವರ ಸ್ಟ್ಯಾಂಡರ್ಡ್ ಫಾರ್ಮೆಟ್ ಹೇಳಿಕೆಯಿದು. ಇದು ಹಣ ಮತ್ತು ತೋಳ್ಬಲದಿಂದ ಸಿಕ್ಕ ಗೆಲುವು ಎಂದು ವಿರೋಧ ಪಕ್ಷದವರು ಹೇಳುತ್ತಾರೆ. ಜನ ಬೆಂಬಲ ಇಲ್ಲದೆ ಯಾವುದೇ ಚುನಾವಣೆ ಗೆಲ್ಲುವುದಕ್ಕೆ ಆಗುವುದಿಲ್ಲ. ಚುನಾವಣೆಯಲ್ಲಿ ಬೆಂಬಲ ಕೇಳಿದ ಎಲ್ಲರೂ ಬೆಂಬಲ ನೀಡಿದ್ದಾರೆ," ಎಂದು ವಿವರಿಸಿದರು.

English summary
Karnataka By Elections Results 2021: BJP candidate Win in Sindagi assembly constituency, Congress candidate Win in Hanagal constituency. Jds likely to loose deposit in both the constituencies. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X