Get Updates
Get notified of breaking news, exclusive insights, and must-see stories!

ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರುತ್ತಿದ್ದೇವೆ. ರಾಜ್ಯದಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ಅಗತ್ಯವಾದ, ಆಕರ್ಷಕವಾದ ನೂರಾರು ಸ್ಥಳಗಳಿವೆ. ಅವುಗಳ ಬೆಳವಣಿಗೆಗೆ ಎಷ್ಟು ಬೇಕಾದರೂ ಹಣ ಕೊಡಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇಂದು ನಡೆದ ಗಗನಚುಕ್ಕಿ ಜಲಪಾತೋತ್ಸವ-2024ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದ್ದಾರೆ. ದೇಶಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯ ಕರ್ನಾಟಕ. ಪ್ರವಾಸೋದ್ಯಮದ ಬೆಳವಣಿಗೆಗೆ ಪ್ರಕೃತಿದತ್ತವಾದ ಪೂರಕ ವಾತಾವರಣವಿದೆ. ಪ್ರವಾಸೋದ್ಯಮ ಅಭಿವೃದ್ಧಿಯಿಂದ ರಾಜ್ಯದ ಆರ್ಥಿಕ ಪ್ರಗತಿಯೂ ಆಗುತ್ತದೆ ಎಂದು ಹೇಳಿದ್ದಾರೆ.

CM Siddaramaiah Inaugurated Gaganachukki Jalapatotsava-2024 In Mandya

ಗಗನಚುಕ್ಕಿ-ಬರಚುಕ್ಕಿ ಜಲಪಾತಗಳನ್ನು ಪ್ರವಾಸೋದ್ಯಮದ ದೃಷ್ಟಿಯಿಂದ ಮತ್ತಷ್ಟು ಅಭಿವೃದ್ಧಿಗೊಳಿಸಲಾಗುವುದು‌. ಅಗತ್ಯವಿದ್ದಷ್ಟು ಹಣ ನೀಡಿ ಪ್ರವಾಸಿಗರಿಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ರಾಜ್ಯದ ಜನರ ಆರ್ಥಿಕ ಪ್ರಗತಿ, ಸಾಮಾಜಿಕ ನ್ಯಾಯ ಮತ್ತು ನಾಡಿನ ಸಮಗ್ರ ಪ್ರಗತಿ ವಿಚಾರದಲ್ಲಿ ರಾಜಿಯೇ ಇಲ್ಲ. ರಾಜ್ಯದ ಎಲ್ಲಾ ಜಾತಿ, ಎಲ್ಲಾ ವರ್ಗ, ಎಲ್ಲಾ ಧರ್ಮದ ಜನರಿಗೆ ಆರ್ಥಿಕ ಶಕ್ತಿ ಕೊಡುವುದು ನಮ್ಮ ಗುರಿಯಾಗಿದೆ. ಐದೂ ಯೋಜನೆಗಳ ಲಾಭವನ್ನು ಎಲ್ಲಾ ಜಾತಿಯ ಬಡವರು ಮತ್ತು ಮಧ್ಯಮ ವರ್ಗದವರಿಗೆ ತಲುಪಿಸಿದ್ದು ಈ ಸಿದ್ದರಾಮಯ್ಯ ಎಂದಿದ್ದಾರೆ.

CM Siddaramaiah Inaugurated Gaganachukki Jalapatotsava-2024 In Mandya

ನಮ್ಮ ಗ್ಯಾರಂಟಿಗಳನ್ನು ಟೀಕೆ ಮಾಡುತ್ತಾ ಇವುಗಳನ್ನು ಸ್ಥಗಿತಗೊಳಿಸಲು ಪಿತೂರಿ ಮಾಡುತ್ತಿರುವ ಬಿಜೆಪಿ, ಜೆಡಿಎಸ್ ಯಾವತ್ತೂ ಜನಪರ ಯೋಜನೆಗಳನ್ನು ಜಾರಿ ಮಾಡಲಿಲ್ಲ. ಆದ್ದರಿಂದ ಸುಳ್ಳಿನ‌ ಸರದಾರರ ಪಿತೂರಿ, ಷಡ್ಯಂತ್ರಗಳಿಗೆ ತಲೆ ಒತ್ತೆ ಇಡಬೇಡಿ ಎಂದು ಮನವಿ ಮಾಡಿದ್ದಾರೆ.

ವಿಸಿ ನಾಲೆಯ ಕೊನೆ ಭಾಗಕ್ಕೆ ನೀರು ತಲುಪಿಸಲು ಕೂಡಲೇ ಪ್ರಸ್ತಾವನೆ ಸಲ್ಲಿಸಲು ಕಾವೇರಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರಾಜ್ಯ ಸರ್ಕಾರದ ಗ್ಯಾರಂಟಿಗಳನ್ನು ನಿಲ್ಲಿಸಲು ಪಿತೂರಿ ಮಾಡುತ್ತಿರುವವರು ಕೇಂದ್ರದಿಂದ ಹಣ ತಂದು ಮಂಡ್ಯದ ಅಭಿವೃದ್ಧಿಗೆ ಕೆಲಸ ಮಾತ್ರ ಮಾಡುತ್ತಿಲ್ಲ. ಆದ್ದರಿಂದ ಕೇವಲ ಮಾತನಾಡಿಕೊಂಡು ಕಾಲ ಕಳೆಯುವವರಿಗೆ ರೈತರು, ಹಿಂದುಳಿದವರು, ದಲಿತರ ಪರವಾದ ಕಾಳಜಿಯೇ ಇಲ್ಲ ಎನ್ನುವುದು ಸಾಬೀತಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಇಲ್ಲಿನ ಶಾಸಕರು ಕೇಳಿದಾಗೆಲ್ಲ ಅಗತ್ಯವಿದ್ದಷ್ಟು ಅನುದಾನ ನೀಡುತ್ತಲೇ ಇದ್ದೇವೆ. ಅಧಿಕಾರ ಇದ್ದಾಗ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ನಯಾಪೈಸೆ ಕೊಡದ ಸುಳ್ಳಿನ‌ ಸರದಾರರ ಪಿತೂರಿ, ಷಡ್ಯಂತ್ರಗಳಿಗೆ ತಲೆ ಒತ್ತೆ ಇಡಬೇಡಿ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೃಷಿ ಇಲಾಖೆ, ನೀರಾವರಿ ಇಲಾಖೆ, ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಹಿಂದುಳಿದ ವರ್ಗಗಳ ಇಲಾಖೆ, ಲೋಕೋಪಯೋಗಿ ಇಲಾಖೆಯ ಎಲ್ಲಾ ಕೆಲಸಗಳೂ ನಡೆಯುತ್ತಿವೆ. ಯಾವುದೇ ಇಲಾಖೆಯ ಒಂದೂ ಕೆಲಸವೂ ಸ್ಥಗಿತಗೊಂಡಿಲ್ಲ. ಆದ್ದರಿಂದ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಸುಳ್ಳಿನ ಸರದಾರರ ಮಾತಿಗೆ ಬೆಲೆ ಕೊಡಬೇಡಿ ಎಂದಿದ್ದಾರೆ.

ಪೂರಿಗಾಲಿ ಏತನೀರಾವರಿ ಯೋಜನೆಯನ್ನು ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗಲೇ ಆರಂಭಿಸಿದ್ದೆ. ಸದ್ಯದಲ್ಲೇ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಯೋಜನೆಯನ್ನು ನಾನೇ ಉದ್ಘಾಟಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+