ಮೇಲುಕೋಟೆ ವೈರಮುಡಿ ಉತ್ಸವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿ
ಮಂಡ್ಯ, ಮಾ.15: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡ್ಯ ಜಿಲ್ಲೆಯ ಮೇಲುಕೋಟೆಯ ಚೆಲುವ ನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ವೈರಮುಡಿ ಉತ್ಸವದಲ್ಲಿ ಭಾಗಿಯಾಗಿದ್ದರು.
ಇತಿಹಾಸ ಪ್ರಸಿದ್ಧ ಮೇಲುಕೋಟೆಯ ಶ್ರೀ ಚಲುವರಾಯಸ್ವಾಮಿ ವೈರಮುಡಿ ಉತ್ಸವವನ್ನು ಇದೇ ಮಾ.9 ರಿಂದ ಆರಂಭಗೊಂಡಿದ್ದು, 21 ರ ವರೆಗೆ ಅದ್ದೂರಿಯಾಗಿ ನಡೆಯುತ್ತಿದೆ. ಪ್ರತಿದಿನ ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ಸಚಿವ ಕೆ. ನಾರಾಯಣಸ್ವಾಮಿ ಸಹಿತ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು. ಚಲುವನಾರಾಯಣಸ್ವಾಮಿ ದರ್ಶನ ಪಡೆದು, ಪುಷ್ಪಾರ್ಷನೆ ಮಾಡಿದರು.

ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಚೆಲುವರಾಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುವ ಭರವಸೆ ನೀಡಿದರು. ಅಲ್ಲದೆ, ಇಲ್ಲಿನ ಪ್ರವಾಸೋದ್ಯಮ ಅಭಿವೃದ್ಧಿಯ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಹಿಜಾಬ್ ತೀರ್ಪು: ಬಿಗಿ ಬಂದೋಬಸ್ತ್:
ಮಂಗಳವಾರ (ಮಾ.15) ಹಿಜಾಬ್ ತೀರ್ಪು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳಬೇಕು, ಎಲ್ಲಿಯೂ ಗಲಾಟೆ ಆಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.












Click it and Unblock the Notifications