ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಶಿವಮೊಗ್ಗದ ಹರ್ಷ ಹತ್ಯೆ ಆರೋಪಿಗಳ ಸುಳಿವು ಲಭ್ಯ

|
Google Oneindia Kannada News

ಬೆಂಗಳೂರು, ಫೆಬ್ರವರಿ 21: ಶಿವಮೊಗ್ಗದಲ್ಲಿ ಭಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸುಳಿವುಗಳನ್ನು ಸಿಕ್ಕಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹರ್ಷ ಕೊಲೆಗೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ಆರಂಭಿಸಲಾಗಿದೆ. ಪೊಲೀಸರ ತನಿಖೆ ವೇಳೆ ಸಾಕಷ್ಟು ಸುಳಿವುಗಳನ್ನು ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದಿದ್ದಾರೆ.

 ಭಜರಂಗ ದಳ ಕಾರ್ಯಕರ್ತನ ಹತ್ಯೆ; ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ ಭಜರಂಗ ದಳ ಕಾರ್ಯಕರ್ತನ ಹತ್ಯೆ; ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ

ಶಿವಮೊಗ್ಗದ ಘಟನೆ ಬೆನ್ನಲ್ಲೇ ಮುಂದೆ ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಆರೋಪಿಗಳು ಯಾರೇ ಆಗಿದ್ದರೂ, ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುತ್ತದೆ. ರಾಜ್ಯದಲ್ಲಿ ಶಾಂತಿ ಕಾಪಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.

Shivamogga Bajrang Dal Activist Harsha Murder Case: Soon we will arrest murderers says CM Basavaraj Bommai
ಸಿದ್ದರಾಮಯ್ಯ ತರ್ಕ ಬಿಟ್ಟು ಮಾತನಾಡುತ್ತಾರೆ:

ಶಿವಮೊಗ್ಗದಲ್ಲಿ ನಡೆದ ಹತ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು. ಸಿದ್ದರಾಮಯ್ಯನವರ ಮಾತು ಯಾವಾಗಲೂ ತರ್ಕಬದ್ಧವಾಗಿ ಇರುವುದಿಲ್ಲ. ಅವರು ತರ್ಕವನ್ನು ಬಿಟ್ಟು ಮಾತನಾಡುತ್ತಾರೆ ಎಂದರು.

ಏನಿದು ಶಿವಮೊಗ್ಗದಲ್ಲಿ ನಡೆದ ಹರ್ಷ ಹತ್ಯೆ?:

ಶಿವಮೊಗ್ಗ ನಗರದ ಎನ್.ಟಿ. ರಸ್ತೆಯ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ರಾತ್ರಿ ಯುವಕರ ಗುಂಪೊಂದು ಭಜರಂಗ ದಳ ಕಾರ್ಯಕರ್ತ ಹರ್ಷನ ಮೇಲೆ ಏಕಾಏಕಿ ದಾಳಿ ನಡೆಸಿದೆ. ಮಾರಕಾಸ್ತ್ರಗಳಿಂದ ನಡೆಸಿದ ಹಲ್ಲೆಯಿಂದಾಗಿ ಹೊಟ್ಟೆ, ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದ ಹರ್ಷನನ್ನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ 22 ವರ್ಷದ ಹರ್ಷ ಮೃತಪಟ್ಟಿದ್ದಾನೆ.

 ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ; ಓರ್ವ ಆರೋಪಿ ವಶಕ್ಕೆ, ನಾಲ್ವರಿಗಾಗಿ ಶೋಧ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ; ಓರ್ವ ಆರೋಪಿ ವಶಕ್ಕೆ, ನಾಲ್ವರಿಗಾಗಿ ಶೋಧ

ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣ:

ಕಳೆದ ಐದು ವರ್ಷಗಳಿಂದ ಭಜರಂಗ ದಳದಲ್ಲಿ ಗುರುತಿಸಿಕೊಂಡಿದ್ದ ಹರ್ಷ ಹತ್ಯೆಗೆ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ರಾತ್ರೋರಾತ್ರಿ ಪೂರ್ವ ವಲಯದ ಐಜಿಪಿ ತ್ಯಾಗರಾಜನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದಾದ್ಯಂತ ಅಂಗಡಿ, ಹೋಟೆಲ್ ಬಂದ್ ಮಾಡಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಫೆಬ್ರವರಿ 23 ರಾತ್ರಿ 9 ಗಂಟೆವರೆಗೂ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಈ ಅವಧಿಯಲ್ಲಿ ಜನರು ಗುಂಪುಗೂಡಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

English summary
Shivamogga Bajrang Dal Activist Harsha Murder Case: Soon we will arrest murderers says CM Basavaraj Bommai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X